Advertisement
ಶಿಕ್ಷಣ ಕ್ಷೇತ್ರದಲ್ಲಿ ನಾಲ್ಕು ವರ್ಷದ ಪದವಿ ಹೇರಿಕೆಯ ವಿರುದ್ಧ ಅಖೀಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ನಡೆದ ರಾಜ್ಯಮಟ್ಟದ ವೆಬಿನಾರ್ ಸಮಾವೇಶದಲ್ಲಿ ಅವರು ಮಾತನಾಡಿದರು.
Related Articles
Advertisement
ಹಂಪಿ ಕನ್ನಡ ವಿವಿ ವಿಶ್ರಾಂತ ಉಪಕುಲಪತಿ ಪ್ರೊ| ಎ.ಮುರಿಗೆಪ್ಪ ಮಾತನಾಡಿ, ಈಗಿರುವ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಮತ್ತು ಮೂಲಭೂತ ಅವಶ್ಯಕತೆಗಳನ್ನು ಪೂರೈಸದೆ ಹಠಾತ್ತನೆ ಇಂತಹ ಬದಲಾವಣೆ ತರುವುದರಿಂದ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಬರುವುದಿಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ತರಬೇಕಾದರೆ ಕನಿಷ್ಠ ಎರಡು ವರ್ಷ ಹಿಡಿಯುತ್ತದೆ ಮತ್ತು ಶಿಕ್ಷಣ ತಜ್ಞರ, ಪಾಲಕರ, ಉಪನ್ಯಾಸಕರ ಅಭಿಪ್ರಾಯ ಪಡೆದು ತರಬೇಕಾಗುತ್ತದೆ. ಆದರೆ ಇದೆಲ್ಲ ನಿರ್ಲಕ್ಷಿಸಿ ಇದೀಗ ಹಠಾತ್ತನೆ ಇಂತಹ ಬದಲಾವಣೆ ಹೇರುವುದು ಶಿಕ್ಷಣ ಕ್ಷೇತ್ರಕ್ಕೆ ಸೂಕ್ತವಲ್ಲ ಎಂದು ಎಂದರು.
ಎಐಎಸ್‌ಇಸಿ ರಾಜ್ಯಾಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, ಜಾಗತೀಕರಣದ ಹಿನ್ನೆಲೆಯಲ್ಲಿ ಇಂದಿನ ಶಿಕ್ಷಣ ನೀತಿಯನ್ನು ರೂಪಿಸುತ್ತಿರುವುದರಿಂದ ಅದು ಜನರ ಆಶಯ ಈಡೇರಿಸುತ್ತಿಲ್ಲ. ಅಲ್ಲದೇ ಖಾಲಿ ಹೊಟ್ಟೆಯ ಶಿಕ್ಷಕ ಅದ್ಹೇಗೆ ವಿದ್ಯಾರ್ಥಿಗಳ ತಲೆಯನ್ನು ತುಂಬಬಲ್ಲ?. ಆದ್ದರಿಂದ ಸರ್ಕಾರ ಮೊದಲು ಅತಿಥಿ ಶಿಕ್ಷಕರ ಮತ್ತು ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸಬೇಕು. ಕೂಡಲೇ ಇಂತಹ ನೀತಿಯನ್ನು ಕೈ ಬಿಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಎಐಎಸ್‌ಇಸಿ ರಾಜ್ಯ ಸಮಿತಿ ಸದಸ್ಯರು ಮತ್ತು ಉಪನ್ಯಾಸಕ ಸೋಮಶೇಖರಗೌಡ ಮಾತನಾಡಿದರು. ರಾಜ್ಯ ಸೆಕ್ರೇಟರಿಯೇಟ್ ಸದಸ್ಯ ವಿ.ಎನ್. ರಾಜಶೇಖರ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಪ್ರತಿನಿ ಧಿಗಳು ಸಂವಾದದಲ್ಲಿ ಭಾಗವಹಿಸಿದ್ದರು.