ಹೊಸಪೇಟೆ: ಬುಧವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸಚಿವ ಆನಂದ ಸಿಂಗ್ ಅವರಿಗೆ ನೂತನ ವಿಜಯನಗರ ಹಾಗೂ ಬಳ್ಳಾರಿ ಅವಳಿ ಜಿಲ್ಲೆಗಳಿಗೆ ಮತ್ತೂಮ್ಮೆ ಉಸ್ತುವಾರಿ ವಹಿಸಿಕೊಳ್ಳುವ ಭಾಗ್ಯ ಸಿಕ್ಕಿದೆ. ರಾಜ್ಯ ಸರ್ಕಾರ ಕಳೆದ ಫೆ.8ರಂದು ನೂತನ ವಿಜಯನಗರ ಜಿಲ್ಲೆ ಘೋಷಣೆ ಮಾಡುವ ಮೂಲಕ ಬಿ.ಎಸ್.ಯಡಿಯೂರಪ್ಪನವರು ಆನಂದ ಸಿಂಗ್ ಅವರ ಬೇಡಿಕೆ ಈಡೇರಿಸಿದ್ದರು.
ವಿಜಯನಗರ ಜಿಲ್ಲೆ ಘೋಷಣೆಯಾಗುತ್ತಿಂದತೇ ಇತ್ತ ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲೆ ವಿಭಜನೆ ಕುರಿತು ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಹಾಗೂ ಗ್ರಾಮೀಣ ಭಾಗದ ನಾಗೇಂದ್ರ ಸೇರಿದಂತೆ ಜಿಲ್ಲೆಯ ಹಲವು ಶಾಸಕರು ಹಾಗೂ ಸಂಘ-ಸಂಸ್ಥೆಗಳ ಮುಖಂಡರು ವಿರೋಧ ವ್ಯಕ್ತಪಡಿಸಿದ್ದರು.
ಇದಾದ ಬಳಿಕ ನೂತನ ಜಿಲ್ಲೆ ರಚನೆಗೆ ಅಧಿಕೃತ ಅಧಿಸೂಚನೆ ಹೊರ ಬಿದ್ದಿತ್ತು. ವಿಜಯನಗರ ಜಿಲ್ಲೆ ಅಭಿವೃದ್ಧಿಗೆ ಕಾರ್ಯಕ್ಕೆ ಚಾಲನೆ ಸಿಕ್ಕಿತ್ತು. ಅಂತಿಮವಾಗಿ ಬಳ್ಳಾರಿ ಜಿಲ್ಲೆ ಉಸ್ತುವಾರಿ ವಹಿಸಿಕೊಂಡಿದ್ದ ಸಚಿವ ಆನಂದ ಸಿಂಗ್ ಅವರನ್ನು ಬಳ್ಳಾರಿ ಜಿಲ್ಲೆ ಉಸ್ತುವಾರಿಯಿಂದ ಬದಲಾವಣೆ ಮಾಡಬೇಕು ಎಂಬ ಕೂಗು ಬಲವಾಗಿ ಕೇಳಿ ಬಂದಿತ್ತು. ಬಳ್ಳಾರಿ ಶಾಸಕರ ವಿರೋಧ ನಡುವೆಯೂ ಬಿಜೆಪಿ ಸರ್ಕಾರ ಆನಂದ ಸಿಂಗ್ ಅವರನ್ನು ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಮುಂದುವರೆಸಿತ್ತು. ಕಳೆದ 2019ರಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಅ ಧಿಕಾರ ಕಳೆದುಕೊಳ್ಳಲು ಸಚಿವ ಆನಂದ ಸಿಂಗ್ ಅವರು ಪ್ರಮುಖ ಪಾತ್ರ ವಹಿಸಿ, 17 ಜನ ಶಾಸಕರಲ್ಲಿ ಮೊದಲು ಅವರು ರಾಜೀನಾಮೆ ಸಲ್ಲಿಸಿ, ಬಿಜೆಪಿ ಸರ್ಕಾರ ರಚನೆಗೆ ಕಾರಣೀಭೂತರಾಗಿದ್ದರು.
ನಂತರ 2019ರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲವು ಸಾಧಿ ಸಿದರು. ನಂತರ ಅವರು ಸಚಿವ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದರು. ನಂತರ ಕಳೆದ ಎರಡು ವಾರದ ಹಿಂದೆ ಬಿ.ಎಸ್. ಯಡಿಯೂರಪ್ಪನವರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆನಂದ ಸಿಂಗ್ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗುವುದು ಅನುಮಾನ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದ್ದವು.
ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಆನಂದ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗೆ ಆನಂದ ಸಿಂಗ್ ಅವರಿಗೆ ಮತ್ತೂಮ್ಮೆ ಉಸ್ತುವಾರಿ ಹೊಣೆಗಾರಿಕೆ ನೀಡಲಾಗಿದೆ. ಈ ಮೂಲಕ ಬಳ್ಳಾರಿ ಉಸ್ತುವಾರಿ ಬದಲಾವಣೆ ಕೂಗಿಗೆ ತೆರೆ ಎಳೆದಂತಾಗಿದೆ.