Advertisement

ಉತ್ತಮ ಶಿಕ್ಷಣ ಪಡೆದು ಪ್ರಗತಿ ಸಾಧಿಸಿ: ಕೊಟ್ರೇಶ್‌

04:38 PM Feb 06, 2021 | Team Udayavani |

ಸಂಡೂರು: ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾಲೇಜಿನಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ಐಕ್ಯೂಎಸ್‌ಸಿ ಅಡಿಯಲ್ಲಿ ಮತ್ತು ವಿಭಾಗವಾರು ಹಮ್ಮಿಕೊಳ್ಳಲಾಗುತ್ತಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಇವುಗಳಲ್ಲಿ ಪಾಲ್ಗೊಳ್ಳುವ ಮೂಲಕ ಉತ್ತಮ ಶಿಕ್ಷಣ ಪಡೆಯುವುದರ ಜೊತೆಗೆ ಪ್ರಗತಿ ಸಾಧಿಸಬೇಕು ಎಂದು ಪ್ರಾಂಶುಪಾಲರಾದ ಕೊಟ್ರೇಶ್‌ ತಿಳಿಸಿದರು.

Advertisement

ಅವರು ಪಟ್ಟಣದ ಸರ್ಕಾರ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶುಭಾಕಾಂಕ್ಷ(ಇಂಡಕ್ಷನ್‌ ಪ್ರೋಗ್ರಾಮ್‌) 2 ದಿನಗಳ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಾಲೇಜು ಪ್ರಾರಂಭವಾದಾಗ ಪ್ರೌಢಶಾಲಾ ಕಟ್ಟಡದಲ್ಲಿ ಪ್ರಾರಂಭವಾಗಿ ಇಂದು ಸ್ವಂತ ಹಾಗೂ ವಿಶೇಷವಾದ ಕಟ್ಟಡದಲ್ಲಿ ನಡೆಯುತ್ತಿದ್ದು ಹೆಮ್ಮೆಯ ಸಂಗತಿಯಾಗಿದೆ. ಪ್ರಾರಂಭದಲ್ಲಿ
ಕೆಲವೇ ವಿದ್ಯಾರ್ಥಿಗಳಿದ್ದರು. ಆದರೆ ಈಗ ವಿಜ್ಞಾನ, ವಾಣಿಜ್ಯ, ಕಲಾವಿಭಾಗದಲ್ಲಿ ಒಟ್ಟು 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಅದಕ್ಕೆ ಬೇಕಾದ ಗ್ರಂಥಾಲಯ, ಸಿಬ್ಬಂದಿ ವ್ಯವಸ್ಥೆ, ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದು, ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಆದ್ದರಿಂದ ಉತ್ತಮ ರೀತಿಯಲ್ಲಿ ಶಿಸ್ತಿನೊಂದಿಗೆ ಶಿಕ್ಷಣದ ಲಾಭ ಪಡೆದುಕೊಳ್ಳಬೇಕು ಎಂದು ಕರೆನೀಡಿದರು.

ಈ ಸಂದರ್ಭದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರು ಹಾಗೂ ಕಾರ್ಯಕ್ರಮದ ಸಂಯೋಜಕರಾದ ಕಿಶೋರ್‌.ಇ.ಜಿ. ಅವರು ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಇಂಗ್ಲಿಷ್‌ ವಿಭಾಗದ ಮುಖ್ಯಸ್ಥರಾದ ಪ್ರಶಾಂತ ಮೋರೆ, ಕೊಟ್ರೇಶ್‌ .ಪಿ. ಕಿಶೋರ್‌, ಶಂಕರಗೌಡ, ರೇಖಾ.ಇ.ಜಿ., ಸಲ್ಮಾ ಇತರ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಓದಿ : ನಾಳೆ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರದಾನ

Advertisement

Udayavani is now on Telegram. Click here to join our channel and stay updated with the latest news.

Next