Advertisement

ಸಂವಿಧಾನ ಪ್ರಾಯೋಗಿಕವಾಗಿ ಅಳವಡಿಸಿಕೊಂಡಾಗ ಯಶಸ್ಸು

05:02 PM Jan 27, 2021 | Team Udayavani |

ಹೊಸಪೇಟೆ: ಭಾರತದ ಸಂವಿಧಾನವನ್ನು ಪ್ರಾಯೋಗಿಕವಾಗಿ ಅಳವಡಿಸಿಕೊಂಡಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯ ಎಂದು ಬೆಂಗಳೂರಿನ ಕಾನೂನು ಕಾಲೇಜಿನ ಪ್ರಾಧ್ಯಾಪಕ ಡಾ| ಎನ್‌. ಸತೀಶ್‌ ಗೌಡ ಹೇಳಿದರು.

Advertisement

ಕನ್ನಡ ವಿಶ್ವವಿದ್ಯಾಲಯದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಆನ್‌ಲೈನ್‌ ವೆಬಿನಾರ್‌ ಮೂಲಕ ಹಮ್ಮಿಕೊಂಡಿದ್ದ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಜನರಿಂದ, ಜನರಿಗಾಗಿ, ಜನರಿಗೋಸ್ಕರ ಇರುವ ಪ್ರಜಾಪ್ರಭುತ್ವವು ಯಶಸ್ವಿಯಾಗಲು ಭಾರತದ ಸಂವಿಧಾನವನ್ನು ಪ್ರಾಯೋಗಿಕವಾಗಿ ಅಳವಡಿಸಿಕೊಳ್ಳಬೇಕು. ಪ್ರತಿಯೊಬ್ಬರ
ಬಳಿಯೂ ಧರ್ಮಗ್ರಂಥಗಳಿಗಿಂತ ಭಾರತದ ಸವಿಧಾನದ ಪ್ರತಿ ಇರಬೇಕು. ಮೊದಲು ಯುವಜನತೆ ಸಂವಿಧಾನದ ಆಶಯಗಳನ್ನು ಓದಿ ತಿಳಿದುಕೊಳ್ಳಬೇಕು ಎಂದು ಕರೆ ನೀಡಿದರು.

ಕುಲಪತಿ ಡಾ| ಸ.ಚಿ.ರಮೇಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಿಧಾನವನ್ನು ಪಾಲಿಸುವುದು ಮತ್ತು ಗೌರವಿಸುವುದು
ಜನರ ಬದುಕಿನ ಭಾಗವಾಗಬೇಕು ಎಂದರು.

ಲೋಹಿಯ ಅಧ್ಯಯನ ಪೀಠದ ಸಂಚಾಲಕ ಡಾ| ಈ. ಎರಿಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವ ಡಾ| ಸುಬ್ಬಣ್ಣ ರೈ ಮತ್ತು ಸಮಾಜ ವಿಜ್ಞಾನಗಳ ನಿಕಾಯದ ಡೀನರಾದ ಡಾ| ಮಾಧವ ಪೆರಾಜೆ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಇದ್ದರು.

 

Advertisement

ಓದಿ :    ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆ ಪಠಿಸಿ

Advertisement

Udayavani is now on Telegram. Click here to join our channel and stay updated with the latest news.

Next