Advertisement

ಪಿಸಿ, ಪಿಎನ್‌ಡಿಟಿ ಕಾಯ್ದೆ ಪರಿಣಾಮಕಾರಿ ಅನುಷ್ಠಾನ

09:00 PM Jul 18, 2021 | Team Udayavani |

ಬಳ್ಳಾರಿ: ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಪತ್ತೆ ತಂತ್ರ ವಿಧಾನವನ್ನು ಬಳ್ಳಾರಿ ಜಿಲ್ಲೆಯಲ್ಲಿ ಪಿಸಿ ಮತ್ತು ಪಿಎನ್‌ಡಿಟಿ ಲಿಂಗ ಆಯ್ಕೆ ನಿಷೇಧ ಕಾಯ್ದೆ ಅನ್ವಯ ಪರಿಣಾಮಕಾರಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಆರೋಗ್ಯಾ ಧಿಕಾರಿ ಡಾ| ಎಚ್‌. ಜನಾರ್ಧನ್‌ ಹೇಳಿದರು.

Advertisement

ನಗರದ ಜಿಲ್ಲಾ ಆರೋಗ್ಯ ಇಲಾಖೆ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪಿಸಿ ಮತ್ತು ಪಿಎನ್‌ ಡಿಟಿ ಲಿಂಗ ಆಯ್ಕೆ ನಿಷೇಧ ಕಾಯ್ದೆ ಅನುಷ್ಠಾನದ ಜಿಲ್ಲಾ ಸಲಹಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಯಾವುದೇ ಸ್ಕಾ Â ಸೆಂಟರ್‌ಗಳಲ್ಲಿ ಸ್ಕಾ ನ್‌ ಯಂತ್ರದ ಪ್ರತಿಯೊಂದು ಉಪಕರಣಗಳು ಹಾಗೂ ವ್ಯಕ್ತಿಗಳ ದಾಖಲಾತಿಗಳನ್ನು ನೋಂದಣಿಯಾಗಿರಬೇಕು. ಸ್ಕಾ ನ್‌ಮಾಡಿದವರ ಮಾಹಿತಿಯನ್ನು ತಪ್ಪದೇ ನೋಂದಣಿ ಮಾಡಿಸಿರಬೇಕು. ತಪ್ಪಿದಲ್ಲಿ ಅವರ ವಿರುದ್ಧ ಕ್ರಿಮಿನಲ್‌ ಕೇಸ್‌ ನಮೂದಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸ್ಕಾ ನ್‌ ಸೆಂಟರ್‌ಗಳಲ್ಲಿ ಭ್ರೂಣಲಿಂಗ ಪತ್ತೆ ನಿಷೇಧ ಕುರಿತು ದೊಡ್ಡ ಅಕ್ಷರಗಳಲ್ಲಿ ಸಾರ್ವಜನಿಕರಿಗೆ ಕಾಣುವಂತೆ ನಾಮಫಲಕಗಳನ್ನು ಹಾಕಬೇಕು. ಸ್ಕಾ ನ್‌ ಸೆಂಟರ್‌ಗಳು ಪ್ರತಿ ತಿಂಗಳು ಜಿಲ್ಲಾ ಆಸ್ಪತ್ರೆಗೆ ವರದಿ ನೀಡಬೇಕು. ಕಾನೂನು ಬಾಹಿರ ಚಟುವಟಿಕೆ ಕಂಡಬಂದಲ್ಲಿ ಅವರ ಮೇಲೆ ಕಾನೂನು ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು. ಈ ಪಿಸಿ ಮತ್ತು ಪಿಎನ್‌ಡಿಟಿ ಲಿಂಗ ಆಯ್ಕೆ ನಿಷೇಧ ಕಾಯ್ದೆ ಅನುಷ್ಠಾನ ಸಮಿತಿಯಲ್ಲಿ ಸಲಹಾ ಸಮಿತಿ ಹಾಗೂ ತಪಾಸಣೆ ಮತ್ತು ಮಾನಿಟರ್‌ ಸಮಿತಿಯನ್ನು ರಚಿಸಲಾಗಿದೆ. ಯಾವುದೇ ದೂರುಗಳು ಬಂದಲ್ಲಿ ಅವುಗಳನ್ನು ಸಲಹಾ ಸಮಿತಿಯಲ್ಲಿ ಚರ್ಚಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದರು.

ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಭ್ರೂಣ ಲಿಂಗ ಪತ್ತೆ ಯಂತ್ರವಿರುವ ಎಲ್ಲ ಕಡೆ ಸ್ಕಾನಿಂಗ್‌ ಕಡ್ಡಾಯವಾಗಿ ಮಾಡಬೇಕು. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದರು. ಜಿಲ್ಲೆಯ ವ್ಯಾಪ್ತಿಯಲ್ಲಿ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್‌ ಮಾಡಲು ಅನುಕೂಲ ಮಾಡಿಕೊಡಬೇಕು. ಏನಾದರೂ ತೀವ್ರ ಸಮಸ್ಯೆಯುಂಟಾದರೆ ಮಾತ್ರ ನಗರಗಳತ್ತ ಕರೆತರಬೇಕು. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಭ್ರೂಣಲಿಂಗ ಹತ್ಯೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದ ಅವರು ಭ್ರೂಣಲಿಂಗ ಪತ್ತೆ ಮತ್ತು ಲಿಂಗಹತ್ಯೆ ಕಂಡು ಬಂದರೆ ಅಂತಹ ಕೇಂದ್ರಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಕಲ್ಯಾಣ ಅ ಧಿಕಾರಿ ಡಾ| ಪೂರ್ಣಿಮಾ ಕಟ್ಟಿಮನಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ತ್ರೀ ರೋಗ ತಜ್ಞೆ ಡಾ| ಶ್ರವಂತಿ, ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ರೇಡಿಯಾಲಜಿಸ್ಟ್‌ ಡಾ| ಎಸ್‌.ಶಂಭು, ಕೆ.ಎಚ್‌. ಗೋಪಾಲ, ಅರುಣ್‌ ಕುಮಾರ್‌ ಮತ್ತು ಇತರೆ ವೈದ್ಯರು ಹಾಗೂ ಸಮಿತಿ ಸದಸ್ಯರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next