Advertisement
ಪಟ್ಟಣದ ಹೊಸಪೇಟೆ ರಸ್ತೆಯ ಸಮಾಜದ ಹಿರಿಯ ಮುಖಂಡ ಕುಂಚೂರು ವೀರಣ್ಣನವರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯಿತ ಪಂಚಮಸಾಲಿ ಮಕ್ಕಳ ಶಿಕ್ಷಣ, ಉದ್ಯೋಗಕ್ಕಾಗಿ 2ಎ ಮೀಸಲಾತಿಗಾಗಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಹಾಗೂ ಕೇಂದ್ರ ಸರ್ಕಾರಓಬಿಸಿ ಮೀಸಲಾತಿಗೆ ಸೇರ್ಪಡೆಗೊಳಿಸುವಂತೆ ಆರಂಭವಾಗಿರುವ ಪಾದಯಾತ್ರೆಯು ಜ. 25ರಂದು ತಾಲೂಕಿನ ನಂದಿಬೇವೂರು ಗ್ರಾಮಕ್ಕೆ ಆಗಮಿಸಲಿದ್ದು, ಸಮಾಜದ ಹಿರಿಯರು, ಮುಖಂಡರು ಮತ್ತಮಹಿಳೆಯರ ಕಳಸ ಹಾಗೂ ಸಕಲ ವಾದ್ಯಗಳೊಂದಿಗೆ ಅದ್ದೂರಿಯಾಗಿ ಸ್ವಾಗತ ಕೋರಲಾಗುವುದು ಎಂದರು.
Related Articles
Advertisement
ಹಡಗಲಿ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಮಾತನಾಡಿ, ಪಾದಯಾತ್ರೆಯು ಬೆಂಗಳೂರಿಗೆ ತಲುಪುವ ಮಾರ್ಗದಲ್ಲಿ ಸರ್ಕಾರದಿಂದ 2ಎ ಮೀಸಲಾತಿ ಘೋಷಣೆಯಾಗುವ ಭರವಸೆ ಇದೆ ಎಂದ ಅವರು ಹರಪನಹಳ್ಳಿ ಜನಜಾಗೃತಿ ಸಮಾವೇಶದಲ್ಲಿ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು, ಅಖೀಲ ಭಾರತ ಲಿಂಗಾಯಿತ ಪಂಚಮಸಾಲಿ ಅಧ್ಯಕ್ಷ ಡಾ| ವಿಜಯನಂದ ಕಾಶಪ್ಪನವರ್ ಸೇರಿದಂತೆ ವಿವಿಧ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹರಿಹರ ಪಂಚಮಸಾಲಿ ಪೀಠದ ಶ್ರೀಗಳು ಕೂಡ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಈ ಸಂದರ್ಭದಲ್ಲಿ ಕುಂಚೂರು ವೀರಣ್ಣ, ಹೋರಾಟ ಸಮಿತಿಯ ಗೌರವಾಧ್ಯಕ್ಷ ಎಂ.ಪರಮೇಶ್ವರಪ್ಪ, ಸಾರಿಗೆ ನಿಗಮದ ನಿರ್ದೇಶಕ ಅರುಂಡಿ ನಾಗರಾಜ್, ಮುಖಂಡರಾದ ಶಶಿಧರ ಪೂಜಾರ, ಎಂ.ಅಜ್ಜಣ್ಣ, ಎಂ.ಟಿ.ಬಸವನಗೌಡ, ಮಂಜುನಾಥ ಪೂಜಾರ, ಬಿ.ಎಸ್.ಲಿಂಗರಾಜ್, ಪ್ರಚಾರ ಸಮಿತಿ ಅಧ್ಯಕ್ಷ ಪಿ.ಕರಿಬಸಪ್ಪ, ಕಾರ್ಯದರ್ಶಿ ಬಸವರಾಜ ಅಡವಿಹಳ್ಳಿ, ತಿಮ್ಲಾಪುರ ನಾಗರಾಜ್, ಹಾರಕನಾಳು ಪ್ರಕಾಶಗೌಡ, ವಿರೇಶ್, ನೀಲಗುಂದ ಸಿದ್ದೇಶ್, ಆರ್. ರೇವಣ್ಣ, ಬಸವರಾಜ, ಕೆಇಬಿ ಕರಿಬಸಪ್ಪ, ಪರಮೇಶ್, ಎ.ಜಿ.ಕೊಟ್ರಗೌಡ, ಕೊಟ್ರೇಶ್ ಉಪಸ್ಥಿತರಿದ್ದರು.
ಇದನ್ನೂ ಓದಿ : ಹುಣಸೋಡು ದುರಂತ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ : ಸಿಎಂ