Advertisement

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

07:17 PM Jul 08, 2024 | Team Udayavani |

ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ) : ಬಣಕಲ್ ಸಮೀಪದ ಪ್ರವಾಸಿ ತಾಣ ದೇವರ ಮನೆಯಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯ ಹೆಚ್ಚುತ್ತಿದ್ದು, ಪೊಲೀಸರು ಗಸ್ತು ತಿರುಗಿ ಮೋಜು ಮಸ್ತಿ ಮಾಡುವ ಪ್ರವಾಸಿಗರಿಗೆ ದಂಡದ ಜೊತೆಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

Advertisement

ಸ್ಥಳಕ್ಕೆ ಭೇಟಿ ನೀಡಿದ್ದ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ ಮಾತನಾಡಿ’ ದೇವರಮನೆ ತಾಣ ಭಕ್ತಿಯ ತಾಣವಾಗಿದ್ದು ಇಲ್ಲಿ ಶ್ರೀ ಕಾಲಭೈರವೇಶ್ವರ ದೇವಸ್ಥಾನವಿದೆ. ಇಲ್ಲಿ ನಿತ್ಯ ಪ್ರವಾಸಿಗರು ಮೋಜು ಮಸ್ತಿ ಮಾಡಿ ಸಂಚಾರ ದಟ್ಟಣೆ ಮಾಡಿ ಜನರಿಗೆ ಕಿರಿಕಿರಿ ತರುವ ಸನ್ನಿವೇಶ ನಿರ್ಮಾಣವಾಗುತ್ತಿದೆ. ವಾರಾಂತ್ಯದಲ್ಲಿ ಅಲ್ಲದೇ ಈಗ ನಿತ್ಯದ ದಿನಗಳಲ್ಲೂ ಪ್ರವಾಸಿಗರು ಅದರಲ್ಲೂ ಯುವಕರು ಮದ್ಯಪಾನ ಮಾಡಿ ಕೂಗಾಡುವ ದೃಶ್ಯ ಕಂಡು ಬರುತ್ತಿದೆ.

ಹಾಗಾಗಿ ಸೋಮವಾರ ಸಿಬ್ಬಂದಿಯೊಂದಿಗೆ ದೇವರಮನೆಗೆ ಭೇಟಿ ನೀಡಿ ಮದ್ಯಪಾನ ಮಾಡಿದ ಯುವಕರಿಗೆ ದಂಡ ವಿಧಿಸಿ ಎಚ್ಚರಿಸಲಾಗಿದೆ. “ಪರಿಸರ ಕಲುಷಿತ ಮಾಡುವವರಿಗೆ ಕಡಿವಾಣ ಹಾಕಲಾಗುತ್ತಿದೆ. ಪ್ರವಾಸಿಗರು ದೇವಸ್ಥಾನಕ್ಕೆ ಭೇಟಿ ಕೊಟ್ಟು ಪರಿಸರ ಅಸ್ವಾಧನೆ ಮಾಡುವುದು ಒಳಿತು. ಹಾಗೆಂದು ಮೋಜು ಮಸ್ತಿಗೆ ಅವಕಾಶ ನೀಡುವುದಿಲ್ಲ. ಟ್ರಾಫಿಕ್ ಜಾಮ್ ಮಾಡಿ ಜನರಿಗೆ ತೊಂದರೆ ಕೊಡುವವರಿಗೆ ಶಿಸ್ತಿನ  ಕ್ರಮ ಕೈಗೊಳ್ಳುತ್ತೇವೆ’ ಎಂದರು.
ಈ ಸಂದರ್ಭದಲ್ಲಿ ಎಎಸ್ಐ ಟಿ.ಕೆ.ಶಶಿ, ಪೊಲೀಸ್ ಸಿಬ್ಬಂದಿಗಳಾದ ಅಶೋಕ್, ವರ್ಷಿಣಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next