ಬೆಳ್ತಂಗಡಿ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಬದುಕೇ ಒಂದು ಅಧ್ಯಾಯ. ಸ್ವಾತಂತ್ರ್ಯದ ಬಳಿಕದ ಭಾರತ ಹೇಗಿರಬೇಕು ಎಂಬ ಪರಿಕಲ್ಪನೆ ಹೊಂದಿದ ಅವರು ಗ್ರಾಮ ಗ್ರಾಮಗಳಲ್ಲಿ ವ್ಯಕ್ತಿ ನಿರ್ಮಾಣದ ಮೂಲಕ ರಾಮರಾಜ್ಯ ಕನಸು ಕಂಡಿದ್ದರು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾ ಭವನದಲ್ಲಿ ಸೋಮವಾರ ನಡೆದ ಗಾಂಧಿ ಸಂಕಲ್ಪಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಅಧ್ಯಾತ್ಮದ ಮುಖೇನ ಜಗತ್ತಿಗೆ ಶಾಂತಿ-ಸಾಮರಸ್ಯದ ಸಂದೇಶ ನೀಡಿದ ದೇಶ ಭಾರತ. ಅಂತಹ ಪವಿತ್ರ ದೇಶದಲ್ಲಿ ಸತ್ಯ ಮತ್ತು ಅಹಿಂಸೆಯ ಮೂಲಕ ಪಾದಯಾತ್ರೆ ಉಪ್ಪಿನ ಸತ್ಯಾಗ್ರಹ, ಸ್ವದೇಶಿ ಚಳವಳಿಯೊಂದಿಗೆ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಭಾರತಕ್ಕೆ ಸ್ವಾತ್ರಂತ್ರ್ಯ ದೊರಕಿಸಿಕೊಡುವಲ್ಲಿ ಗಾಂಧೀಜಿ ಯಶಸ್ವಿಯಾಗಿದ್ದಾರೆ ಎಂಬುದೇ ನಮಗೆ ಹೆಮ್ಮೆ ಎಂದರು.
ಗಾಂಧಿ ಸಂಕಲ್ಪ ಯಾತ್ರೆ ಸಮಿ ತಿಯ ಅಧ್ಯಕ್ಷ ಹರೀಶ್ ಪೂಂಜ ಪ್ರಸ್ತಾವನೆಗೈದು, ಪ್ರಸ್ತುತ ಸಮಾಜ ಗಾಂಧೀಜಿಯವರ ತಣ್ತೀ, ಆದರ್ಶ ಗಳನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದ ಸಂಕಲ್ಪ ಯಾತ್ರೆ ನಡೆಸಿ ದ್ದೇವೆ. ಗ್ರಾಮ ರಾಜ್ಯದ ಮೂಲಕ ರಾಮರಾಜ್ಯದ ಕನಸನ್ನು ನನಸಾಗಿ ಸಲು ನಾವೆಲ್ಲ ಸಂಘಟಿತ ಪ್ರಯತ್ನ ನಡೆಸಬೇಕು ಎಂದು ಸಲಹೆ ನೀಡಿದರು.
ಸಮಿತಿಯ ಗೌರವಾಧ್ಯಕ್ಷ ಕೆ. ಪ್ರತಾಪಸಿಂಹ ನಾಯಕ್ ಮಾತ ನಾಡಿ, ಗಾಂಧೀಜಿ ಅವರ ಸತ್ಯ, ಅಹಿಂಸೆ, ದುಶ್ಚಟ ಮುಕ್ತ ಸಮಾಜ ನಿರ್ಮಾಣ ಚಿಂತನೆ ಸಾರ್ವಕಾಲಿಕ ಮೌಲ್ಯಗಳನ್ನೊಳಗೊಂಡಿದೆ. ನಿರ್ಣಾ ಯಕವಾಗಿರುವ ವಿದ್ಯಾರ್ಥಿ ಜೀವನ ದಲ್ಲಿ ಧೃತಿಗೆಡದೆ ದುಶ್ಚಟ ಮುಕ್ತರಾಗಿ ಆರೋಗ್ಯ ಪೂರ್ಣ ಸಮಾಜ ನಿರ್ಮಾತೃಗಳಾಗಿ ಎಂದು ಕರೆ ನೀಡಿದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಂತ ಕೋಟ್ಯಾನ್ ಸ್ವಾಗತಿಸಿ, ಸೀತಾರಾಮ ಬಿ.ಎಸ್. ವಂದಿಸಿದರು. ಶ್ರೀನಿವಾಸ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.
ಬೆಳ್ತಂಗಡಿ ಮಿನಿವಿಧಾನ ಸೌಧದಿಂದ ಮುಖ್ಯ ರಸ್ತೆಯಾಗಿ ಸಭಾ ಭವನದವರೆಗೆ 16 ಕಾಲೇಜುಗಳ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸಂಸದ ನಳಿನ್ ಕುಮಾರ್, ಶಾಸಕ ಹರೀಶ್ ಪೂಂಜ ಸೇರಿದಂತೆ ಗಣ್ಯರು ಸುಮಾರು 2 ಕಿ.ಮೀ. ಪಾದಯಾತ್ರೆ ಕೈಗೊಂಡರು. ಪ್ರತಾಪಸಿಂಹ ನಾಯಕ್ ನೇತೃತ್ವದಲ್ಲಿ ಸಾಮೂಹಿಕವಾಗಿ ದೇಶ ಭಕ್ತಿಗೀತೆಯನ್ನು ಎಲ್ಲರೂ ಹಾಡಿದರು.