Advertisement

ರಂಗ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿ

09:56 PM Jun 24, 2021 | Team Udayavani |

ಬಳ್ಳಾರಿ: ಸಾರ್ವಜನಿಕ ಶಿಕ್ಷಣ ಇಲಾಖೆಯು ವಿಷಯವಾರು ಶಿಕ್ಷಕರ ನೇಮಕಾತಿಗೆ ಹೊರಡಿಸಿರುವ ಅ ಧಿಸೂಚನೆಯಲ್ಲಿ ಮಕ್ಕಳಿಗೆ ಕೌಶಲ್ಯಾಧಾರಿತ ಕಲಿಕೆಗಾಗಿ ರಂಗ ಶಿಕ್ಷಕರನ್ನು ನೇಮಕಾತಿ ಮಾಡಬೇಕು ಎಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಪ್ರಭುದೇವ ಕಪ್ಪಗಲ್‌ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

Advertisement

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಕಲುºರ್ಗಿ ಅಪರ ಆಯುಕ್ತರು ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರು, ಹಿರಿಯ ಪ್ರಾಥಮಿಕ ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕರು, ದೈಹಿಕ, ಸಂಗೀತ, ಚಿತ್ರಕಲಾ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸುವ ಕರಡನ್ನು ತಯಾರಿಸಿದ್ದು, ಇದರಲ್ಲಿ ರಂಗ ಶಿಕ್ಷಕರನ್ನು ಕೈಬಿಡಲಾಗಿದ್ದು, ಪ್ರಸ್ತಾಪವೇ ಇಲ್ಲ. ಹಾಗಾಗಿ ಅ ಧಿಸೂಚನೆಯನ್ನು ತಿದ್ದುಪಡಿ ಮಾಡಿ ರಂಗ ಶಿಕ್ಷಕರನ್ನು ಸೇರಿಸಿ ಹೊರಡಿಸಬೇಕು ಎಂದವರು ಆಗ್ರಹಿಸಿದರು.

ಈ ಹಿಂದೆ ಶಿಕ್ಷಣ ಸಚಿವರಾಗಿದ್ದ ಹಾಲಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಯವರು, ರಾಜ್ಯದಲ್ಲೇ ಮೊದಲ ಬಾರಿಗೆ 43 ರಂಗ ಶಿಕ್ಷಕರನ್ನು ನೇಮಕ ಮಾಡಿದ್ದರು. ರಂಗ ಶಿಕ್ಷಕರು ನೇಮಕವಾಗಿದ್ದ ಶಾಲೆಗಳಲ್ಲಿ ಮಕ್ಕಳ ಹಾಜರಾತಿ, ಶಿಕ್ಷಣದ ಗುಣಮಟ್ಟ, ವಿದ್ಯಾರ್ಥಿಗಳು ಅಂಕ ಪಡೆಯುವಲ್ಲಿ ಪರಿಣಾಮಕಾರಿಯಾಗಿರುವುದನ್ನು ತಜ್ಞರು ಗುರುತಿಸಿದ್ದಾರೆ. ಹಾಗಾಗಿ 371(ಜೆ) ಅಡಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಹೊರಡಿಸಿರುವ ಕರಡು ಅಧಿ ಸೂಚನೆಯತಲ್ಲಿ ರಂಗ ಶಿಕ್ಷಕರನ್ನು ಸೇರಿಸಿ ಮರು ಆದೇಶ ಹೊರಡಿಸಬೇಕು.

250 ಶಿಕ್ಷಕರ ನೇಮಕಾತಿಯಲ್ಲಿ ಸುಮಾರು ಶೇ.30 ರಷ್ಟು ಅಂದರೆ ಕನಿಷ್ಠ 100 ರಂಗ ಶಿಕ್ಷಕರನ್ನು ನೇಮಿಸಿಕೊಳ್ಳಬೇಕು. ಕಲ್ಯಾಣ ಕರ್ನಾಟಕದಲ್ಲಿ ಸುಮಾರು 250ಕ್ಕೂ ಹೆಚ್ಚು ಪದವೀಧರರಿದ್ದು, ಇವರನ್ನು ಪರಿಗಣಿಸಬೇಕು. ಅಲ್ಲದೇ, ರಾಜ್ಯದ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್‌ ಸದಸ್ಯರು ಎಲ್ಲರೂ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯರಾದ ಟಿ.ರಾಜಾರಾಮ್‌, ಪ್ರವೀಣ್‌ ನಾಯಕ್‌ ರಾಥೋಡ್‌ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next