Advertisement

ಮಾಧ್ಯಮ ಪ್ರತಿನಿಧಿಗಳಿಗೆ ಲಸಿಕೆ

09:09 PM May 14, 2021 | Team Udayavani |

ಬಳ್ಳಾರಿ: ಪತ್ರಕರ್ತರು ಹಾಗೂ ಮಾಧ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಸರ್ಕಾರ ಫ್ರಂಟ್‌ಲೆçನ್‌ ವಾರಿಯರ್ಗಳೆಂದು ಪರಿಗಣಿಸಿ ಕೋವಿಡ್‌ ಲಸಿಕೆ ನೀಡಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಬಳ್ಳಾರಿ ಪತ್ರಿಕಾಭವನ ಹಾಗೂ ತಾಲೂಕುಗಳಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಏಕಕಾಲಕ್ಕೆ ಗುರುವಾರ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.

Advertisement

ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಬಳ್ಳಾರಿ ಪತ್ರಿಕಾ ಭವನದಲ್ಲಿ ನಡೆದ ಲಸಿಕಾ ಕಾರ್ಯಕ್ರಮಕ್ಕೆ ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ಅನಿಲಕುಮಾರ್‌ ಚಾಲನೆ ನೀಡಿ ಮಾತನಾಡಿ, ಕೋವಿಡ್‌ ನಿಯಂತ್ರಣದಲ್ಲಿ ಯಾವುದೇ ಫಲಾಪೇಕ್ಷೆ ಇಲ್ಲದೇ ಸೇವೆ ಸಲ್ಲಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳ ಕಾರ್ಯ ಪ್ರಶಂಸನಾರ್ಹ ಎಂದರು. ಕಳೆದ ಒಂದೂವರೆ ವರ್ಷಗಳಿಂದ ಕೋವಿಡ್‌ ನಿಯಂತ್ರಣದಲ್ಲಿ ಬಳ್ಳಾರಿ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳು ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ್ದಾರೆ.

ಫ್ರಂಟ್‌ಲೆçನ್‌ ವಾರಿಯರ್ಗಳೆಂದು ಸರ್ಕಾರ ಘೋಷಿಸಿ ಲಸಿಕೆ ನೀಡುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ಇಂದು ಎಲ್ಲ ಮಾಧ್ಯಮ ಪ್ರತಿನಿಧಿಗಳು ಹಾಗೂ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ. ಲಸಿಕೆಯಿಂದ ಅಡ್ಡ ಪರಿಣಾಮಗಳಿಲ್ಲ ಎಂದು ತಿಳಿಸಿದರು.

ಏಕಕಾಲಕ್ಕೆ ಲಸಿಕೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ. ರಾಮಲಿಂಗಪ್ಪ ಮಾತನಾಡಿ, ಫ್ರಂಟ್‌ಲೆçನ್‌ ವಾರಿಯರ್ಗಳಾಗಿ ಸೇವೆ ಸಲ್ಲಿಸುತ್ತಿರುವ ಮಾಧ್ಯಮ ಪ್ರತಿನಿಧಿಗಳು ಮತ್ತು ಸಿಬ್ಬಂದಿಗೆ ಜಿಲ್ಲಾ- ತಾಲೂಕು ಕೇಂದ್ರಗಳಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಏಕಕಾಲಕ್ಕೆ ಕೋವಿಡ್‌ ಲಸಿಕೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 280 ಜನರಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್‌ ಮಾತನಾಡಿದರು. ಇದೇ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ| ಮಹ್ಮದ್‌ ಶಕೀಬ್‌ ಅಲಿ, ಹಿರಿಯ ಶುಶ್ರೂಷಕಿ ಕವಿತಾ, ಆರೋಗ್ಯ ಸಿಬ್ಬಂದಿಗಳಾದ ಮಲ್ಲಿಕಾರ್ಜುನ, ರಾಘವೇಂದ್ರ ಮಾಧ್ಯಮ ಪ್ರತಿನಿಧಿಗಳು ಮತ್ತು ಸಿಬ್ಬಂದಿಗೆ ಲಸಿಕೆ ಹಾಕಿದರು. ಜಿಲ್ಲೆಯಲ್ಲಿ ಗುರುವಾರ 200ಕ್ಕೂ ಹೆಚ್ಚು ಮಾಧ್ಯಮ ಪ್ರತಿನಿಧಿಗಳು ಮತ್ತು ಸಿಬ್ಬಂದಿಗಳಿಗೆ ಲಸಿಕೆ ನೀಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next