Advertisement

ಎಸ್‌ಟಿಗೆ ಶೇ. 7.5 ಮೀಸಲಾತಿ ಹೆಚ‌ಳಕ್ಕೆ ಬದ್ಧ

04:35 PM Jan 24, 2021 | Team Udayavani |

ಬಳ್ಳಾರಿ: ಎಸ್‌ಟಿ ಸಮುದಾಯಕ್ಕೆ ಮೀಸಲಾತಿಯನ್ನು ಶೇ. 3.5ರಿಂದ ಶೇ. 7.5ಕ್ಕೆ ಹೆಚ್ಚಿಸಲು ನಾನು ಬದ್ಧನಾಗಿರುವೆ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.
ನಗರದ ವಾಲ್ಮೀಕಿ ಭವನದಲ್ಲಿ ರಾಜ್ಯ ಎಸ್ಟಿ (ವಾಲ್ಮೀಕಿ) ನೌಕರರ ಪ್ರಥಮ ಜಿಲ್ಲಾ ಸಮಾವೇಶ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಅಧಿ ಕಾರದಲ್ಲಿರುವ ಬಿಜೆಪಿ ಸರ್ಕಾರದಲ್ಲಿ ನಾನು ಸಮಾಜ ಕಲ್ಯಾಣ ಸಚಿವನಾಗಿದ್ದೇನೆ. ಹೀಗಾಗಿ ಎಸ್‌ಟಿ ಮೀಸಲಾತಿಯನ್ನು ಶೇ. 3.5ರಿಂದ ಶೇ. 7.5ಕ್ಕೆ ಹೆಚ್ಚಿಸಲು ನಾನು ಬದ್ಧನಾಗಿರುವೆ. ರಾಜ್ಯದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಶೈಕ್ಷಣಿಕ, ರಾಜಕೀಯ, ಸಾಮಾಜಿಕ, ಆದ್ಯತೆಗೆ ಅನುವಾಗುವಂತೆ ಮೀಸಲಾತಿಯನ್ನು ಹೆಚ್ಚಳ ಮಾಡಬೇಕೆಂದು ಕಳೆದ ಹಲವು ವರ್ಷಗಳಿಂದ ಹೋರಾಟ ಮಾಡುತ್ತ ಬಂದಿದೆ. ಈ ವರೆಗಿನ
ಸರ್ಕಾರಗಳು ಈ ಬೇಡಿಕೆಯನ್ನು ಈಡೇರಿಸಿಲ್ಲ. ಆದರೆ ನಾನು ಈಗ ಸಮಾಜ ಕಲ್ಯಾಣ ಸಚಿವರಾಗಿರುವುದರಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಹಕಾರದಿಂದ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲುಬದ್ಧನಾಗಿರುವುದಾಗಿ ಅವರು ಸ್ಪಷ್ಟಪಡಿಸಿದರು.

Advertisement

ಓದಿ :   ಎನ್‌ಸಿಸಿ ಕೆಡೆಟ್‌ಗಳಿಗೆ ಶಸ್ತ್ರಾಸ್ತ್ರ ಮಾಹಿತಿ

ಇದೇ ವೇಳೆ ಸಮುದಾಯದ ಗುರುಗಳಾದ ರಾಜನಹಳ್ಳಿ ಪೀಠದ ಅಭಿವೃದ್ಧಿ ಕಾರ್ಯಕ್ರಮಗಳಿಗೆ 10 ಕೋಟಿ ರೂ. ಬಿಡುಗಡೆ ಮಾಡಿರುವುದಾಗಿ
ತಿಳಿಸಿದರು.

ಅಲ್ಲದೇ ವಾಲ್ಮೀಕಿ ಸಮುದಾಯದ ರಾಜ್ಯದ 13 ಮಠಗಳಿಗೆ ತಲಾ 50 ಲಕ್ಷ ರೂ. ಬಿಡುಗಡೆ ಮಾಡಿರುವುದಾಗಿ ತಿಳಿಸಿದರು. ನಗರದ ವಿಜಯನಗರ ಶ್ರೀ ಕೃಷ್ಣವಿಶ್ವವಿದ್ಯಾಲಯದಲ್ಲಿ ವಾಲ್ಮೀಕಿ ಅಧ್ಯಯನ ಪೀಠಕ್ಕೆ 20 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು. ಸಮಾರಂಭದಲ್ಲಿ ಶಾಸಕರಾದ ಈ. ತುಕಾರಾಂ, ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ, ಕಂಪ್ಲಿ ಶಾಸಕ ಜೆ.ಎನ್‌.ಗಣೇಶ್‌ ಇದ್ದರು.

ಓದಿ :   ಹುಣಸೋಡು ಬ್ಲಾಸ್ಟ್ ಪ್ರಕರಣದ ತನಿಖೆ ಸಿಬಿಐಗೆ ವಹಿಸಲ್ಲ: ಆರ್.ಅಶೋಕ್

Advertisement
Advertisement

Udayavani is now on Telegram. Click here to join our channel and stay updated with the latest news.

Next