Advertisement

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟ

10:25 PM May 16, 2021 | Team Udayavani |

ಬಳ್ಳಾರಿ: ರಾಜ್ಯ ಸರ್ಕಾರವು ಕೋವಿಡ್‌ ಸೋಂಕು ನಿಯಂತ್ರಿಸಲು ಕೊರೊನಾ ಕರ್ಫ್ಯೂ ವಿಧಿ ಸಿರುವ ಹಿನ್ನೆಲೆಯಲ್ಲಿ ಮತ್ತು ಸರ್ಕಾರದ ಸೂಚನೆ ಅನ್ವಯ ಕೊರೊನಾ ಕರ್ಫ್ಯೂ ಸಮಯದಲ್ಲಿ ನಿರ್ಗತಿಕರಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್‌ಗಳ ಮೂಲಕ ಉಚಿತ ಊಟ ನೀಡಲಾಗುತ್ತಿದ್ದು, ನಗರದ ಸಾರ್ವಜನಿಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಲ್ಹೋಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ 5 ಇಂದಿರಾ ಕ್ಯಾಂಟೀನ್‌ಗಳಿಂದ ಬೆಳಗಿನ ಉಪಾಹಾರ, ಮಧ್ಯಾಹ್ನದ ಹಾಗೂ ರಾತ್ರಿಯ ಊಟವನ್ನು ಉಚಿತವಾಗಿ ವಿತರಣೆ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದ್ದು ಸಾರ್ವಜನಿಕರು ಇದನ್ನು ಬಳಸಿಕೊಳ್ಳಿ ಎಂದು ಅವರು ತಿಳಿಸಿದ್ದಾರೆ.

ಕೋವಿಡ್‌ -19ರ ಎರಡನೇ ಅಲೆ ಹಿನ್ನೆಲೆಯಲ್ಲಿ ಸರ್ಕಾರವು ಮೇ 24ರವರೆಗೆ ಕೊರೊನಾ ಕರ್ಫ್ಯೂ ಮಾಡಿರುವುದರಿಂದ ಬಳ್ಳಾರಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಕೂಲಿ ಕಾರ್ಮಿಕರು, ವಲಸಿಗರು ಹಾಗೂ ದುರ್ಬಲ ವರ್ಗದ ಜನರು ಆಹಾರದಿಂದ ವಂಚಿತರಾಗಬಾರದೆಂದು ಭಾವಿಸಿ ಸರ್ಕಾರವು ಆದೇಶ ಹೊರಡಿಸಿರುವಂತೆ ಮೇ 24ರವರೆಗೆ ಇಂದಿರಾ ಕ್ಯಾಂಟೀನ್‌ಗಳ ಮುಖಾಂತರ ಉಚಿತ ಊಟ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next