ಬಳ್ಳಾರಿ: ಖಾಸಗಿಯಾಗಿ ನೋಂದಾಯಿಸಿಕೊಂಡ ವಿದ್ಯಾರ್ಥಿಗಳಿಗೆ ಪರೀûಾ ಫಲಿತಾಂಶ ತಿರಸ್ಕಾರ ಮಾಡಿದ (ಅಂಕಗಳು ತೃಪ್ತಿ ಇರದ ಹಿನ್ನೆಲೆ) ಹೊಸ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾರ್ಥಿಗಳಿಗೆ ಆ. 19ರಿಂದ ಸೆ.3ರವರೆಗೆ ಜಿಲ್ಲೆಯ 8 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ.
ಇದರ ಜೊತೆಗೆ ಆ. 28 ಮತ್ತು 29ರಂದು 22 ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ನಡೆಸಲಾಗುತ್ತಿದೆ. ಈ ಪರೀಕ್ಷೆಗಳು ಸುಸೂತ್ರವಾಗಿ ಜರುಗುವ ನಿಟ್ಟಿನಲ್ಲಿ ಪರೀಕ್ಷೆ ಸಮಯದಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಬಳ್ಳಾರಿ ಸಹಾಯಕ ಆಯುಕ್ತ ಡಾ| ಆಕಾಶ್ ಶಂಕರ್ ಅವರು ಅಧಿ ಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪರೀಕ್ಷೆ ಸಂಬಂಧಿ ತ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆ. 19ರಿಂದ ಸೆ. 3ರವರೆಗೆ 8 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಇದರ ಜೊತೆಗೆ ಆ. 28 ಮತ್ತು 29ರಂದು ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿವೆ. ಈ ಸಮಯದಲ್ಲಿ ಪರೀಕ್ಷೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಪರೀûಾ ಕೇಂದ್ರಗಳಲ್ಲಿ ಕೋವಿಡ್ ಮಾರ್ಗಸೂಚಿ ಅನ್ವಯ ಎಲ್ಲರೂ ಮಾಸ್ಕ್ ಮತ್ತು ಸಾಮಾಜಿಕ ಅಂತರ ಪಾಲಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಸರಿಯಾದ ಸಮಯಕ್ಕೆ ಪ್ರಶ್ನೆ ಪತ್ರಿಕೆ ತಲುಪಿಸುವ ಕೆಲಸ ಮಾಡಬೇಕು ಎಂದು ಅಧಿ ಕಾರಿಗಳಿಗೆ ಸೂಚಿಸಿದರು.
ದ್ವಿತೀಯ ಪಿಯುಸಿ ಕೇಂದ್ರಗಳ ವಿವರ: ಸಂಡೂರು ಬಾಲಕರ ಪದವಿಪೂರ್ವ ಕಾಲೇಜು, ಸಿರುಗುಪ್ಪ ವಿ.ಕೆ.ಜೆ. ಪದವಿಪೂರ್ವ ಕಾಲೇಜು, ಕೂಡ್ಲಿಗಿ ಸರ್ಕಾರಿ ಪದವಿಪೂರ್ವ ಕಾಲೇಜು, ಹೆಚ್.ಬಿ.ಹಳ್ಳಿ ಗಂ.ಭೀ ಸರ್ಕಾರಿ ಪದವಿಪೂರ್ವ ಕಾಲೇಜು, ಬಳ್ಳಾರಿ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಹೊಸಪೇಟೆ ಚಿತ್ತವಾಡ್ಗಿ ಸರ್ಕಾರಿ ಪದವಿಪೂರ್ವ ಕಾಲೇಜು, ಹಡಗಲಿಯ ಎಸ್‌ಎಸ್‌ಕೆ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಹರಪನಹಳ್ಳಿಯ ಸರ್ಕಾರಿ ಪದವಿಪೂರ್ವ ಕಾಲೇಜು ಒಳಗೊಂಡಂತೆ ಒಟ್ಟು 8 ಕೇಂದ್ರಗಳಲ್ಲಿ 1129 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ರಾಜು ಅವರು ವಿವರಿಸಿದರು.
ಆ. 29ಮತ್ತು 29ರಂದು 22 ಕೇಂದ್ರಗಳಲ್ಲಿ ಪರೀಕ್ಷೆ: ಬಳ್ಳಾರಿಯ 9, ಹೊಸಪೇಟೆಯ 5, ಕೂಡ್ಲಿಗಿ, ಸಂಡೂರು, ಹರಪನಹಳ್ಳಿ ಹಾಗೂ ಸಿರುಗುಪ್ಪ ಒಳಗೊಂಡಂತೆ ನಾಲ್ಕು ತಾಲೂಕಿನ ತಲಾ 2 ಪರೀûಾ ಕೇಂದ್ರಗಳು ಸೇರಿದಂತೆ ಒಟ್ಟು 22 ಪರೀûಾ ಕೇಂದ್ರಗಳಲ್ಲಿ 7824 ಜನ ವಿದ್ಯಾರ್ಥಿಗಳು ಆ. 28 ಮತ್ತು 29ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುತ್ತಿದ್ದು, ಇದಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜು ಅವರು ವಿವರಿಸಿದರು.
ಆ. 30ರಂದು ಸರಕಾರಿ ಮಾಜಿ ಪುರಸಭೆ ಪದವಿಪೂರ್ವ ಕಾಲೇಜಿನಲ್ಲಿ (ಹೊರನಾಡು ಕನ್ನಡಿಗ ಮತ್ತು ಗಡಿನಾಡ ಕನ್ನಡಿಗರಿಗೆ ಕನ್ನಡ ಸಾಮಾನ್ಯ ಪ್ರವೇಶ ಪರೀಕ್ಷೆ) 200 ವಿದ್ಯಾರ್ಥಿಗಳು ಪರೀಕ್ಷೆಯ ಬರೆಯಲಿದ್ದಾರೆ ಎಂದರು. ಸಹಾಯಕ ಆಯುಕ್ತ ಆಕಾಶ ಶಂಕರ್ ಅವರು ಕೇಂದ್ರಕ್ಕೆ ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆಯನ್ನು ತಲುಪಿಸುವುದು ಮತ್ತು ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲು ಪ್ರತಿ ತಾಲೂಕಿನಲ್ಲಿ ತ್ರಿಸದಸ್ಯ ಸಮಿತಿ ನೇಮಕ ಮಾಡಲಾಗಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರದ ಜೊತೆಗೆ ಕಡ್ಡಾಯವಾಗಿ ಒಂದು ಗುರುತಿನ ಚೀಟಿಯನ್ನು ತರಬೇಕು ಎಂದು ಅವರು ತಿಳಿಸಿದರು.
ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಲಾಗುತ್ತದೆ. ಪರೀûಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಮತ್ತು ಬಿಗಿ ಬಂದೋಬಸ್ತ್ ತಡೆಯುವ ಕಾರ್ಯವನ್ನು ಪೊಲೀಸ್ ಇಲಾಖೆಯಿಂದ ಮಾಡಲಾಗುತ್ತದೆ ಎಂದರು. ಜಿಲ್ಲಾಮಟ್ಟದ ಅಧಿ ಕಾರಿಗಳು ಮತ್ತು ಇತರೆ ಸಿಬ್ಬಂದಿ ಹಾಜರಿದ್ದರು.