Advertisement
ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಿಸುತ್ತಿರುವ ಕಾರಣ ಪಡಿತರ ಚೀಟಿದಾರರು ಮತ್ತು ನ್ಯಾಯಬೆಲೆ ಅಂಗಡಿ ಮಾಲೀಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಮೇ ತಿಂಗಳ ಪಡಿತರ ಚೀಟಿದಾರರ ಬೆರಳು ಮುದ್ರೆ (ಬಯೋಮೆಟ್ರಿಕ್) ಪಡೆಯದೇ ವಿತರಿಸಲು ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ತಿಳಿಸಲಾಗಿದೆ. ಜಿಲ್ಲೆಯ ಯಾವುದೇ ನ್ಯಾಯಬೆಲೆ ಅಂಗಡಿ ಮಾಲೀಕರು ಪಡಿತರ ವಿತರಿಸಲು ಪಡಿತರ ಚೀಟಿದಾರರು ಬೆರಳು ಮುದ್ರೆ (ಬಯೋಮೆಟ್ರಿಕ್) ನೀಡುವಂತೆ ಒತ್ತಾಯಿಸಬಾರದೆಂದು ಅವರು ತಿಳಿಸಿದ್ದಾರೆ.
Related Articles
Advertisement
ಅದರ ಆಧಾರದ ಮೇಲೆ ಕೇಂದ್ರ ಸರ್ಕಾರ ಪ್ರತಿ ತಿಂಗಳ ಆಹಾರಧಾನ್ಯ ಹಂಚಿಕೆ ನೀಡುತ್ತದೆ. ಆದಾಗ್ಯೂ ರಾಜ್ಯದಲ್ಲಿ ಎದುರಾಗಿರುವ ಕೋವಿಡ್ ಎರಡನೇ ಅಲೆ ಪರಿಣಾಮ ಗಮನದಲ್ಲಿಟ್ಟುಕೊಂಡು ಪಡಿತರ ಚೀಟಿದಾರರು ಮತ್ತು ನ್ಯಾಯಬೆಲೆ ಅಂಗಡಿ ಮಾಲೀಕರು ಹಾಗೂ ಅಧಿ ಕಾರಿಗಳ ಮೇಲೆ ಯಾವುದೇ ಆರೋಗ್ಯದ ದುಷ್ಪರಿಣಾಮ ಉಂಟಾಗುವುದನ್ನು ತಡೆಯಲು ಸರಳ ಮತ್ತು ಪಾರದರ್ಶಕ ಪಡಿತರ ವಿತರಣೆಗೆ ಅವಕಾಶ ಮಾಡಲಾಗಿದೆ. ಪಡಿತರ ವಿತರಣೆಯಲ್ಲಿ ಸರಳ ಮತ್ತು ಪಾರದರ್ಶಕ ಅವಕಾಶ ಕಲ್ಪಿಸಲಾಗಿದೆ; ಆದರೂ ಕೆಲವರು ಗೊಂದಲ ಸೃಷ್ಟಿಸುತ್ತಿರುವುದು ಆಧಾರರಹಿತ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಉಂಟಾಗಿರುವ ಕೋವಿಡ್ ರೋಗದ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಪಡಿತರ ಚೀಟಿದಾರರಿಗೆ ಕೇಂದ್ರ-ರಾಜ್ಯ ಸರ್ಕಾರಗಳು ಹಂಚಿಕೆ ನೀಡಿರುವ ಪಡಿತರದ ವಸ್ತುಗಳು ನಿಗದಿತ ಸಮಯ ಮತ್ತು ಪ್ರಮಾಣದಲ್ಲಿ ಮತ್ತು ಆರೋಗ್ಯಪೂರ್ಣ ವಾತಾವರಣದಲ್ಲಿ ಸರಳ ಮಾರ್ಗಗಳ ಮೂಲಕ ವಿತರಣೆ ಆಗುವಂತೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ವಿವರಿಸಿದ್ದಾರೆ.
ಯಾವುದೇ ಪಡಿತರ ಚೀಟಿದಾರರಿಗೆ ಅನಾನುಕೂಲವಾದಲ್ಲಿ ಅವರು ತಮ್ಮ ದೂರು ಬೆಂಗಳೂರಿನ ಆಯುಕ್ತಾಲಯದ ನಿಯಂತ್ರಣ ಕೊಠಡಿ ಸಂಖ್ಯೆ 1967, 1800-425-9339 ಮತ್ತು 14445 ದಾಖಲಿಸಲು ಹಾಗೂ ಜಂಟಿ ನಿರ್ದೇಶಕರ ಕಾರ್ಯಾಲಯ ಬಳ್ಳಾರಿ ಕಚೇರಿ ಸಂಖ್ಯೆ: 08392-272557 ಹಾಗೂ ಸಂಬಂ ಧಿಸಿದ ಗ್ರಾಪಂಗೆ ಅಥವಾ ತಹಶೀಲ್ದಾರ್‌ಗೆ ದೂರು ಸಲ್ಲಿಸಲು ಜಿಲ್ಲಾಧಿ ಕಾರಿ ಪವನಕುಮಾರ ಮಾಲಪಾಟಿ ತಿಳಿಸಿದ್ದಾರೆ.