Advertisement

ಗುಳೇದ ಲಕ್ಕಮ್ಮ ನಿನ್ನಾಲ್ಕು ಉಧೋ..ಉಧೋ..

06:08 PM Jan 28, 2021 | Team Udayavani |

ಹರಪನಹಳ್ಳಿ: ತಾಲೂಕಿನ ಹುಲಿಕಟ್ಟೆ ಗ್ರಾಮದ ಸಮೀಪದ ಅರಣ್ಯದಲ್ಲಿ ಎರಡು ವರ್ಷಕ್ಕೊಮ್ಮೆ ನಡೆಯುವ ಗುಳೇದ ಲಕ್ಕಮ್ಮದೇವಿ ಜಾತ್ರೋತ್ಸವ ಬುಧವಾರ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಕೈಯಲ್ಲಿ ಹಣ್ಣು-ಕಾಯಿ, ಊದುಬತ್ತಿ ಹಿಡಿದು ಸಾಮಾಜಿಕ ಅಂತರದೊಂದಿಗೆ ದೇವಿಯ ದರ್ಶನ ಪಡೆದುಕೊಂಡರು. ಭಕ್ತರು
ಲಕ್ಕಮ್ಮ ನಿನ್ನಾಲ್ಕು ಉಧೋ… ಉಧೋ… ಎಂಬ ಜಯಘೋಷ ಮೊಳಗಿಸಿದರು.

Advertisement

ಮಂಗಳವಾರ ಹುಲಿಕಟ್ಟೆ ಗ್ರಾಮದೊಳಗಿನ ದೇವಸ್ಥಾನದಿಂದ ಪಕ್ಕದ ಕೆರೆಯಲ್ಲಿ ಗಂಗೆಪೂಜೆ ಸಲ್ಲಿಸಿದ ನಂತರ ಅಲಂಕೃತ ಲಕ್ಕಮ್ಮದೇವಿಯ ಮೂರ್ತಿಯನ್ನು ಸಕಲ ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ದೇವಿಯ ಮೂಲಸ್ಥಾನಕ್ಕೆ ಬಂದು ಪ್ರತಿಷ್ಠಾಪನೆಗೊಳ್ಳುತ್ತಿದ್ದಂತೆಯೇ ಭಕ್ತರ ಜಯಘೋಷ ಎಲ್ಲೆ ಮೀರಿತ್ತು.

ವಿವಿಧ ತಾಲ್ಲೂಕುಗಳಲ್ಲದೇ ನೆರೆಯ ಚಿತ್ರದುರ್ಗ, ಬಳ್ಳಾರಿ, ಹಾವೇರಿ ಹಾಗೂ ಗದಗ ಜಿಲ್ಲೆಗಳಿಂದ ಟ್ರಾಕ್ಟರ್‌, ಎತ್ತಿನಗಾಡಿ, ವಿವಿಧ ವಾಹನಗಳ ಮೂಲಕ ಭಕ್ತರು ಆಗಮಿಸಿ ದೇವಿ ಕೃಪೆಗೆ ಪಾತ್ರರಾಗಲು ಶ್ರದ್ಧಾಭಕ್ತಿಯಿಂದ ವಿವಿಧ ಬಗೆಯ ಹರಕೆ ಸಲ್ಲಿಸಿ ಪುನೀತರಾದರು.

ಭಕ್ತರ ಸುರಕ್ಷತೆಗಾಗಿ ಹಾಗೂ ಸಾರ್ವಜನಿಕರ ಚಲನಲನ ನಿಗಾಯಿಡಲು ದೇವಸ್ಥಾನದ ಸುತ್ತಲೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಜನಜಂಜುಳಿ ತಪ್ಪಿಸಲು ಭಕ್ತರು ಸರದಿ ಸಾಲಿನಲ್ಲಿ ಬರುವಂತೆ ದೇವಸ್ಥಾನದ ಸುತ್ತಲೂ ಬ್ಯಾರಿಕೆಡ್‌ ಹಾಕಿ ಧ್ವನಿವರ್ಧಕದ
ಮೂಲಕ ಜನತೆಗೆ ಜಾಗೃತಿ ಮೂಡಿಸಲಾಯಿತು. ಇಷ್ಟಾರ್ಥ ಸಿದ್ಧಿಗಾಗಿ ಒಂಬತ್ತು ದಿನಗಳ ಕಾಲ ನಿಷ್ಕಲ್ಮಶ ಭಕ್ತಿಯಿಂದ ಗೋಸಸಿಯನ್ನು ಬಿದರಿನ ಬುಟ್ಟಿಯಲ್ಲಿ ಬೆಳೆದು, ಬಣ್ಣದ ಕಾಗದ ಹಾಗೂ ಅವರದೇ ಆದ ವಿಶಿಷ್ಟ ಶೈಲಿಯಲ್ಲಿ ಅಲಂಕರಿಸಿದ ಪುಟ್ಟಿಯನ್ನು ತಲೆಯ ಮೇಲೆಟ್ಟಿಕೊಂಡು ಅಮ್ಮನ ಅಡಿದಾವರೆಗೆ ಮಂಗಳವಾರ ರಾತ್ರಿಯೇ ಅರ್ಪಿಸಿದರು.

ಓದಿ : ನುಗ್ಗೆ ಸೊಪ್ಪಿನ ಬೇಸಾಯದ ಬಗ್ಗೆ ಸಂಪೂರ್ಣ ಮಾಹಿತಿ

Advertisement
Advertisement

Udayavani is now on Telegram. Click here to join our channel and stay updated with the latest news.

Next