ಚೆನ್ನೈ: ಕೆಲ ದಿನಗಳ ಹಿಂದಷ್ಟೇ ಟಿಕ್ ಟಾಕ್ ಆ್ಯಪ್ ನಿಷೇಧಿಸುವಂತೆ ತಾನೇ ನೀಡಿದ್ದ ಆದೇಶಕ್ಕೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅಶ್ಲೀಲ ದೃಶ್ಯಾವಳಿಗೆ ಅನುವು ಮಾಡಿಕೊಡುತ್ತದೆ ಎಂಬ ಆರೋಪಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಈ ತಿಂಗಳ ಆರಂಭದಲ್ಲಿ ಆ್ಯಪ್ ಬಳಕೆಯನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಸುಪ್ರೀಂ ಕೋರ್ಟ್ ಕೂಡ, ಮದ್ರಾಸ್ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರದ ಆದೇಶದ ಮೇರೆಗೆ, ಗೂಗಲ್ ಪ್ಲೇ ಸ್ಟೋರ್ ಮತ್ತು ಆ್ಯಪಲ್ ಸ್ಟೋರ್‌ಗಳಿಂದ ಈ ಆ್ಯಪ್ ಅನ್ನು ತೆಗೆದುಹಾಕಲಾಗಿತ್ತು. ಆದೇಶದ ವಿರುದ್ಧ ಸಲ್ಲಿಕೆಯಾಗಿದ್ದ ಮೇಲ್ಮನವಿಯ ವಿಚಾರಣೆಯನ್ನು ಬುಧವಾರ ನಡೆಸಿದ ಮದ್ರಾಸ್ ಹೈಕೋರ್ಟ್, ‘ಟಿಕ್ ಟಾಕ್’ಗೆ ಇದ್ದ ನಿಷೇಧ ತೆರವುಗೊಳಿಸಿದೆ. ಈ ನಡುವೆ, ಟಿಕ್‌ಟಾಕ್‌ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ವಿರುದ್ಧ ಆಕ್ಷೇಪಾರ್ಹ ವಿಡಿಯೋ ಅಪ್‌ಲೋಡ್ ಮಾಡಿದ್ದ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ತಂಗರಂ ನವೀನ್ (20) ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
Advertisement
ಟಿಕ್ ಟಾಕ್ ನಿಷೇಧ ತೆರವು
02:47 AM Apr 25, 2019 | mahesh |
Advertisement
Udayavani is now on Telegram. Click here to join our channel and stay updated with the latest news.