Advertisement

ನಂಜನಗೂಡು ಉಪಚುನಾವಣೆಲಿ ಕಳಲೆ ಕೇಶವಮೂರ್ತಿ ಗೆಲ್ಲಿಸ್ತೇವೆ: ಎಚ್‌ಡಿಕೆ

03:45 AM Jan 23, 2017 | Team Udayavani |

ಮೈಸೂರು: ಕಳಲೆ ಕೇಶವಮೂರ್ತಿ ನಮ್ಮ ಪಕ್ಷದ ಆಸ್ತಿ, ಅವರನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

Advertisement

ನಂಜನಗೂಡು ಉಪಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕಳಲೆ ಕೇಶವಮೂರ್ತಿ ಬಳಿ ಹಣವಿಲ್ಲದ ಕಾರಣ ಕಳೆದ ಚುನಾವಣೆಯಲ್ಲಿ ಸೋಲಬೇಕಾಯಿತು. ಆದರೆ ಈ ಬಾರಿ ಸಾಲ ಮಾಡಿಯಾದರೂ ಅವರಿಗೆ ಬೇಕಾದ ಸಂಪನ್ಮೂಲ ನೀಡಿ ಗೆಲ್ಲಿಸುವ ಹೊಣೆ ನಮ್ಮ ಮೇಲಿದೆ. ಈ ಉಪಚುನಾವಣೆಯಲ್ಲಿ ಹಗಲು ರಾತ್ರಿ ಕೆಲಸ ಮಾಡಿ ಕೇಶವಮೂರ್ತಿ ಗೆಲುವಿಗೆ ಶ್ರಮಿಸಲಾಗುವುದು ಎಂದರು.

ಎಚ್‌ಡಿಕೆಗೆ ಘೇರಾವ್‌:
ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಆಗಮಿಸಿದ್ದ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಸ್ಥಳದಲ್ಲಿದ್ದ ಕೆಲವು ಕಾರ್ಯಕರ್ತರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಿಂದ ಸ್ಪರ್ಧಿಸಲು ಜೆಡಿಎಸ್‌ ನಗರಾಧ್ಯಕ್ಷ ಹರೀಶ್‌ಗೌಡ ಅವರಿಗೆ ಟಿಕೆಟ್‌ ನೀಡಬೇಕು ಎಂದು ಆಗ್ರಹಿಸಿ ಘೋಷಣೆಗಳನ್ನು ಕೂಗಲಾರಂಭಿಸಿದರು. ಜೆಡಿಎಸ್‌ ಕಾರ್ಯಕರ್ತರ ವರ್ತನೆಯಿಂದ ಎಚ್‌.ಡಿ.ಕುಮಾರಸ್ವಾಮಿ ಕೆಂಡಾಮಂಡಲರಾದರು.

ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ಹರೀಶ್‌ಗೌಡ ಅವರಿಗೆ ನಗರಾಧ್ಯಕ್ಷ ಸ್ಥಾನ ನೀಡಲಾಗಿದೆ. ಇದನ್ನು ಬಿಟ್ಟು ಬೆಂಬಲಿಗರನ್ನು ಕಟ್ಟಿಕೊಂಡು ತಲೆಹರಟೆ ಮಾಡಬಾರದು. ಅಭ್ಯರ್ಥಿಗಳ ಪಟ್ಟಿಗೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿ ನೋಡಿಕೊಂಡು ನನಗೇ ಘೇರಾವ್‌ ಮಾಡುತ್ತೀರಾ? ಎಂದು ಸಭೆಯಲ್ಲಿ ಕಾರ್ಯಕರ್ತರನ್ನು ತರಾಟೆಗೆ ತೆಗೆದುಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next