ಸಿರುಗುಪ್ಪ: ನರೇಗಾ ಯೋಜನೆಯಡಿಯಲ್ಲಿ ಒಂದು ವರ್ಷದಲ್ಲಿ 100 ದಿನ ಕೆಲಸ ಮಾಡಲು ಅವಕಾಶವವಿದೆ. ಮಹಿಳೆಯರು ಇದರ ಸದುಪಯೋಗಪಡೆಯಬೇಕೆಂದು ತಾಪಂ ಇಒ ಶಿವಪ್ಪ ಸುಬೇದಾರ್ ತಿಳಿಸಿದರು.
ತಾಲೂಕಿನ ಕೊಂಚಿಗೇರಿ ಗ್ರಾಮದಲ್ಲಿ ನಡೆದ ಮಹಿಳಾ ಕಾಯಕೋತ್ಸವ ಸಮೀಕ್ಷೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗಖಾತ್ರಿ ಯೋಜನೆಯಡಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಕಡಿಮೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಮಹಿಳಾ ಕಾಯಕೋತ್ಸವ ಹಮ್ಮಿಕೊಂಡು ಜಾಗೃತಿ ಮೂಡಿಸಲಾಗುತ್ತಿದೆ. ಜ. 15ರಿಂದ ಮಾ.15ರವರೆಗೆ ಈ ಅಭಿಯಾನ
ನಡೆಯಲಿದೆ.
ಮಹಿಳೆಯರುವ ಮತ್ತು ಪುರುಷರಿಗೆ ಸಮಾನ ಕೂಲಿ ನೀಡಲಾಗುತ್ತಿದ್ದು ವರ್ಷದಲ್ಲಿ 100 ದಿನ ಕೆಲಸ ಮಾಡಿದರೆ ರೂ. 28,500 ಪಡೆಯಬಹುದು. ತಾಲೂಕಿನ ಕೊಂಚಿಗೇರಿ, ಶಾನವಾಸಪುರ, ಕರೂರು, ಉಪ್ಪಾರಹೊಸಳ್ಳಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸದ್ಯ ಮಹಿಳಾ ಕಾಯಕೋತ್ಸವ ಸಮೀಕ್ಷೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯನಿರ್ವಹಿಸಲು ಉತ್ತೇಜಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಡಿ ಫಲಾನುಭವಿಗಳಾಗಿ ಕೆಲಸ ಕಾರ್ಯಗಳನ್ನು ನಿರ್ವಹಿಸಿ ಆರ್ಥಿಕವಾಗಿ ಸದೃಢರಾಗಬೇಕೆಂದು ಹೇಳಿದರು.
ನರೇಗಾ ತಾಲೂಕು ನಿರ್ದೇಶಕಿ ನಿರ್ಮಲ, ಸ್ವತ್ಛ ಭಾರತ್ ಅಭಿಯಾನ ಯೋಜನೆಯ ನೋಡಲ್ ಅಧಿಕಾರಿ ನರಸಪ್ಪ, ಆಶಾ, ಅಂಗನವಾಡಿ, ಗ್ರಾಪಂ ಸಿಬ್ಬಂದಿ ಇದ್ದರು.
ಓದಿ: ಕ್ರಿಕೆಟ್; ಬೆಳಗಾವಿ ತಂಡಕ್ಕೆ ಪ್ರಶಸ್ತಿ