ಪುತ್ತೂರು: ಬಲ್ನಾಡು ಗ್ರಾ.ಪಂ. ವಾರ್ಡ್-1ರ ಸದಸ್ಯೆ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯ ಫಲಿತಾಂಶ ರವಿವಾರ ಪ್ರಕಟವಾಗಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಹಿಂದುಳಿದ ವರ್ಗ `ಎ’ ಮಹಿಳಾ ಮೀಸಲು ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಉಮಾವತಿ ಎಸ್. ಅಟ್ಟಾರು ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ವಿನಯ ಬೆಳೆಯೂರುಕಟ್ಟೆ ಸ್ಪರ್ಧಿಸಿದ್ದರು.
ಇದನ್ನೂ ಓದಿ:ಮರಕ್ಕೆ ಢಿಕ್ಕಿ ಹೊಡೆದ ಕಾರು: ಗೋವಾದಲ್ಲಿ ಬೆಳಗಾವಿ ಮೂಲದ ಮೂವರು ಸಾವು
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ವಿನಯ ಅವರು ತಮ್ಮ ಪ್ರತಿಸ್ಪರ್ದಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಉಮಾವತಿ ಅವರ ವಿರುದ್ಧ 265 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಚಲಾಯಿತ ಒಟ್ಟು 903 ಮತಗಳಲ್ಲಿ ವಿನಯ ಬೆಳಿಯೂರುಕಟ್ಟೆ 579, ಉಮಾವತಿ 314 ಮತ ಪಡೆದರು. 9 ಮತಗಳು ತಿರಸ್ಕೃತ ಗೊಂಡಿತು.