Advertisement

ತಂಬಾಕು ಮಾರಾಟ, ಬಳಕೆ ನಿಷೇಧಿಸಿ

04:12 PM Oct 06, 2019 | Suhan S |

ತುಮಕೂರು: ಜಿಲ್ಲೆಯಲ್ಲಿರುವ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಸುತ್ತಮುತ್ತ 100 ಮೀಟರ್‌ ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ತಂಬಾಕು ವಸ್ತುಗಳ ಮಾರಾಟ ಮತ್ತು ಬಳಕೆ ನಿಷೇಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ಕುಮಾರ್‌ ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗ ಣದಲ್ಲಿ ಶನಿವಾರ ಏರ್ಪಡಿಸಿದ್ದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಸಭೆಯಲ್ಲಿ ಮಾತ ನಾಡಿ, ತಹ ಶೀಲ್ದಾರ್‌, ಪೊಲೀಸ್‌ ಇನ್ಸ್‌ ಪೆಕ್ಟರ್‌, ಬಿಇಒ, ತಾಲೂಕು ಆರೋಗ್ಯಾಧಿಕಾರಿಗಳು ಜಂಟಿಯಾಗಿ ಶಾಲೆಗಳ ಸುತ್ತ ಮುತ್ತ 100 ಮೀಟರ್‌ ವ್ಯಾಪ್ತಿ ಯಲ್ಲಿ ಸಂಪೂರ್ಣವಾಗಿ ಶೇ. 100 ತಂಬಾಕು ವಸ್ತುಗಳ ಮಾರಾಟ ಮತ್ತು ಬಳಕೆ ನಿಷೇಧಿಸಿರುವ ಕುರಿತುಮುಂದಿನ ಸಭೆಯಲ್ಲಿ ದೃಢೀಕೃತ ವರದಿ ನೀಡು ವಂತೆ ಸೂಚನೆ ನೀಡಿದರು.

ಮಾಹಿತಿ, ಶಿಕ್ಷಣ, ಮತ್ತು ಸಂವಹನ ಕಾರ್ಯಕ್ರಮದಡಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಓದುವ ವಿದ್ಯಾರ್ಥಿ ಗಳಿರುವ ಶಾಲೆ ಮತ್ತು ಕಾಲೇಜುಗಳಲ್ಲಿ ಮಕ್ಕಳಿಗೆ ತಂಬಾಕು ಸೇವನೆ ದುಷ್ಪರಿಣಾಮ ಕುರಿತು ಅರಿವು ಕಾರ್ಯಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ತಂಬಾಕು ಮಾರಾಟಗಾರರ ಮೇಲೆ ದಾಳಿ ನಡೆಸಿ ವ್ಯಾಪಾರ ಪರವಾನಗಿ ರದ್ದುಗೊಳಿಸಬೇಕು ಎಂದು ಸೂಚಿಸಿದರು.

ಎಸ್‌ಪಿ ಡಾ.ಕೆ. ವಂಶಿಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಿಕಾ, ಡಿವೈಎಸ್‌ಪಿ ತಿಪ್ಪೇಸ್ವಾಮಿ, ಆರ್‌ಸಿಎಚ್‌ ಅಧಿಕಾರಿ ಡಾ. ಕೇಶವ ರಾಜ್‌ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next