ಸಿರುಗುಪ್ಪ: ತಾಲೂಕಿನ ಬಗ್ಗೂರು ಮತ್ತು ಇತರೆ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಕೆರೆಯ ನೀರು ಸಂಪೂರ್ಣ ಹಸಿರು ಬಣ್ಣಕ್ಕೆ ತಿರುಗಿದೆ. ಈ ಕೆರೆಯ ನೀರು ಹಸಿರು ಬಣ್ಣಕ್ಕೆ ತಿರುಗಿದ್ದರೂ ಇದೇ ನೀರನ್ನು ಗ್ರಾಮಸ್ಥರಿಗೆ ಪೂರೈಕೆ ಮಾಡಲಾಗುತ್ತಿದೆ.
ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ಅಡ್ಡಪರಿಣಾಮ ಬೀರುವ ಸಾಧ್ಯತೆ ಇದೆ. ಈ ನೀರನ್ನು ಲ್ಟರ್‌ನಲ್ಲಿ ಶುದ್ಧೀಕರಣಗೊಳಿಸಿದರು ನೀರು ಹಳದಿ ಬಣ್ಣಕ್ಕೆ ತಿರುಗಿದ್ದು, ಗ್ರಾಮಸ್ಥರು ಈ ನೀರನ್ನು ಕುಡಿಯಲು ಹಿಂದೇಟು ಹಾಕುತ್ತಿದ್ದಾರೆ.
ಬಗ್ಗೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಗ್ಗೂರು, ಚಾಣಕನೂರು, ಕರ್ಚಿಗನೂರು, ಶ್ರೀನಗರ ಕ್ಯಾಂಪ್, ವೆಂಕಟೇಶ್ವರ ಕ್ಯಾಂಪ್‌ಗೆ ಶುದ್ಧ ಕುಡಿಯುವ ನೀರೊದಗಿಸುವ ಉದ್ದೇಶದಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕುಡಿಯುವ ನೀರಿನ ಕೆರೆ ನಿರ್ಮಾಣ ಮಾಡಲಾಗಿದೆ.
ಆದರೆ ಜನರಿಗೆ ಕೆರೆಯಿಂದ ಶುದ್ಧ ಕುಡಿಯುವ ನೀರೊದಗಿಸಲು ಪ್ರತಿವರ್ಷ ಲಕ್ಷಾಂತರ ರೂ.ಗಳನ್ನು ಸರ್ಕಾರ ವೆಚ್ಚಮಾಡುತ್ತಿದೆ.
ಆದರೂ ಕೆರೆಯ ನೀರು ಕಲುಷಿತಗೊಂಡಿದ್ದು, ಕುಡಿಯಲು ಯೋಗ್ಯವೇ ಇಲ್ಲವೆ ಎನ್ನುವ ಆತಂಕ ಗ್ರಾಮಸ್ಥರನ್ನು ಕಾಡುತ್ತಿದೆ. ಕೆರೆಯಿಂದ ಕುಡಿಯಲು ಗ್ರಾಮಕ್ಕೆ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ ಕೆರೆ ನೀರು ಹಸಿರು ಬಣ್ಣಕ್ಕೆ ತಿರುಗಿದ್ದು, ಈ ನೀರು ಕುಡಿಯಲು ಯೋಗ್ಯವಾಗಿವೆಯೇ ಇಲ್ಲವೆ ಎನ್ನುವುದರ ಬಗ್ಗೆ ಯಾವುದೇ ಅಧಿ ಕಾರಿಗಳು ಇಲ್ಲಿಯವರೆಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿಲ್ಲ, ಇದರಿಂದಾಗಿ ಕೆರೆಯ ನೀರನ್ನು ಬಳಸಲು ಗ್ರಾಮಸ್ಥರು ಹಿಂದೇಟು ಹಾಕುತ್ತಿದ್ದಾರೆ.