Advertisement

ಕೋವಿಡ್‌ ಕೇರ್‌ ಸೆಂಟರ್‌ಗೆ ಸೋಂಕಿತರ ಶಿಫ್ಟ್‌

10:37 PM May 13, 2021 | Team Udayavani |

ಬಳ್ಳಾರಿ: ಜಿಲ್ಲೆಯಲ್ಲಿ ಹೋಂ ಐಸೋಲೇಶನ್‌ನಲ್ಲಿರುವ ಸೋಂಕಿತರು ಕೋವಿಡ್‌ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸದಿರುವ ಕಾರಣ ಅವರನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಶಿಫ್ಟ್‌ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್‌ ಹೇಳಿದರು. ನಗರದ ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

Advertisement

ಹೋಂ ಐಸೋಲೇಶನ್‌ನಲ್ಲಿರುವ ಸೋಂಕಿತರು ಕೋವಿಡ್‌ ನಿಯಮಾವಳಿಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಜಿಲ್ಲಾಡಳಿತ ನೇಮಿಸಿದ ತಂಡಗಳು ಪರಿಶೀಲನೆಗೆ ತೆರಳಿದ ಸಂದರ್ಭದಲ್ಲಿ ಮಾತ್ರ ಮನೆಯಲ್ಲಿರುತ್ತಿದ್ದಾರೆ. ನಂತರ ಹೊರಗಡೆ ಅನಗತ್ಯ ತಿರುಗಾಟ ಹಾಗೂ ಇನ್ನಿತರರಿಗೆ ಸೋಂಕು ಪಸರಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸೊಂಕು ನಿಯಂತ್ರಣಕ್ಕೆ ಬರುವುದರ ಬದಲಿಗೆ ಹೆಚ್ಚಿನ ಸೋಂಕಿನ ಪ್ರಕರಣಗಳು ದೃಢಪಡುವಂತಾಗಿದೆ. ಜಿಲ್ಲಾಡಳಿತ ಅನೇಕ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡರೂ ನಿಯಂತ್ರಣಕ್ಕೆ ಬರದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ 14 ಸಾವಿರ ಜನರು ಹೋಂ ಐಸೋಲೇಶನ್‌ನಲ್ಲಿದ್ದು, ಮೊದಲಿಗೆ ಅತಿಹೆಚ್ಚಿನ ಸೋಂಕು ಪ್ರಕರಣಗಳು ವರದಿಯಾಗಿರುವ ಪ್ರದೇಶಗಳಲ್ಲಿನ ಹೋಂ ಐಸೋಲೇಶನ್‌ ಸೋಂಕಿತರನ್ನು ಮೊದಲ ಆದ್ಯತೆ ಮೇರೆಗೆ ಈಗಾಗಲೇ ಸ್ಥಾಪಿಸಲಾಗಿರುವ ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಪೊಲೀಸ್‌ ಸಿಬ್ಬಂದಿ ಸಹಕಾರದೊಂದಿಗೆ ಶಿಫ್ಟ್‌ ಮಾಡಲಾಗುವುದು ಎಂದರು.

ಈಗಾಗಲೇ ಜಿಲ್ಲಾ ಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಜಿಪಂ ಸಿಇಒ ಹಾಗೂ ಆರೋಗ್ಯ ಇಲಾಖೆಯ ಅ ಧಿಕಾರಿಗಳೊಂದಿಗೆ ಜಿಲ್ಲೆಯ 11 ತಾಲೂಕುಗಳ ಪ್ರವಾಸ ಮಾಡಿ ಜನಪ್ರತಿನಿ  ಧಿಗಳೊಂದಿಗೆ ಚರ್ಚಿಸಿ ಅಲ್ಲಿರುವ ಅವ್ಯವಸ್ಥೆಗಳನ್ನು ಸರಿಪಡಿಸಲಾಗಿದೆ ಎಂದು ವಿವರಿಸಿದ ಸಚಿವ ಸಿಂಗ್‌ ಅವರು ಎರಡು ದಿನಗಳ ಹಿಂದಷ್ಟೇ ನಗರದ ಬಿಡಿಎಎ ಫುಟ್ಬಾಲ್‌ ಮೈದಾನದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ತಜ್ಞರ ಸಭೆ ಕರೆದು ಸಲಹೆಗಳನ್ನು ಪಡೆದುಕೊಂಡು ಇಡೀ ಬಳ್ಳಾರಿ ಜಿಲ್ಲೆಯನ್ನು ಸಂಪೂರ್ಣ ಲಾಕ್‌ಡೌನ್‌ ಮಾಡಲಾಗಿದೆ ಎಂದರು.

ಜಿಂದಾಲ್‌ ಎದುರುಗಡೆ ನಿರ್ಮಾಣವಾಗುತ್ತಿರುವ 1 ಸಾವಿರ ಆಕ್ಸಿಜನ್‌ ಬೆಡ್‌ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ ಕಾರ್ಯವನ್ನು ಈಗಷ್ಟೇ ಪರಿಶೀಲಿಸಿ ಬಂದಿದ್ದು, ಎಲೆಕ್ಟ್ರಿಕಲ್‌ ಕಾರ್ಯ ನಡೆಯುತ್ತಿದೆ. ಇನ್ನೂ ನಾಲ್ಕು ದಿನಗಳಲ್ಲಿ ಈ ಕಾರ್ಯ ಪೂರ್ಣಗೊಂಡು 300 ಆಕ್ಸಿಜನ್‌ ಬೆಡ್‌ಗಳೊಂದಿಗೆ ತಾತ್ಕಾಲಿಕ ಆಸ್ಪತ್ರೆ ಆರಂಭವಾಗಲಿದೆ. ಈಗಾಗಲೇ ತಜ್ಞವೈದ್ಯರು, ವೈದ್ಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ನೇಮಕ ಪ್ರಕ್ರಿಯೆ ಆರಂಭವಾಗಿದ್ದು, ಆದೇಶ ಪತ್ರಗಳನ್ನು ವಿತರಿಸಲಾಗುತ್ತಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next