Advertisement

ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ ಚುನಾವಣೆ

05:15 PM Jan 28, 2021 | |

ಬಳ್ಳಾರಿ: ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಅಧ್ಯಕ್ಷ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಸ್ಥಾನಗಳಿಗೆ ಇದೇ ಮೊದಲ ಬಾರಿಗೆ ಫೆ. 14ರಂದು ಚುನಾವಣೆ ನಡೆಯಲಿದೆ ಎಂದು ಜಿಲ್ಲಾ ಉಪಚುನಾವಣಾಧಿ ಕಾರಿ ಎನ್‌.ಪಿ.
ಲಿಂಗನಗೌಡ ತಿಳಿಸಿದರು.

Advertisement

ಅವರು ವೀ.ವಿ. ಸಂಘದ ಕಚೇರಿ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಖೀಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಸ್ಥಾನಗಳಿಗೆ ಈ ಮೊದಲು ಅವಿರೋಧವಾಗಿ ಆಯ್ಕೆಯಾಗುತ್ತಿತ್ತು. ಇದೇ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ. ಜ. 28ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಫೆ. 2ರಂದು ಮಧ್ಯಾಹ್ನ 3 ಗಂಟೆಗೆ ನಾಮಪತ್ರ ಸಲ್ಲಿಕೆ ಕೊನೆಗೊಳ್ಳಲಿದೆ. ಫೆ. 3ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಯಲಿದ್ದು, ಫೆ. 6ರಂದು ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ಫೆ. 14ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ನಂತರ ಮತ
ಎಣಿಕೆ ಕಾರ್ಯ ನಡೆಯಲಿದೆ ಎಂದವರು ವಿವರಿಸಿದರು.

ಜಿಲ್ಲೆಯ 3517 ಮಹಾಸಭಾದ ಸದಸ್ಯರು ಫೆ.14 ರಂದು ಮತದಾನ ಮಾಡಲಿದ್ದಾರೆ ಎಂದ ಅವರು, ಜಿಲ್ಲಾ ಕೇಂದ್ರ ಸೇರಿದಂತೆ ಸಿರುಗುಪ್ಪ, ಕೂಡ್ಲಿಗಿ ಹಾಗೂ ಹೊಸಪೇಟೆ ತಾಲೂಕು ಕೇಂದ್ರಗಳಲ್ಲಿ ಚುನಾವಣೆಗೆ ಮತಗಟ್ಟೆಗಳನ್ನು ವ್ಯವಸ್ಥೆ ಮಾಡಲಾಗಿದೆ.
ಬಳ್ಳಾರಿ ನಗರದಲ್ಲಿ 8 ಮತಗಟ್ಟೆಗಳು, ಉಳಿದಂತೆ ಸಿರುಗುಪ್ಪ, ಕೂಡ್ಲಿಗಿ ಹಾಗೂ ಹೊಸಪೇಟೆ ತಾಲೂಕಿನಲ್ಲಿ ತಲಾ ಒಂದು ಮತಗಟ್ಟೆಗಳನ್ನು ವ್ಯವಸ್ಥೆ ಮಾಡಲಾಗಿದೆ  ಎಂದು ತಿಳಿಸಿದರು.

ಐದು ವರ್ಷಗಳ ಅವಧಿ ಗೆ ಮಹಾಸಭಾದ ಜಿಲ್ಲಾಧ್ಯಕ್ಷ ಹಾಗೂ 30 ಜನ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಪೈಕಿ 10 ಮಹಿಳೆಯರು ಹಾಗೂ 20 ಸಾಮಾನ್ಯರಿಗೆ ಮತದಾನ ಮಾಡಬಹುದು. ಒಬ್ಬ ಮತದಾರ 30 ಮತಗಳನ್ನು ಹಾಕಬಹುದು. ಆದರೆ,
31 ಮತ ಹಾಕಿದರೆ ಅಂತಹ ಮತವು ಕುಲಗೆಡುತ್ತದೆ. ಕಡಿಮೆ ಸಂಖ್ಯೆಯಲ್ಲಿ ಮತದಾನ ಮಾಡಬಹುದು. ಆದರೆ, ನಿರ್ದಿಷ್ಟ ಸಂಖ್ಯೆಗಿಂತ ಹೆಚ್ಚು ಮತದಾನ ಮಾಡುವಂತಿಲ್ಲ. ಬಳ್ಳಾರಿ ಹಾಗೂ ಕುರುಗೋಡು ತಾಲೂಕಿನ ಸದಸ್ಯರು ಬಳ್ಳಾರಿಯ ಅಲ್ಲಂ ಸುಮಂಗಳಮ್ಮ ಮಹಿಳಾ ವಿದ್ಯಾಲಯದ ಆವರಣದಲ್ಲಿ ಮತದಾನ ಮಾಡಬೇಕು. ಹೊಸಪೇಟೆ ಹಾಗೂ ಕಂಪ್ಲಿ ತಾಲೂಕಿನ ಮತದಾರರು ಹೊಸಪೇಟೆಯ ವಿಜಯನಗರ ಕಾಲೇಜು ಆವರಣದಲ್ಲಿ ಹಾಗೂ ಕೂಡ್ಲಿಗಿ, ಹರಪನಹಳ್ಳ, ಹಗರಿಬೊಮ್ಮನಹಳ್ಳಿ, ಸಂಡೂರು ಹಾಗೂ ಹಡಗಲಿ ತಾಲೂಕಿನ ಮತದಾರರು
ಕೂಡ್ಲಿಗಿಯ ಹಿರೇಮಠ ವಿದ್ಯಾಪೀಠ ಪ್ರಾಂಗಣದಲ್ಲಿನ ಬಡ ವಿದ್ಯಾರ್ಥಿಗಳ ಪ್ರಸಾದ ನಿಲಯದ ಆವರಣದಲ್ಲಿ ಮತದಾನ ಮಾಡಬೇಕಾಗುತ್ತದೆ. ಸಿರುಗುಪ್ಪ ತಾಲೂಕಿನ ಮತದಾರರು ಸಿರುಗುಪ್ಪ ನಗರದ ವಿವೇಕಾನಂದ ಪಬ್ಲಿಕ್‌ ಶಾಲೆಯಲ್ಲಿ ಮತದಾನ ಮಾಡಬೇಕು ಎಂದು ತಿಳಿಸಿದರು.

ಓದಿ :ಕಸಾಪ ಕನ್ನಡಿಗರ ಏಕೈಕ ಪ್ರಾತಿನಿಧಿ ಕ ಸಂಸ್ಥೆ: ಮಹೇಶ ಜೋಶಿ

Advertisement
Advertisement

Udayavani is now on Telegram. Click here to join our channel and stay updated with the latest news.

Next