Advertisement

ಪಲ್ಸ್‌ ಪೋಲಿಯೋ ಅಭಿಯಾನ ಯಶಸ್ಸಿ ಗೆ ಕರೆ

04:37 PM Jan 29, 2021 | Team Udayavani |

ಬಳ್ಳಾರಿ: ಜಿಲ್ಲೆಯಲ್ಲಿ ಇದೇ ಜ.31ರಿಂದ ಫೆ.3ರವರೆಗೆ ನಾಲ್ಕು ದಿನಗಳ ಕಾಲ ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನ ನಡೆಯಲಿದ್ದು, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಲಾದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ಪವನಕುಮಾರ್‌ ಮಾಲಪಾಟಿ ಹೇಳಿದರು. ನಗರದ ಡಿಸಿ ಕಚೇರಿಯಲ್ಲಿ ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನ ಕುರಿತು ಗುರುವಾರ ನಡೆದ ಜಿಲ್ಲಾ ಟಾಸ್ಕ್ಫೋರ್ಸ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 5 ವರ್ಷದೊಳಗಿನ ಯಾವುದೇ ಮಗು ಕೂಡ ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಈ ಮೂಲಕ ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನದ ಯಶಸ್ವಿಗೆ ಕೈಜೋಡಿಸಬೇಕು ಎಂದು ಹೇಳಿದರು.

Advertisement

ದೇಶವು ಈಗಾಗಲೇ ಪೋಲಿಯೋ ಮುಕ್ತವಾಗಿದೆ. ಆದರೇ ನೆರೆಹೊರೆಯ ದೇಶಗಳಲ್ಲಿ ಇನ್ನೂ ಇದೆ. ಅದು ನಮ್ಮಲ್ಲಿಯೂ ಮತ್ತೆ ಮರುಕಳಿಸಬಹುದು ಎಂಬ ಹಿನ್ನೆಲೆಯಲ್ಲಿ ಈ ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನದ ಸಂದರ್ಭದಲ್ಲಿ ಕಡ್ಡಾಯವಾಗಿ ಕೋವಿಡ್‌ ಸುರಕ್ಷ ಕ್ರಮ ಪಾಲಿಸಬೇಕು. ನಗರ ಮತ್ತು
ಗ್ರಾಮೀಣ ಪ್ರದೇಶದಲ್ಲಿ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಜನಪ್ರತಿನಿಗಳ ಮೂಲಕ ಉದ್ಘಾಟಿಸಬೇಕು. ಎಲ್ಲ ಬೂತ್‌ ಗಳ ಉದ್ಘಾಟನೆಯನ್ನು ಅಲ್ಲಿನ ಜನಪ್ರತಿನಿಧಿ ಗಳ ಮೂಲಕ ಅದ್ಧೂರಿಯಾಗಿ ನೆರವೇರಿಸಿ ನಾಲ್ಕು ದಿನಗಳ ಕಾಲ ಪಲ್ಸ್‌ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಾಕೀತು ಮಾಡಿದರು.

ನಾಲ್ಕು ದಿನಗಳ ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನಕ್ಕೆ ಬೇಕಾದ ಅಗತ್ಯ 132 ವಾಹನಗಳ ವ್ಯವಸ್ಥೆಯನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಕೂಡಲೇ ಮಾಡುವಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಮಾಲಪಾಟಿ, ಲಸಿಕೆಯನ್ನು ಸುರಕ್ಷಿತವಾಗಿಡಲು ಹಾಗೂ ಶೀತಲ ಪ್ಯಾಕ್‌ಗಳನ್ನು ತಯಾರಿಸಲು ನಿರಂತರ ವಿದ್ಯುತ್‌ತ್ಛಕ್ತಿಯ ಅವಶ್ಯಕತೆ ಇರುವುದರಿಂದ ನಗರ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪ್ರದೇಶಗಳಲ್ಲಿ ವಿದ್ಯುತ್‌ತ್ಛಕ್ತಿ ನಿರಂತರವಾಗಿ ಸರಬರಾಜು ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

324818 ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಪ್ರಸ್ತುತ ಪಲ್ಸ್‌ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 5 ವರ್ಷದೊಳಗಿನ 324818 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ನಗರ ಪ್ರದೇಶದಲ್ಲಿ 549 ಮತ್ತು ಗ್ರಾಮೀಣ ಪ್ರದೇಶದಲ್ಲಿ 1357 ಲಸಿಕಾ ಬೂತ್‌ಗಳು ಸೇರಿದಂತೆ ಜಿಲ್ಲೆಯಲ್ಲಿ 1906 ಲಸಿಕಾ ಬೂತ್‌ಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. 1720 ಮನೆ ಭೇಟಿ ತಂಡಗಳು, 103 ಟ್ರಾನ್ಸಿಟ್‌ ತಂಡಗಳು, 22 ಮೊಬೈಲ್‌ ತಂಡಗಳು, ಮೈಗ್ರಟರಿ ಮತ್ತು ಹೈ ರಿಸ್ಕ್ ಏರಿಯಾದಲ್ಲಿ 602 ತಂಡಗಳು, ಹೈರಿಸ್ಕ್ ಏರಿಯಾದಲ್ಲಿ ಮನೆ ಮನೆ ಭೇಟಿ ಮಾಡಲು 166 ತಂಡಗಳು ಸೇರಿದಂತೆ ಒಟ್ಟು 1845 ತಂಡಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ| ಅನಿಲಕುಮಾರ್‌
ಅವರು ಸಭೆಗೆ ವಿವರಿಸಿದರು.

ನಗರ ಪ್ರದೇಶದಲ್ಲಿ 1252 ಮತ್ತು ಗ್ರಾಮೀಣ ಪ್ರದೇಶದಲ್ಲಿ 2830 ವ್ಯಾಕ್ಸಿನೇಟರ್ಗಳನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ. ಈ ಅಭಿಯಾನ ಸುಸೂತ್ರವಾಗಿ ಜರುಗುವ ನಿಟ್ಟಿನಲ್ಲಿ 363 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಮತ್ತು 8 ಜನ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. 415785 ಡೋಸ್‌ ಲಸಿಕೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.

Advertisement

ಡಿಎಚ್‌ಒ ಡಾ| ಎಚ್‌.ಜನಾರ್ದನ್‌, ವಿಮ್ಸ್‌ ನಿರ್ದೇಶಕ ಡಾ.ಗಂಗಾಧರಗೌಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಓದಿ : ಖಾಸಗಿ ಶಾಲೆಗಳು ಡೊನೇಷನ್, ಅಭಿವೃದ್ಧಿ ಶುಲ್ಕ ಪಡೆಯುವಂತಿಲ್ಲ: ಶುಲ್ಕ ನಿಗದಿ ಮಾಡಿದ ಸರ್ಕಾರ

Advertisement

Udayavani is now on Telegram. Click here to join our channel and stay updated with the latest news.

Next