Advertisement

ಪ್ರತಿ ತಾಲೂಕಿನಲ್ಲೂ ಬಾಲ ಚೈತನ್ಯ ಆರೈಕೆ ಕೇಂದ್ರ

09:33 PM Jun 11, 2021 | Team Udayavani |

ಹೊಸಪೇಟೆ: ಅಪೌಷ್ಟಿಕತೆ ಮಕ್ಕಳು ಕೋವಿಡ್‌ ಗೆ ಸೋಂಕಿಗೆ ತುತ್ತಾಗುವುದನ್ನು ತಪ್ಪಿಸುವ ಹಿನ್ನೆಲೆಯಲ್ಲಿ ಪ್ರತಿ ತಾಲೂಕಿನಲ್ಲಿ ಬಾಲ ಚೈತನ್ಯ ಮಕ್ಕಳ ಆರೈಕೆ ಕೇಂದ್ರ ಆರಂಭಿಸಲಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಕೆ.ಆರ್‌.ನಂದಿನಿ ಹೇಳಿದರು.

Advertisement

ನಗರದ ಸಂಡೂರು ರಸ್ತೆಯ ಮೆಟ್ರಿಕ್‌ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆರಂಭಿಸಲಾದ ಬಾಲಚೈತನ್ಯ ಮಕ್ಕಳ ಆರೋಗ್ಯ ಕೇಂದ್ರಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಕೋವಿಡ್‌ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಬಾ ಸುತ್ತದೆ ಎಂಬ ತಜ್ಞರ ಸಲಹೆ ಹಿನ್ನೆಲೆಯಲ್ಲಿ ಪ್ರತಿ ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಸಹಯೋಗದಲ್ಲಿ ಬಾಲ ಚೈತನ್ಯ ಮಕ್ಕಳ ಆರೈಕೆ ಕೇಂದ್ರ ಆರಂಭಿಸಲಾಗಿದೆ ಎಂದರು.

ಬಳ್ಳಾರಿ-ವಿಜಯನಗರ ಅವಳಿ ಜಿಲ್ಲೆಯಲ್ಲಿ 800 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಇವರನ್ನು ಬಾಲ ಚೈತನ್ಯ ಕೇಂದ್ರಕ್ಕೆ ಕರೆಸಿ ಪೌಷ್ಟಿಕ ಆಹಾರ, ಔಷಧ ನೀಡಿ ಆರೋಗ್ಯವಂತ ಮಕ್ಕಳನ್ನಾಗಿ ಸದೃಢಗೊಳಿಸುವ ಯತ್ನ ಇದಾಗಿದೆ. ಕೇಂದ್ರದಲ್ಲಿ 14 ದಿನಗಳ ಕಾಲ ಇರಿಸಿಕೊಂಡು ಆರೈಕೆ ಮಾಡಲಾಗುತ್ತಿದೆ ಎಂದರು.

ಅಪೌಷ್ಟಿಕತೆಯಿಂದ ಬಳಲುತ್ತಿರುವ ಮತ್ತು ಅಪೌಷ್ಟಿಕತೆಯ ಅಂಚಿನಲ್ಲಿರುವ 6 ವರ್ಷದ ಒಳಗಿನ ಮಕ್ಕಳನ್ನು ಆರೈಕೆ ಮಾಡಲಾಗುತ್ತಿದೆ. ಅಪೌಷ್ಟಿಕತೆ ಮಕ್ಕಳು ಕೋವಿಡ್‌ಗೆ ಸೋಂಕಿಗೆ ತುತ್ತಾಗುವುದನ್ನು ತಪ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಪಾಲಕರು ಭಯಪಡುವ ಅಗತ್ಯವಿಲ್ಲ. ಸೂಕ್ತ ಮುಂಜಾಗ್ರತೆ ವಹಿಸುವುದು ಅಗತ್ಯ. ತಾಲೂಕಿನಲ್ಲಿ 60 ಜನರು ಈಗಾಗಲೇ ನೋಂದಣಿ ಮಾಡಿಸಿಕೊಂಡಿದ್ದು, 48 ಜನರು ಕೇಂದ್ರಕ್ಕೆ ಮಕ್ಕಳನ್ನು ಕರೆತಂದಿದ್ದಾರೆ. ಕಿಡ್ನಿ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುವ ಮಕ್ಕಳನ್ನು ಬಳ್ಳಾರಿಯ ವಿಮ್ಸ್‌ಗೆ ಚಿಕಿತ್ಸೆಗಾಗಿ ಕಳುಹಿಸಲಾಗುತ್ತಿದೆ ಎಂದರು.

ವೈದ್ಯ ಅಶೋಕ ರಾಠೊಡ್‌ ಮಾತನಾಡಿ, ಕೋವಿಡ್‌ ಸೋಂಕು ತಗುಲುತ್ತದೆ ಎಂಬ ಕಾರಣಕ್ಕಾಗಿ ಎಂಬುದಕ್ಕಿಂತ ಮಕ್ಕಳನ್ನು ಅಪೌಷ್ಟಿಕತೆಯಿಂದ ರಕ್ಷಿಸಲು ಬಾಲಚೈತನ್ಯ ಮಕ್ಕಳ ಆರೈಕೆ ಕೇಂದ್ರ ಸಹಕಾರಿಯಾಗಿದೆ ಎಂದರು. ಎಸಿ ಸಿದ್ದರಾಮೇಶ್ವರ ಮಾತನಾಡಿದರು.

Advertisement

ತಾಪಂ ಇಒ ವಿಶ್ವನಾಥ್‌, ಟಿಎಚ್‌ಒ ಭಾಸ್ಕರ್‌, ಡಾ| ದೀಪಾ, ಬಿಇಒ ಪಿ.ಸುನಂದಾ, ಸಿಡಿಪಿಒ ಸಿಂಧು ಅಂಗಡಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next