ಬಳ್ಳಾರಿ: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆ ಸಹಯೋಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಪ್ರಯುಕ್ತ ಬಾಲ್ಯ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸುವ ಜಾಥಾಗೆ ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ್ ಶನಿವಾರ ಜಿಲ್ಲಾಧಿ ಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಂಬಂಧಿ ಸಿದಂತೆ ಈ ಜಾಥಾವು ಆಟೋ ಮೂಲಕ ಬಳ್ಳಾರಿ ನಗರದ ವಿವಿಧೆಡೆ ತೆರಳಿ ಜಾಗೃತಿ ಮೂಡಿಸಲಿದೆ. ನಂತರ ಜಿಲ್ಲೆಯಾದ್ಯಂತ ಸಂಚರಿಸಿ ಅರಿವು ಮೂಡಿಸಲಿದ್ದು, ಈ ಸಂದರ್ಭದಲ್ಲಿ ಕರಪತ್ರಗಳನ್ನು ವಿತರಿಸಲಾಗುತ್ತಿದೆ ಎಂದರು.
ಮಕ್ಕಳು ರಾಷ್ಟ್ರದ ಸಂಪತ್ತು ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಯಿಂದ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತದೆ. ಬಾಲಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕ, ನೈತಿಕ, ಮಾನಸಿಕ ಹಾಗೂ ಆರ್ಥಿಕ ಶೋಷಣೆಗೆ ಒಳಪಡಿಸುತ್ತದೆ. ಶಿಕ್ಷಣದಿಂದ ವಂಚಿತವಾದ ಮಕ್ಕಳ ಬದುಕು ಕಳೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು. ಮಕ್ಕಳ ಬಾಲ್ಯವನ್ನು ಉಳಿಸೋಣ ಅವರ ದುಡಿತ ತಪ್ಪಿಸಿ, ವಿದ್ಯೆ ಆರೋಗ್ಯವನ್ನು ಒದಗಿಸಿ ದೇಶದ ಉನ್ನತಿಗೆ ಶ್ರಮಿಸೋಣ. 6ರಿಂದ 18 ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗ ಅಥವಾ ಪ್ರಕ್ರಿಯೆಗಳಲ್ಲಿ ಹಾಗೂ ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಯುವುದು ಕಂಡಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಕೋರಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಉಪವಿಭಾಗ 1ರ ಕಾರ್ಮಿಕ ಅಧಿ ಕಾರಿ ಕಮಲ್ ಷಾ ಅಪ್ತಾಫ್ ಅಹಮದ್, ಜಿಲ್ಲಾ ಮಹಿಳಾ ಕಲ್ಯಾಣ ಸಮಿತಿ ಅಧ್ಯಕ್ಷೆ ವಿಜಯಲಕೀ ಮೈದೂರು, ಬಾಲಕಾರ್ಮಿಕ ಯೋಜನಾ ನಿರ್ದೇಶಕ ಎ. ಮೌನೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ. ರಾಮಲಿಂಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ರವಿಕುಮಾರ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ದುರುಗಪ್ಪ ಎಸ್.ಮಾಚನೂರು, ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆಯ ಕ್ಷೇತ್ರಾ ಧಿಕಾರಿ ಪಿ.ಎಂ. ಈಶ್ವರಯ್ಯ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಮತ್ತು ಇತರರು ಇದ್ದರು.