ಹೊಸಪೇಟೆ: ಐತಿಹಾಸಿಕ ಹಂಪಿ ಹಾಗೂ ಅಂಜನಾದ್ರಿಯನ್ನು 500 ಕೋಟಿ ರೂ. ವೆಚ್ಚದಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದರು.
ತಾಲೂಕಿನ ಕಮಲಾಪುರದ ಮಯೂರ ಭುವನೇಶ್ವರಿ ಹೋಟೆಲ್‌ನಲ್ಲಿ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಧಿಕಾರಿಗಳು ಹಾಗೂ ಪ್ರವಾಸೋದ್ಯಮ ಇಲಾಖೆ ಅಧಿ ಕಾರಿಗಳ ಜೊತೆಗೆ ಬುಧವಾರ ನಡೆಸಿ ಅವರು ಅವರು ಮಾತನಾಡಿದರು. ಮತ್ತೂಂದು ಹಂಪಿ ನಿರ್ಮಾಣ ಅಸಾಧ್ಯ. ಹೀಗಾಗಿ ಈಗ ಇರುವ ಐತಿಹಾಸಿಕ ತಾಣದ ರಕ್ಷಣೆ ಮತ್ತು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುವುದು. ಹಂಪಿಯಲ್ಲಿ ಎಲ್ಲ ರೀತಿಯ ಮೂಲ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು. ಅಂಜನಾದ್ರಿ ಪ್ರವಾಸಿಗರ ನೆಚ್ಚಿನ ತಾಣವಾಗಿದ್ದು, ಪ್ರತಿನಿತ್ಯ ಪ್ರವಾಸಿಗರು ಭೇಟಿ ನೀಡುತ್ತಾರೆ.
ಬೆಟ್ಟಕ್ಕೆ ರೋಪ್ ವೇ ನಿರ್ಮಾಣ, ರಸ್ತೆಗಳ ಅಭಿವೃದ್ಧಿ, ಮೂಲ ಸೌಲಭ್ಯ ಒಳಗೊಂಡಂತೆ ಅಂಜನಾದ್ರಿಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಝೂಲಾಜಿಕಲ್ ಪಾರ್ಕ್ ಆವರಣದ 250 ಎಕರೆ ಪ್ರದೇಶದಲ್ಲಿ ಥೀಮ್ ಪಾರ್ಕ್, ತ್ರಿ ಸ್ಟಾರ್ ಹೋಟೆಲ್, ವಸತಿ ನಿಲಯ ಹಾಗೂ ಹೆಲಿಕಾಪ್ಟರ್ ಲ್ಯಾಂಡ್ ಏರಿಯಾ ಒಳಗೊಂಡಂತೆ ಸರ್ವತೋಮುಖ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸಲಾಗಿದೆ.
ಪ್ರವಾಸಿ ತಾಣಗಳನ್ನು ವೀಕ್ಷಿಸಲು ಬರುವ ವಿದ್ಯಾರ್ಥಿಗಳು ಉಳಿದುಕೊಳ್ಳಲು ಒಂದು ವಸತಿ ನಿಲಯವನ್ನು ಝೂಲಾಜಿಕಲ್ ಪಾರ್ಕ್ ಆವರಣದಲ್ಲಿ ನಿರ್ಮಿಸಲಾಗುವುದು. 1 ಸಾವಿರ ಶಾಲಾ-ಕಾಲೇಜು ಮಕ್ಕಳು ಉಳಿದುಕೊಳ್ಳಲು ಒಂದು ಸುಸಜ್ಜಿತವಾದ ವಸತಿ ನಿಲಯ ಪ್ರಾರಂಭಿಸಲಾಗುತ್ತದೆ. ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಣೆಗೆ ಬರುವ ವಿದ್ಯಾರ್ಥಿಗಳಿಗೆ ಅತಿ ಕಡಿಮೆ ದರದಲ್ಲಿ ಇಲ್ಲಿ ಉಳಿದುಕೊಳ್ಳಲು ಅವಕಾಶ ನೀಡಲಾಗುತ್ತದೆ. ಇದು ಪ್ರವಾಸೋದ್ಯಮ ಬೆಳವಣಿಗೆಗೆ ಸಹಕಾರಿಯಾಗಲಿದೆ.
ಮಕ್ಕಳಿಗೆ ಇತಿಹಾಸ ಪರಿಚಯಿಸುವ ಕೆಲಸ ಮಾಡಲಾಗುವುದು. ಸ್ಥಳೀಯರಿಗೆ ಅವಕಾಶ ನೀಡಲು ಹೋಂಸ್ಟೇಗಳನ್ನು ನಿರ್ಮಿಸುತ್ತಿದ್ದು, ಇದರಿಂದ ಇಲ್ಲಿನ ಸುತ್ತಮುತ್ತಲಿನ ಸ್ಥಳೀಯರಿಗೆ ಉದ್ಯೋಗ ನೀಡಿದಂತಾಗಲಿದೆ ಎಂದರು. ಇನ್ನು 8ರಿಂದ10 ದಿನದಲ್ಲಿ ಝೂಲಾಜಿಕಲ್ ಪಾರ್ಕ್ ಆವರಣದಲ್ಲಿ ತ್ರಿ ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲು ಎರಡು ಜಿಲ್ಲೆಗಳ ಅ ಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗಿದೆ ಎಂದರು. ಪ್ರವಾಸೋದ್ಯಮ ಇಲಾಖೆಯಿಂದ ಐತಿಹಾಸಿಕ ತಾಣ ಹಂಪಿಯಲ್ಲಿ ಕೈಗೊಂಡಿರುವ ಕಾಮಗಾರಿಗಳು ಈಗಾಗಲೇ ಶೇ. 80 ರಿಂದ 90 ರಷ್ಟು ಪೂರ್ಣಗೊಂಡಿದ್ದು, ಉಳಿದಿರುವ ಕೆಲಸಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಪ್ರವಾಸಿ ತಾಣಗಳಲ್ಲಿ ಮೂಲ ಸೌಲಭ್ಯ ಒದಗಿಸಲು ಹೆಚ್ಚಿನ ಪ್ರಾಶಸ್ತÂ ನೀಡಿ ಎಂದು ಅಧಿ ಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರುತಿ, ಬಳ್ಳಾರಿ ಜಿಲ್ಲಾ ಧಿಕಾರಿ ಪವನಕುಮಾರ ಮಾಲಪಾಟಿ, ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಪ್ರವಾಸೋದ್ಯಮ ಇಲಾಖೆ ಅಧಿ ಕಾರಿಗಳು ಮತ್ತು ಇತರರು ಇದ್ದರು.