Advertisement

Ban;ಜನವರಿವರೆಗೆ ದಿಲ್ಲಿಯಲ್ಲಿ ಪಟಾಕಿ ಮಾರಾಟಕ್ಕೆ ನಿಷೇಧ

12:34 AM Sep 10, 2024 | Team Udayavani |

ಹೊಸದಿಲ್ಲಿ: ದಿಲ್ಲಿಯಲ್ಲಿ ಹೆಚ್ಚುತ್ತಿರುವ ವಾಯು­ಮಾಲಿನ್ಯ ತಡೆಗಟ್ಟಲು 2025ರ ಜ.1ರ ವರೆಗೆ ಪಟಾಕಿಗಳ ಉತ್ಪಾದನೆ, ಮಾರಾಟ, ಬಳಕೆ ಮೇಲೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಲಾಗಿದೆ ಎಂದು ದಿಲ್ಲಿ ಪರಿಸರ ಸಚಿವ ಗೋಪಾಲ ರಾಯ್‌ ಸೋಮವಾರ ಪ್ರಕಟಿಸಿದ್ದಾರೆ. ವಾಯು ಮಾಲಿನ್ಯದಿಂದ ಪ್ರತೀವರ್ಷ ಚಳಿಗಾಲದಲ್ಲಿ ದಿಲ್ಲಿ ಜನತೆ ಹಲವು ಉಸಿರಾಟದ ಸಮಸ್ಯೆಗಳನ್ನು ಎದುರಿಸುತ್ತಾರೆ. ಈ ವರ್ಷ ಈ ಸಮಸ್ಯೆಯನ್ನು ತಡೆಗಟ್ಟಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಈ ನಿಷೇಧ ಆನ್‌ಲೈನ್‌ ಮಾರಾಟಕ್ಕೂ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next