Advertisement

ಆಗುಂಬೆ ಘಾಟಿಯಲ್ಲಿ ಘನ ವಾಹನಗಳಿಗೆ ನಿಷೇಧ: ಪರ್ಯಾಯ ಮಾರ್ಗ ಬಳಸಿ

07:01 PM Jul 26, 2023 | Team Udayavani |

ಉಡುಪಿ: ಆಗುಂಬೆ ಘಾಟಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣದಿಂದಾಗಿ ಸೆಪ್ಟೆಂಬರ್‌ 15 ರ ವರೆಗೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Advertisement

ಭಾರೀ ಮಳೆ ಮತ್ತು ಭಾರೀ ವಾಹನ ಸಂಚಾರದಿಂದ ರಾಷ್ಟ್ರೀಯ ಹೆದ್ಧಾರಿ 169 A ಯ ಆಗುಂಬೆ ಘಾಟಿಯ 6,7 ಮತ್ತು 11 ನೇ ತಿರುವಿನಲ್ಲಿ ಸಣ್ಣ ಬಿರುಕುಗಳು ಕಾಣಿಸಿಕೊಳ್ಳುತ್ತಿದ್ದು ರಸ್ತೆ ಕುಸಿಯುವ ಆತಂಕ ಉಂಟಾಗಿದೆ. ಹೀಗಾಗಿ ಜುಲೈ 27 ರಿಂದ ಸೆಪ್ಟೆಂಬರ್‌ 15 ರ ವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಭಾರೀ ವಾಹನಗಳ ಸಂಚಾರ ನಿರ್ಬಂಧಿಸಿರುವುದರಿಂದ ತೀರ್ಥಹಳ್ಳಿ – ಉಡುಪಿ ಮಧ್ಯೆ ಸಂಚರಿಸುವ ಭಾರೀ ವಾಹನಗಳು ಈ ಕೆಳಗಿನ ಬದಲಿ ಮಾರ್ಗವನ್ನು ಆಯ್ದುಕೊಳ್ಳಬಹುದು ಎಂದು ಪ್ರಕಟನೆ ಹೊರಡಿಸಿದ್ದಾರೆ.

ಮಾರ್ಗ 1. ತೀರ್ಥಹಳ್ಳಿ- ಆಗುಂಬೆ- ಶೃಂಗೇರಿ- ಮಾಳಘಾಟ್‌- ಕಾರ್ಕಳ- ಉಡುಪಿ

ಮಾರ್ಗ 2. ತೀರ್ಥಹಳ್ಳಿ- ಮಾಸ್ತಿಕಟ್ಟೆ- ಸಿದ್ದಾಪುರ- ಕುಂದಾಪುರ- ಉಡುಪಿ

Advertisement

ಇದನ್ನೂ ಓದಿ: VVIP Tree;ಇದು ಭಾರತದ ಮೊದಲ VVIP ಮರ…ಈ ಪವಿತ್ರ ಮರದ ಭದ್ರತೆಗೆ ವರ್ಷಕ್ಕೆ 12 ಲಕ್ಷ ಖರ್ಚು!

Advertisement

Udayavani is now on Telegram. Click here to join our channel and stay updated with the latest news.

Next