ಬಳ್ಳಾರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಜುಲೈ 3ನೇ ವಾರದಲ್ಲಿ ನಡೆಸಲು ಸಕಾರ ನಿರ್ಧರಿಸಿದ್ದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಸುರಕ್ಷಿತ ಮತ್ತು ಸುವ್ಯವಸ್ಥಿತವಾಗಿ ನಡೆಸಲು ಅಗತ್ಯವಿರುವ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಅ ಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿ ಕಾರಿಗಳ ಕಚೇರಿಯ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರೊಂದಿಗಿನ ಎಸ್‌ಎಸ್‌ಎಲ್‌ಸಿ ಪರೀûಾ ಸಿದ್ಧತೆ ಕುರಿತ ವೀಡಿಯೋ ಸಂವಾದದ ನಂತರ ಆರೋಗ್ಯ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಬಳ್ಳಾರಿ/ ವಿಜಯನಗರ ಜಿಲ್ಲೆಗಳಲ್ಲಿ ಒಟ್ಟು 222 ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಪ್ರತಿ ಕೊಠಡಿಗೆ 12 ಜನ ವಿದ್ಯಾರ್ಥಿಗಳ ಅನುಸಾರ 4038 ಕೊಠಡಿಗಳು ಮೀಸಲಿಡಲಾಗಿದೆ. 42989 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀûಾ ಕಾರ್ಯಕ್ಕೆ ತಲಾ 222 ಮುಖ್ಯ ಅಧಿಕ್ಷಕರು, ಸ್ಥಾನಿಕ ಜಾಗೃತಿದಳದ ಅಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ. 59 ಮಾರ್ಗಗಳನ್ನು ಗುರುತುಪಡಿಸಲಾಗಿದೆ ಎಂದರು.
239 ಥರ್ಮಲ್ ಸ್ಕಾ ನರ್‌ಗಳು ಲಭ್ಯವಿದ್ದು, 42127 ಡೆಸ್ಕ್ಗಳ ಸಿದ್ಧತೆ ಮಾಡಿಟ್ಟುಕೊಳ್ಳಲಾಗಿದೆ. ಸೋಂಕಿತ ಲಕ್ಷಣವಿರುವ ಮಕ್ಕಳಿಗಾಗಿ ಪರೀಕ್ಷೆ ಬರೆಯಲು 222 ವಿಶೇಷ ಕೊಠಡಿಗಳ ಸಿದ್ಧತೆ ಮಾಡಿಟ್ಟುಕೊಳ್ಳಲಾಗಿದೆ. ಅವಳಿ ಜಿಲ್ಲೆಗಳಲ್ಲಿ ಸೂಕ್ ಮತ್ತು ಅತಿಸೂಕ್ 11 ಕೇಂದ್ರಗಳಿದ್ದು,ಅಲ್ಲಿ ಯಾವುದೇ ರೀತಿಯ ಅವಘಡಗಳಾಗದಂತೆ ಕ್ರಮಕೈಗೊಳ್ಳಲು ಡಿಸಿ ಮಾಲಪಾಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ತವ್ಯ ನಿರ್ವಹಿಸುವ ಎಲ್ಲ ಶಿಕ್ಷಕರು, ಅಧಿ ಕಾರಿಗಳು ಮತ್ತು ಸಿಬ್ಬಂದಿಗೆ ಲಸಿಕೆ ನೀಡಬೇಕು. ಪ್ರತಿ ಪರೀûಾ ಕೇಂದ್ರದಲ್ಲಿ ವಿದ್ಯಾರ್ಥಿ ಹಾಗೂ ಸಿಬ್ಬಂದಿಗೆ ಥರ್ಮಲ್ ಸ್ಕಾನಿಂಗ್ ಮೂಲಕ ಪರೀಕ್ಷಿಸಬೇಕು. ಅಗತ್ಯವಿದ್ದಲ್ಲಿ ಪಲ್ಸ್ ಆಕ್ಸಿಮೀಟರ್ ಬಳಸಬೇಕೆಂದು ಅವರು ಹೇಳಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಕುರಿತು ಸರ್ಕಾರ ನೀಡಿರುವ ಎಸ್‌ಓಪಿಯಲ್ಲಿ ತಿಳಿಸಿರುವ ಮಾರ್ಗಸೂಚಿಗಳನ್ನು ಪ್ರತಿ ಪರೀûಾ ಕೇಂದ್ರದಲ್ಲಿ ಅಳವಡಿಸಿಕೊಂಡು ಯಶಸ್ವಿಗೊಳಿಸಬೇಕು. ಪ್ರತಿ ವಿದ್ಯಾರ್ಥಿ ಮಾಸ್ಕ್ ಧರಿಸಿಯೇ ಕೇಂದ್ರಕ್ಕೆ ಬರಬೇಕು. ಕರ್ತವ್ಯ ನಿರ್ವಹಿಸುವ ಅಧಿ ಕಾರಿ, ಶಿಕ್ಷಕರು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಎನ್ -95 ಮಾಸ್ಕ್ ಧರಿಸಬೇಕು. ಕೇಂದ್ರಕ್ಕೆ ವಿದ್ಯಾರ್ಥಿಗಳು ಮಾಸ್ಕ್ ಮರೆತು ಬಂದಿದ್ದರೆ ಅವರಿಗೆ ಇಲಾಖೆಯಿಂದ ಮಾಸ್ಕ್ ನೀಡಬೇಕೆಂದು ಅವರು ತಿಳಿಸಿದರು.
ಪ್ರತಿ ಕೇಂದ್ರವನ್ನು ಪರೀಕ್ಷೆ ದಿನದಂದು ಪರೀಕ್ಷೆಗೆ ಮೊದಲು ಮತ್ತು ಪರೀಕ್ಷೆಯ ನಂತರ ಸ್ಯಾನಿಟೈಸ್ ಮಾಡಬೇಕು. ಕೇಂದ್ರದ ಒಳಬರುವ ಮತ್ತು ಹೊರಹೋಗುವ ಎಲ್ಲರ ಕೈಗಳಿಗೂ ಸ್ಯಾನಿಟೈಸ್ ನೀಡಬೇಕೆಂದು ಮತ್ತು ಈ ಕುರಿತು ಆರೋಗ್ಯ ಇಲಾಖೆ ಅಧಿ ಕಾರಿಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ಡಿಸಿ ಮಾಲಪಾಟಿ ಸೂಚಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ, ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹೊÉàಟ್ ,ಡಿಡಿಪಿಐ ರಾಮಪ್ಪ ಮತ್ತು ಇತರೆ ಅಧಿ ಕಾರಿಗಳು ಇದ್ದರು.