Advertisement

ಬೇಡಿಕೆ ಈಡೇರಿಕೆಗೆ ಒತ್ತಾಯ

05:31 PM Jan 23, 2021 | Team Udayavani |

ಬಳ್ಳಾರಿ: ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳ ಅನೇಕ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಅಖೀಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಪ್ರತಿಭಟನಾ ದಿನವನ್ನು ಶುಕ್ರವಾರ ಆಚರಿಸಿದರು.

Advertisement

ಇದನ್ನೂ ಓದಿ : ಮಂದಿರ ನಿರ್ಮಾಣ ಸಂಕಲ್ಪ:ಕಾರ್ಯಕರ್ತರ ಬೈಕ್‌ ರ್ಯಾಲಿ

ಕರ್ನಾಟಕ ರಾಜ್ಯ ಸರ್ಕಾರವು ಪ್ರಸಕ್ತ ಶೈಕ್ಷಣಿಕ  ವರ್ಷದಲ್ಲಿ ಹಾಸ್ಟೆಲ್‌ ಹಾಗೂ ವಿದ್ಯಾರ್ಥಿ ವೇತನಗಳಿಗೆ ಈವರೆಗೆ ಅರ್ಜಿಯನ್ನು ಆಹ್ವಾನಿಸದಿರುವುದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದ ಹಲವು ಕಡೆ ನಗರ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬಸ್‌ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅಲ್ಲದೇ ಜನವರಿ 31ರ ವರೆಗೆ ಸಾರಿಗೆ ಇಲಾಖೆಯು ಉಚಿತ ಪ್ರಯಾಣ ಮಾಡುವ ವ್ಯವಸ್ಥೆ ಮಾಡಿಕೊಟ್ಟಿತ್ತು. ಈಗ ಬಸ್‌ ಪಾಸ್‌ ವಿತರಿಸಲಾಗುತ್ತಿರುವ ಸಂದರ್ಭದಲ್ಲಿ ನವೆಂಬರ್‌ 2020ನಿಂದ ಬಸ್‌ ಪಾಸ್‌ ನೀಡಲಾಗಿದೆ ಎಂದು 10 ತಿಂಗಳಿಗೆ ಪಡೆಯಬೇಕಾದ ಶುಲ್ಕದಲ್ಲಿ ಕೇವಲ 5 ರಿಂದ 7 ತಿಂಗಳಿಗಾಗುವಷ್ಟು ಮಾತ್ರ ಬಸ್‌ ಪಾಸ್‌ ನೀಡಿರುವುದು ಕೊರೊನಾ ಸಂದರ್ಭದ ಆರ್ಥಿಕ ಸಂಕಷ್ಟದ ನಡುವೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹೀಗಾಗಿ ಬಸ್‌ ಪಾಸ್‌ ಸಂಬಂಧಿತ ಗೊಂದಲಗಳನ್ನು ನಿವಾರಿಸುವುದು ಅತ್ಯವಶ್ಯಕವಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಇದನ್ನೂ ಓದಿ : 2021ರ ಮಾರ್ಚ್ ನಂತರ 100, 10 ಹಾಗೂ 5 ರೂಪಾಯಿ ನೋಟುಗಳ ಚಲಾವಣೆ ರದ್ದು?: ಆರ್ ಬಿಐ

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಎಲ್ಲ ವಿದ್ಯಾರ್ಥಿಗಳಿಗೆ ಕೂಡಲೇ ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಬೇಕು. ಎಲ್ಲ ಸರ್ಕಾರಿ ಹಾಸ್ಟೆಲ್‌ಗ‌ಳಿಗೆ ಸಹ ಅರ್ಜಿ ಆಹ್ವಾನಿಸಿ ಪ್ರವೇಶಾತಿ ನೀಡಿ, ಹಾಸ್ಟೆಲ್‌ ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್‌ ಸೌಲಭ್ಯ ಒದಗಿಸಬೇಕು. ಹೆಚ್ಚುವರಿ ಶುಲ್ಕ ಪಡೆಯುವುದನ್ನು ನಿಲ್ಲಿಸಬೇಕು. ಕಾಲೇಜುಗಳಲ್ಲಿ ಅವಶ್ಯಕ ಬೋಧಕರನ್ನು ನೇಮಿಸಿ, ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ತರಗತಿಗಳು ನಡೆಯುವಂತೆ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Advertisement

ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಇದಕ್ಕೂ ಮುನ್ನ ನಗರದ ಎಐಡಿಎಸ್‌ಒ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಸಂಗಮ್‌ ವೃತ್ತ, ಗಡಗಿ ಚನ್ನಪ್ಪ ವೃತ್ತದ ಮೂಲಕ ಡಿಸಿ ಕಚೇರಿಗೆ ತಲುಪಿತು. ರಸ್ತೆಯುದ್ದಕ್ಕೂ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಜಿಲ್ಲಾ ಉಪಾಧ್ಯಕ್ಷ ಗುರಳ್ಳಿ ರಾಜ, ಜಿಲ್ಲಾ ಸೆಕ್ರೆಟಿರಿಯಲ್‌ ಸದಸ್ಯರಾದ ಕೆ.ಈರಣ್ಣ, ಎಂ.ಶಾಂತಿ ಸೇರಿದಂತೆ ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಇದ್ದರು

 

ಅತಿಥಿ ಉಪನ್ಯಾಸಕರನ್ನು ತಕಣ ನಿಯೋಜಿಸಿ

ಬಳ್ಳಾರಿ: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕೂಡಲೇ ಅತಿಥಿ ಉಪನ್ಯಾಸಕರನ್ನು ನಿಯೋಜಿಸಬೇಕು ಎಂದು ಒತ್ತಾಯಿಸಿ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ವತಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಕೋವಿಡ್‌ ಸೋಂಕು, ಲಾಕ್‌ ಡೌನ್‌ನಿಂದ ಸ್ಥಗಿತಗೊಂಡಿದ್ದ ಪದವಿ ಕಾಲೇಜುಗಳು ಈಗಾಗಲೇ ತೆರದು ಎರಡು ಮೂರು ತಿಂಗಳು ಗತಿಸಿವೆ. ಆರ್ಥಿಕ ಮುಗ್ಗಟ್ಟಿಗೆ ಸಿಲುಕಿ 15 ಅತಿಥಿ ಉಪನ್ಯಾಸಕರು ಆತ್ಮಹತ್ಯೆಯಿಂದಲೂ ಮತ್ತು ಗಂಭೀರ ಕಾಯಿಲೆಗಳಿಂದಲೂ ನರಳಿ ಸಾವಿಗೀಡಾಗಿರುವ ಉದಾಹರಣೆಗಳು ಇವೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ. ಕಳೆದ 2020 ನವೆಂಬರ್‌ 17 ರಿಂದ 2020-21ನೇ ಸಾಲಿನ ಪದವಿ ತರಗತಿಗಳು ಪ್ರಾರಂಭವಾಗಿವೆ. ಅದೇ ದಿನಾಂಕದಿಂದ ಕಳೆದ ವರ್ಷ ಸೇವೆ ಸಲ್ಲಿಸಿದ್ದ ಎಲ್ಲಾ ಅತಿಥಿ ಉಪನ್ಯಾಸಕರನ್ನು ಮುಂದುವರೆಸಬೇಕು ಎಂದು ಸರ್ಕಾರ ನಿರ್ದೇಶನವನ್ನೂ ನೀಡಿದೆ. ಆದರೆ, ಆಯುಕ್ತರ ಕಚೇರಿಯಿಂದ 2021 ಜ.19ರ ಸುತ್ತೋಲೆಯು ರಾಜ್ಯದ 15,000ಕ್ಕೂ ಹೆಚ್ಚು ಇರುವ ಅತಿಥಿಉಪನ್ಯಾಸಕರಿಗೆ ಬಹುದೊಡ್ಡ ಆಘಾತವನ್ನು ನೀಡಿದೆ. ಕಳೆದ ವರ್ಷ  ಕಾರ್ಯ ನಿರ್ವಹಿಸಿದ್ದ ಅತಿಥಿ ಉಪನ್ಯಾಸಕರಲ್ಲಿ ಕೇವಲ ಶೇ. 50ರಷ್ಟು ಉಪನ್ಯಾಸಕರನ್ನು ಮಾತ್ರ ಸೇವೆಗೆ ಸೇರಿಸಿಕೊಳ್ಳಬೇಕು ಹಾಗೂ ಮಾಚ್‌ 2021ರವರೆಗೆ ಮಾತ್ರ ಅವರ ಸೇವೆಯನ್ನು ಬಳಸಿಕೊಳ್ಳಬೇಕು ಎಂದು ಸುತ್ತೋಲೆಯಲ್ಲಿ ಹೇಳಿರುವುದು ಅತಿಥಿ ಉಪನ್ಯಾಸಕರನ್ನು ಆತಂಕಕ್ಕೆ ನೂಕಿದೆ. ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸಮಿತಿಯ ಜಿಲ್ಲಾ ಮುಖಂಡರಾದ ಎ.ಪಂಪಾಪತಿ, ಡಾ| ದುರುಗಪ್ಪ, ಮಹ್ಮದ್‌ ರಫಿಕ್‌, ಸುಂಕಣ್ಣ, ಶರಣಪ್ಪ ಇನ್ನಿತರರು ಇದ್ದರು.

ಇದನ್ನೂ ಓದಿ : 27ರಂದು ಕರವೇ ಬೆಳಗಾವಿ ಸಮಾವೇಶ

Advertisement

Udayavani is now on Telegram. Click here to join our channel and stay updated with the latest news.

Next