ಬಳ್ಳಾರಿ: ಕೋವಿಡ್ ಮಧ್ಯೆಯೂ ಜು.19 ಮತ್ತು 22ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾಡಳಿತವು ಕೋವಿಡ್ ಮಾರ್ಗಸೂಚಿ ಅನುಸಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಪ್ರಸಕ್ತ 2020-21ನೇ ಸಾಲಿನ ಎಸ್ ಎಸ್‌ಎಲ್‌ಸಿ ಪರೀಕ್ಷೆಗಳು ಒಟ್ಟು 222 ಪರೀûಾ ಕೇಂದ್ರಗಳಲ್ಲಿ ನಡೆಯಲಿದ್ದು, 42989 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಕೆಂದ್ರಗಳ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಗಳ ಪರೀûಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ ಕಲಂ 144ರ ಮೇರೆಗೆ ನಿರ್ಬಂಧಿ ತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿ ಕಾರಿ, ಜಿಲ್ಲಾ ಧಿಕಾರಿ ಪವನಕುಮಾರ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಕೇಂದ್ರಗಳೆಂದು ನಿಗದಿಸಲ್ಪಟ್ಟ ಕಟ್ಟಡಗಳ ಸುತ್ತಲೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳಲ್ಲಿ ನಡೆಯಬಹುದಾದ ಅವ್ಯವಹಾರ ತಡೆಗಟ್ಟಲು ಕೇಂದ್ರಗಳ ಸುತ್ತಲೂ 200 ಮೀ ವ್ಯಾಪ್ತಿಯಲ್ಲಿ ಜೆರಾಕ್ಸ್ ಸೆಂಟರ್ ಮತ್ತು ಇಂಟ್ ರ್ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಮತ್ತು ವ್ಯಕ್ತಿಗಳ ಗುಂಪುಗಳು ಸೇರದಂತೆ ಪ್ರತಿಬಂ ಧಿಸಿ ಅವರು ಆದೇಶಿಸಿದ್ದಾರೆ.
ಪರೀಕ್ಷೆ ನಡೆಸುವ ಕುರಿತು ಸರ್ಕಾರ ನೀಡಿರುವ ಎಸ್‌ಒಪಿಯಲ್ಲಿ ತಿಳಿಸಿರುವ ಮಾರ್ಗಸೂಚಿಗಳನ್ನು ಪ್ರತಿ ಕೇಂದ್ರದಲ್ಲಿ ಅಳವಡಿಸಿಕೊಂಡು ಕಾರ್ಯನಿರ್ವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ಒಟ್ಟು 222 ಪರೀûಾ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಪ್ರತಿ ಕೊಠಡಿಗೆ 12 ಜನ ವಿದ್ಯಾರ್ಥಿಗಳ ಅನುಸಾರ 4038 ಕೊಠಡಿಗಳು ಮೀಸಲಿಡಲಾಗಿದೆ. 42989 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀûಾ ಕಾರ್ಯಕ್ಕೆ ತಲಾ 222 ಮುಖ್ಯ ಅ ಧೀಕ್ಷಕರು, ಸ್ಥಾನಿಕ ಜಾಗೃತಿದಳದ ಅಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ. 59 ಮಾರ್ಗಗಳನ್ನು ಗುರುತುಪಡಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಪ್ಪ ತಿಳಿಸಿದ್ದಾರೆ.
239 ಥರ್ಮಲ್ ಸ್ಕಾ ನರ್‌ಗಳು ಲಭ್ಯವಿದ್ದು, 42127 ಡೆಸ್ಕ್ಗಳ ಸಿದ್ಧತೆ ಮಾಡಿಟ್ಟುಕೊಳ್ಳಲಾಗಿದೆ. ಸೋಂಕಿತ ಲಕ್ಷಣವಿರುವ ಮಕ್ಕಳಿಗಾಗಿ ಪರೀಕ್ಷೆ ಬರೆಯಲು 222 ವಿಶೇಷ ಕೊಠಡಿಗಳ ಸಿದ್ಧತೆ ಮಾಡಿಟ್ಟುಕೊಳ್ಳಲಾಗಿದೆ. ಅವಳಿ ಜಿಲ್ಲೆಗಳಲ್ಲಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ 11 ಕೇಂದ್ರಗಳಿದ್ದು, ಅಲ್ಲಿ ಯಾವುದೇ ರೀತಿಯ ಅವಘಡಗಳಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.
ಕರ್ತವ್ಯ ನಿರ್ವಹಿಸುವ ಎಲ್ಲ ಶಿಕ್ಷಕರು, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಲಸಿಕೆ ನೀಡಲು ಕ್ರಮ. ಪ್ರತಿ ಪರೀûಾ ಕೇಂದ್ರದಲ್ಲಿ ವಿದ್ಯಾರ್ಥಿ ಹಾಗೂ ಸಿಬ್ಬಂದಿಗೆ ಥರ್ಮಲ್ ಸ್ಕಾ Âನಿಂಗ್ ಮೂಲಕ ಪರೀಕ್ಷಿಸಬೇಕು. ಮತ್ತು ಅಗತ್ಯವಿದ್ದಲ್ಲಿ ಪಲ್ಸ್ ಆಕ್ಸಿಮೀಟರ್ ಸಹ ಬಳಸಲು ನಿರ್ಧರಿಸಲಾಗಿದೆ. ಪ್ರತಿ ವಿದ್ಯಾರ್ಥಿ ಮಾಸ್ಕ್ ಧರಿಸಿಯೇ ಪರೀûಾ ಕೇಂದ್ರಕ್ಕೆ ಬರಬೇಕು. ಕರ್ತವ್ಯ ನಿರ್ವಹಿಸುವ ಅ ಧಿಕಾರಿ, ಶಿಕ್ಷಕರು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಎನ್-95 ಮಾಸ್ಕ್ ಧರಿಸಬೇಕು. ಕೇಂದ್ರಕ್ಕೆ ವಿದ್ಯಾರ್ಥಿಗಳು ಮಾಸ್ಕ್ ಮರೆತು ಬಂದಿದ್ದರೆ ಅವರಿಗೆ ಇಲಾಖೆಯಿಂದ ಮಾಸ್ಕ್ ನೀಡಲು ಕ್ರಮ ವಹಿಸಲಾಗಿದೆ.
ಪ್ರತಿ ಪರೀûಾ ಕೇಂದ್ರವನ್ನು ಪರೀಕ್ಷೆಯ ದಿನದಂದು ಪರೀಕ್ಷೆಗೆ ಮೊದಲು ಮತ್ತು ಪರೀಕ್ಷೆಯ ನಂತರ ಸ್ಯಾನಿಟೈಸ್ ಮಾಡಲಾಗುತ್ತದೆ. ಕೇಂದ್ರದ ಒಳಬರುವ ಮತ್ತು ಹೊರ ಹೋಗುವ ಎಲ್ಲರ ಕೈಗಳಿಗೂ ಸ್ಯಾನಿಟೈಸ್ ಸಿಂಪಡಿಸಲಾಗುತ್ತದೆ ಎಂದು ವಿವರಿಸಿದ್ದಾರೆ.