Advertisement

ನಾಳೆ ಬೆಂಬಲಿಗರೊಂದಿಗೆ ಕಳಲೆ ಕೈ ಸೇರ್ಪಡೆ

12:28 PM Feb 14, 2017 | Team Udayavani |

ಮೈಸೂರು: ಜೆಡಿಎಸ್‌ ತೊರೆದಿರುವ ಕಳಲೆ ಕೇಶವಮೂರ್ತಿ ಅವರು ಬುಧವಾರ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಲಿದ್ದಾರೆ. ಬುಧವರ ಮಧ್ಯಾಹ್ನ 3ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್‌ ಸೇರಲಿದ್ದಾರೆ.

Advertisement

ಫೆ.7ರಂದು ನಂಜನಗೂಡಿನಲ್ಲಿ ತಮ್ಮ ಬೆಂಬಲಗರೊಂದಿಗೆ ಸಭೆ ನಡೆಸಿ ಕಾಂಗ್ರೆಸ್‌ ಸೇರ್ಪಡೆಯನ್ನು ಅಧಿಕೃತವಾಗಿ ಘೋಷಿಸಿದ್ದ ಕಳಲೆ ಕೇಶವಮೂರ್ತಿ ಅವರು, ಅದರ ಹಿಂದಿನ ದಿನವೇ (ಫೆ.6) ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ ಸೇರ್ಪ ಡೆಗೆ ಹಸಿರು ನಿಶಾನೆ ಪಡೆದಿದ್ದರು. ಕಾಂಗ್ರೆಸ್‌ ಪಕ್ಷದ ವರಿಷ್ಠ ರಿಂದಲೇ ತಮಗೆ ಆಹ್ವಾನ ಬಂದಿತ್ತು.

ಈ ಹಿನ್ನೆಲೆಯಲ್ಲಿ ಮುಖ್ಯ ಮಂತ್ರಿಯವರನ್ನು ಕಂಡು ಮಾತನಾಡಿ ಅವರ ಒಪ್ಪಿಗೆ ಪಡೆದು ಕೊಂಡಿದ್ದು, ಬುಧವಾರ ಕಾಂಗ್ರೆಸ್‌ ಪಕ್ಷ ಸೇರುತ್ತಿರುವುದಾಗಿ ಕಳಲೆ “ಉದಯವಾಣಿ’ಗೆ ತಿಳಿಸಿದರು. ಅಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು, ತಾಲೂಕು ಪಂಚಾಯಿತಿ ಹಾಗೂ ನಗರಸಭೆಯ ಹಲವು ಸದಸ್ಯರು ತಮ್ಮ ಜೊತೆೆಗೆ ಕಾಂಗ್ರೆಸ್‌ ಪಕ್ಷ ಸೇರಲಿದ್ದು, ನಂಜನಗೂಡಿನಿಂದ ಸುಮಾರು 300 ಜನರು ತಮ್ಮ ಜೊತೆಗೆ ಬೆಂಗಳೂರಿಗೆ ಬರಲಿದ್ದಾರೆ ಎಂದು ಕಳಲೆ ಕೇಶವಮೂರ್ತಿ ತಿಳಿಸಿದ್ದಾರೆ. 

ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಕಳಲೆ, 40 ಸಾವಿರಕ್ಕೂ ಅಧಿಕ ಮತ‌ ಪಡೆದು ಪ್ರಬಲ ಪೈಪೋಟಿ ನೀಡಿದ್ದರು. ಇದೀಗ ಬದಲಾದ ರಾಜಕೀಯ ವಿದ್ಯಮಾನದಲ್ಲಿ ನಂಜನಗೂಡು ಉಪವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮಾಜಿ ಸಚಿವ ಶ್ರೀನಿವಾಸ್‌ ಪ್ರಸಾದ್‌ ವಿರುದ್ಧ ಕಣಕ್ಕಿಳಿಯಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next