Advertisement
ಆಕ್ಸಿಜನ್ ಉತ್ಪಾದನೆ ಮಾಹಿತಿಯನ್ನು ಪಡೆದುಕೊಂಡ ಸಚಿವರು, ಕೈಗಾರಿಕೆಗೆ ಬಳಸಲಾಗುತ್ತಿರುವ ಆಕ್ಸಿಜನ್ ಪ್ರಮಾಣ ಕಡಿತಗೊಳಿಸಿ ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚು ಒದಗಿಸಲು ಸೂಚನೆ ನೀಡಿದರು. ಈಗ ಉತ್ಪಾದಿಸಲಾಗುತ್ತಿರುವ ಆಕ್ಸಿಜನ್ ಪ್ರಮಾಣವನ್ನು 1 ಸಾವಿರದಿಂದ 1200 ಮೆಟ್ರಿಕ್ ಟನ್‌ವರೆಗೆ ಹೆಚ್ಚಿಸಲು ಜಿಂದಾಲ್ ಅ ಧಿಕಾರಿಗಳಿಗೆ ಸೂಚಿಸಿದರು.
Related Articles
Advertisement
ಜಿಂದಾಲ್ ಕಾರ್ಖಾನೆಯು ಪ್ರತಿನಿತ್ಯ 900 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದಿಸುತ್ತಿದ್ದು, ಅದರಲ್ಲಿ ರಾಜ್ಯಕ್ಕೆ ಪ್ರತಿನಿತ್ಯ 650 ಮೆಟ್ರಿಕ್ ಟನ್ ಇಲ್ಲಿಂದ ಸರಬರಾಜಾಗುತ್ತಿದೆ ಎಂದ ಸಚಿವ ಜಗದೀಶ್ ಶೆಟ್ಟರ್, ಜಿಂದಾಲ್ ಕಾರ್ಖಾನೆ ಸಂಕಷ್ಟದ ಸಮಯದಲ್ಲಿ ಇಡೀ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆ ಮಾಡುವ ಮೂಲಕ ಒಳ್ಳೆ ಕೆಲಸ ಮಾಡುತ್ತಿದೆ. ಜಿಂದಾಲ್‌ನ ಇತರೆ ಸ್ಟೀಲ್ ಉತ್ಪಾದನಾ ಕಾರ್ಯಗಳಿಗೆ ಆಕ್ಸಿಜನ್ ಕಡಿಮೆ ಮಾಡಿ, ವೈದ್ಯಕೀಯ ಕ್ಷೇತ್ರಕ್ಕೆ ಹೆಚ್ಚಿನ ಆಕ್ಸಿಜನ್ ಉತ್ಪಾದನೆ ಮಾಡಿ ನೀಡುವಂತೆ ತಿಳಿಸಲಾಗಿದ್ದು ಅವರು ಒಪ್ಪಿಕೊಂಡಿದ್ದಾರೆ ಎಂದರು.
ಎಲ್ಲ ಕಡೆ ಹಾಸಿಗೆಗಳು ಭರ್ತಿಯಾಗುತ್ತಿವೆ. ಹಾಸಿಗೆಗಳು ಸಿಗದೆ ಜನರು ಪರದಾಡುತ್ತಿದ್ದಾರೆ. ಆಕ್ಸಿಜನ್ ಪೂರೈಕೆ ಜಾಸ್ತಿಯಾದಂತೆ ಹಾಸಿಗೆಗಳ ಸೃಷ್ಟಿಯೂ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಜಿಂದಾಲ್ ಸಂಸ್ಥೆಯಲ್ಲಿ ಆರು ಕಂಪನಿಗಳು ಆಕ್ಸಿಜನ್ ಉತ್ಪಾದನೆಯಲ್ಲಿ ತೊಡಗಿಕೊಂಡಿವೆ. ಇದರ ಜೊತೆಗೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಆಕ್ಸಿಜನ್ ಉತ್ಪಾದಿಸಲಾಗುತ್ತಿದೆ. ಇದರಿಂದ ರಾಜಕ್ಕೆ ಆಕ್ಸಿಜನ್ ಪೂರೈಸಲಾಗುತ್ತದೆ. ನಮ್ಮಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಕೇವಲ ನಮ್ಮ ರಾಜ್ಯಕ್ಕೆ ಮಾತ್ರ ಬಳಸಿಕೊಳ್ಳಲು ಅವಕಾಶ ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಕೂಡ ಮಾಡಲಾಗಿದೆ. ಇದಕ್ಕೆ ಕೇಂದ್ರ ಗ್ರೀನ್ ಸಿಗ್ನಲ್ ನೀಡಿದರೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಕಡಿಮೆಯಾಗುತ್ತದೆ ಎಂದರು.
ನಂತರ ಜಿಂದಾಲ್‌ನಲ್ಲಿ ಸಚಿವರು, ಶಾಸಕರು, ಸಂಸದರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯ ಕೋವಿಡ್ ಸ್ಥಿತಿಗತಿ, ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಇದಕ್ಕೂ ಮುಂಚೆ ಅವರು ಜಿಂದಾಲ್ ಎದುರುಗಡೆ ನಿರ್ಮಾಣ ಮಾಡಲಾಗುತ್ತಿರುವ 1 ಸಾವಿರ ಆಕ್ಸಿಜನ್ ಹಾಸಿಗೆಯುಳ್ಳ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ ಕಾರ್ಯ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸಂಸದ ವೈ. ದೇವೇಂದ್ರಪ್ಪ, ಶಾಸಕರಾದ ಜಿ. ಸೋಮಶೇಖರ್ ರೆಡ್ಡಿ, ಈ. ತುಕಾರಾಂ, ಜಿಲ್ಲಾ ಧಿಕಾರಿ ಪವನಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಸೈದುಲು ಅಡಾವತ್, ಅಪರ ಜಿಲ್ಲಾಧಿ ಕಾರಿ ಪಿ.ಎಸ್. ಮಂಜುನಾಥ ಸೇರಿದಂತೆ ಇತರೆ ಅಧಿ ಕಾರಿಗಳು ಇದ್ದರು.