Advertisement
ರಾಜ್ಯಾದ್ಯಂತ ರಾತ್ರಿ 9ರಿಂದ ಬೆಳಗ್ಗೆ 6 ರವರೆಗೆ ರಾತ್ರಿ ಕರ್ಫ್ಯೂ ವಿ ಧಿಸಿ ಸರ್ಕಾರ ಆದೇಶ ಹೊರಡಿಸಿದ್ದು ಇಂದಿನಿಂದ ಆರಂಭವಾಗಿ ಮೇ 4ರವರೆಗೆ ಜಾರಿಯಲ್ಲಿರಲಿದೆ. ಈ ಅವ ಧಿಯಲ್ಲಿ ವಾರಂತ್ಯದಲ್ಲಿ ಶನಿವಾರ ಮತ್ತು ಭಾನುವಾರದಂದು ಇಡೀ ದಿನ ಕರ್ಫ್ಯೂ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಅದರಂತೆ ಈ ಸಂದರ್ಭದಲ್ಲಿ ಯಾವ್ಯಾವ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡಲಾಗಿದೆಯೋ ಅವುಗಳನ್ನು ಮಾತ್ರ ಷರತ್ತುಬದ್ಧ ಅನುಮತಿಯೊಂದಿಗೆ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಸೂಚನೆ ನೀಡಿದ ಡಿಸಿ ಮಾಲಪಾಟಿ ಅವರು ನೈಟ್ ಕರ್ಫ್ಯೂ ಸಂದರ್ಭದಲ್ಲಿ ರಾತ್ರಿ 8ಕ್ಕೆ ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಅನಗತ್ಯ ಸಂಚಾರ ವ್ಯವಸ್ಥೆ ಬಂದ್ ಆಗುವಂತೆ ನೋಡಿಕೊಳ್ಳಬೇಕು ಎಂದರು.
Related Articles
Advertisement
ತೆರೆದ ಜಾಗದಲ್ಲಿ ಒಪನ್ ಮಾರುಕಟ್ಟೆ: ಕಳೆದ ಬಾರಿಯಂತೆ ಈ ಬಾರಿಯೂ ಮಾರುಕಟ್ಟೆಗಳಲ್ಲಿ ಜನಸಂದಣಿಯಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧೆಡೆ ತೆರೆದ ಜಾಗಗಳಲ್ಲಿ ಒಪನ್ ಮಾರುಕಟ್ಟೆಗಳನ್ನು ಆರಂಭಿಸಲು ಅಗತ್ಯ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಸೈದುಲು ಅಡಾವತ್ ಮಾತನಾಡಿ, ಬಳ್ಳಾರಿಯು ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಗಡಿರಾಜ್ಯವಾಗಿರುವುದರಿಂದ ಸಿರಗುಪ್ಪ ಮತ್ತು ಬಳ್ಳಾರಿ ತಾಲೂಕಿನ ಗಡಿ ಪ್ರದೇಶಗಳ ಬಳಿ ಈಗಾಗಲೇ ಚೆಕ್‌ಪೋಸ್ಟ್ ಆರಂಭಿಸಲಾಗಿದೆ. ಅಗತ್ಯ ಸೇವೆ ಸಂಚಾರ ಹೊರತುಪಡಿಸಿ ಅನಗತ್ಯ ಓಡಾಟಕ್ಕೆ ಬಂದವರನ್ನು ನಿಯಂತ್ರಿಸುವ ಕೆಲಸವಾಗಬೇಕು. ಯಾವುದೇ ರೀತಿಯ ದೂರಿಗೆ ಅಸ್ಪದ ನೀಡಬಾರದು ಎಂದು ಸೂಚನೆ ನೀಡಿದರು.
ಸರ್ಕಾರಿ ಸಿಬ್ಬಂದಿಗಳಲ್ಲಿ ಶೇ.50ರಷ್ಟು ಸಿಬ್ಬಂದಿಗಳನ್ನು ಕೋವಿಡ್ ಕರ್ತವ್ಯಕ್ಕಾಗಿ ಬಳಸಿಕೊಳ್ಳಲು ನಿರ್ಧರಿಸಲಾಗಿದ್ದು, ಯಾರು ಕೂಡ ಈ ಕರ್ತವ್ಯಕ್ಕೆ ಬರುವುದಕ್ಕೆ ನಿರಾಕರಿಸುವಂತಿಲ್ಲ. ಮಾಸ್ಕ್ ಧರಿಸದವರಿಗೆ ದಂಡ ವಿ ಧಿಸುವ ಕಾರ್ಯಾಚರಣೆ ಮುಂದುವರಿಸಿ ಎಂದು ಸೂಚನೆ ನೀಡಿದ ಎಸ್ಪಿ ಸೈದುಲು ಅಡಾವತ್ ಅವರು ಸರ್ಕಾರ ಹೊರಡಿಸಿರುವ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಕೆಲಸ ತಾಲೂಕು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಇಂದಿನಿಂದಲೇ ಆರಂಭವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ, ಅಪರ ಜಿಲ್ಲಾ ಧಿಕಾರಿ ಪಿ.ಎಸ್.ಮಂಜುನಾಥ, ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹೊÉàಟ್, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ ಸೇರಿದಂತೆ ಪೊಲೀಸ್ ಇಲಾಖೆ ಅಧಿ ಕಾರಿಗಳು ಹಾಗೂ ವಿವಿಧ ಇಲಾಖೆಗಳ ಅ ಧಿಕಾರಿಗಳು ಇದ್ದರು.