Advertisement

ಮಾರ್ಗಸೂಚಿ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಸಿಎಂ ಸೂಚನೆ

10:37 PM Apr 30, 2021 | Team Udayavani |

ಬಳ್ಳಾರಿ: ರಾಜ್ಯದಲ್ಲಿ ಕೋವಿಡ್‌ ಪ್ರಸರಣವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೇ 12ರವರೆಗೆ ಹೊರಡಿಸಲಾಗಿರುವ ನಿರ್ಬಂಧಗಳನ್ನು ಒಳಗೊಂಡ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಕೆಲಸವನ್ನು ಜಿಲ್ಲಾ ಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿಗಳು ಮಾಡಬೇಕು ಎಂದು ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

Advertisement

ಕೋವಿಡ್‌ಗೆ ಸಂಬಂಧಿ ಸಿದಂತೆ ಎಲ್ಲ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಧಿಕಾರಿಗಳೊಂದಿಗೆ ಗುರುವಾರ ನಡೆದ ವಿಡಿಯೋ ಕಾನ್ಪರೆನ್ಸ್‌ ಸಭೆಯಲ್ಲಿ ಅವರು ಸೂಚನೆ ನೀಡಿದರು. ಈಗಾಗಲೇ ಹೊರಡಿಸಲಾಗಿರುವ ನಿಬಂಧದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಅಂದಾಗ ಮಾತ್ರ ಕೋವಿಡ್‌ ಕಡಿಮೆಯಾಗಲು ಸಾಧ್ಯ. ಇಲ್ಲದಿದ್ದಲ್ಲಿ ಇನ್ನೂ 8-10 ದಿನ ಲಾಕ್‌ಡೌನ್‌ ಮಾಡಬೇಕಾಗುತ್ತದೆ. ಇದರಿಂದ ಜನರಿಗೆ ಅನಗತ್ಯ ತೊಂದರೆಯಾಗಲಿದ್ದು, ಇದಕ್ಕೆ ಆಸ್ಪದ ಮಾಡಿಕೊಡಬೇಡಬಾರದು ಎಂದು ಅವರು ಹೇಳಿದರು.

ಕೋವಿಡ್‌ ನಿಯಂತ್ರಿಸುವ ನಿಟ್ಟಿನಲ್ಲಿ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೋ ಅವುಗಳನ್ನು ಕೈಗೊಳ್ಳಬೇಕು. ಸರ್ಕಾರದಿಂದ ತಮಗೆ ಯಾವೆಲ್ಲವುಗಳ ಅಗತ್ಯವಿದೆಯೋ ಅವುಗಳನ್ನೆಲ್ಲ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಅನವಶ್ಯಕ ರೆಮಿ ಡೆಸಿವಿರ್‌ ಬಳಕೆ ಸಲ್ಲ: ಕೆಲವು ಜಿಲ್ಲೆಗಳಲ್ಲಿ ಅನವಶ್ಯಕವಾಗಿ ರೆಮೆ ಡೆಸಿವಿರ್‌ ಲಸಿಕೆಗಳನ್ನು ರೋಗಿಗಳಿಗೆ ನೀಡುತ್ತಿರುವುದು ಕಂಡುಬಂದಿದ್ದು, ಇದು ಸರಿಯಾದ ಕ್ರಮವಲ್ಲ. ಅವಶ್ಯಕತೆ ಇರುವವರಿಗೆ ಮಾತ್ರ ನೀಡಿ. ಖಾಸಗಿ ವೈದ್ಯರಿಗೆ ವಿನಾಕಾರಣ ರೆಮೆxಸಿವಿರ್‌ ಇಂಜೆಕ್ಷನ್‌ ಬೇಡಿಕೆ ಇರಿಸದಂತೆ ಸಭೆ ನಡೆಸಿ ಸೂಚನೆ ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಡಿಸಿಗಳಿಗೆ ಸೂಚಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್‌ ಮಾತನಾಡಿ, 14 ದಿನಗಳ ಕರ್ಫ್ಯೂ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಬಂದಿದ್ದು, ಅವರನ್ನು ಪತ್ತೆಹಚ್ಚಿ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆ ನೀಡುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಗ್ರಾಮೀಣ ಮಟ್ಟದಲ್ಲಿರುವ ಕೋವಿಡ್‌ ಟಾಸ್ಕ್ಫೋಸ್‌ ಗಳನ್ನು ಬಲಪಡಿಸಬೇಕು. ನಿರ್ಬಂಧ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದರು.

Advertisement

ಬಳ್ಳಾರಿ ಜಿಲ್ಲಾ ಧಿಕಾರಿ ಪವನಕುಮಾರ್‌ ಮಾಲಪಾಟಿ ಅವರು ಜಿಲ್ಲೆಯ ಕೋವಿಡ್‌ ಸ್ಥಿತಿಗತಿ, ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ| ಸಿ.ಎನ್‌. ಅಶ್ವತ್‌ ನಾರಾಯಣ, ಕಂದಾಯ ಸಚಿವ ಆರ್‌. ಅಶೋಕ, ಆರೋಗ್ಯ ಸಚಿವ ಡಾ| ಸುಧಾಕರ್‌ ಸೇರಿದಂತೆ ಬಳ್ಳಾರಿಯಲ್ಲಿ ಜಿಪಂ ಸಿಇಒ ಕೆ.ಆರ್‌.ನಂದಿನಿ, ಎಸ್ಪಿ ಸೈದುಲು ಅಡಾವತ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next