Advertisement

ಸೆಮಿಸ್ಟರ್‌ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟ

09:14 PM Jul 04, 2021 | Team Udayavani |

ಬಳ್ಳಾರಿ : ಪದವಿ, ಸ್ನಾತಕೋತ್ತರ ಪದವಿ 1, 3, 5ನೇ ಸೆಮಿಸ್ಟರ್‌ ಪರೀಕ್ಷೆಗಳನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ನಗರದ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜು ಎದುರು ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು. ಒಂದೇ ತಿಂಗಳಲ್ಲಿ ಎರಡು ಸೆಮಿಸ್ಟರ್‌ ಪರೀಕ್ಷೆಗಳನ್ನು ಹೇರಿದ್ದು, ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ.

Advertisement

ಪರಿಣಾಮ ಕೇವಲ ಒಂದೇ ಪರೀಕ್ಷೆ ನಡೆಸುವಂತೆ ಕಳೆದ ಎರಡು ವಾರಗಳಿಂದ ರಾಜ್ಯದ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್‌, ಡಿಪ್ಲೊಮ ಹಾಗೂ ಫಾರ್ಮಸಿ ವಿದ್ಯಾರ್ಥಿಗಳು ಒಕ್ಕೊರಲಿನಿಂದ ಸರ್ಕಾರಕ್ಕೆ ಹಿಂದಿನ ಸೆಮಿಸ್ಟರ್‌ ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸುತ್ತಿದ್ದಾರೆ. ಹಲವು ರೀತಿಯಲ್ಲಿ ವಿದ್ಯಾರ್ಥಿಗಳ ಬೇಡಿಕೆಗಳನ್ನು ಸರ್ಕಾರಕ್ಕೆ ತಟ್ಟುವಂತೆ ಮಾಡಲು ಪ್ರಯತ್ನ ನಡೆದಿದೆ. ಆನ್‌ಲೈನ್‌ ಚಳವಳಿ, ಪ್ರಾತಿನಿಧಿ  ಕವಾಗಿ ಕಾಲೇಜು, ವಿವಿಗಳ ಮುಂದೆ ಚಳವಳಿ, ಪ್ರಾಂಶುಪಾಲರಿಗೆ, ವಿವಿಯ ಕುಲಪತಿಗಳಿಗೆ ಮನವಿ ಪತ್ರ ಸಲ್ಲಿಕೆ ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಕೆ ಸೇರಿ ಹಲವರು ರೀತಿಯಲ್ಲಿ ಈಗಾಗಲೇ ನಡೆದಿದೆ.

ಆದರೆ ಸರ್ಕಾರದಿಂದ ಯಾವುದೇ ಪ್ರತ್ಯುತ್ತರ ಇಲ್ಲದ ಕಾರಣ, ವಿದ್ಯಾರ್ಥಿಗಳು ಹೋರಾಟವನ್ನು ಇನ್ನೂ ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗುವ ಅನಿವಾರ್ಯತೆ ಬಂದಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಈ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ವಿದ್ಯಾರ್ಥಿಗಳ ಹೋರಾಟ ಸಮಿತಿ ಮತ್ತು ಎಐಡಿಎಸ್‌ಒ ರಾಜ್ಯ ಸಮಿತಿ ಜಂಟಿಯಾಗಿ ಇಂದು ಅಖೀಲ ಕರ್ನಾಟಕ ವಿದ್ಯಾರ್ಥಿಗಳ ಆನ್‌ಲೈನ್‌ ತರಗತಿ ಬಹಿಷ್ಕಾರಕ್ಕೆ ಕರೆ ನೀಡಿದೆ. ಈ ಕರೆ ಮೇರೆಗೆ ಬಳ್ಳಾರಿಯ ಬಹುತೇಕ ಕಾಲೇಜಗಳಲ್ಲಿ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗಳನ್ನು ಬಹಿಷ್ಕಾರ ಮಾಡಿದ್ದಾರೆ. ಸರ್ಕಾರ ನಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ತಕ್ಷಣವೇ ಸ್ಪಂದಿಸಬೇಕು ಎಂಬುದು ವಿದ್ಯಾರ್ಥಿಗಳ ಆಗ್ರಹವಾಗಿದೆ ಎಂದರು.

ಬಳಿಕ ಕಾಲೇಜಿನ ಪ್ರಾಚಾರ್ಯ ಪ್ರೊ| ಹೇಮಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು. ಜತೆಗೆ ಇವರ ಮೂಲಕ ವಿಎಸ್‌ ಕೆ ವಿವಿಗೂ ಕಳುಹಿಸಿಕೊಡಲಾಯಿತು. ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಗುರಳ್ಳಿ ರಾಜ, ಜಿಲ್ಲಾ ಸೆಕ್ರೆಟರಿಯೆಟ್‌ ಸದಸ್ಯ ಕೆ. ಈರಣ್ಣ, ಎಂ.ಶಾಂತಿ, ಅನುಪಮಾ ಮತ್ತು ಸದಸ್ಯರು, ವಿದ್ಯಾರ್ಥಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next