ಬಾಗಲಕೋಟೆ : ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಮೆರವಣಿಗೆ, ಹಬ್ಬಗಳ ಆಚರಣೆಯನ್ನು ನಿಷೇಧಿಸಿದೆ ಇದರ ನಡುವೆಯೂ ಬಾದಾಮಿ ಬನಶಂಕರಿ ದೇವಿಯ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದಾರೆ.
ಇತ್ತ ಪೊಲೀಸರು ಜನಸಂಖ್ಯೆ ನಿಯಂತ್ರಣಕ್ಕಾಗಿ ಬ್ಯಾರಿಕೇಡ್ ಅಳವಡಿಸಿದ್ದು ಭಕ್ತರು ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಬ್ಯಾರಿಕೇಡ್ ದೂಡಿ ರಥೋತ್ಸವದಲ್ಲಿ ಭಾಗಿಯಾಗಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಬಂದ ಜನರನ್ನು ನಿಯಂತ್ರಿಸಲಾಗದೆ ಪೊಲೀಸರು ಅಸಹಾಯಕರಾಗಿದ್ದಾರೆ.
ರಥೋತ್ಸವದಲ್ಲಿ ಯಾರೊಬ್ಬರೂ ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಕಾಪಾಡದೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸದ ಜನ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದ ಬಳಿ ಇರುವ ಈ ದೇವಾಲಯದಲ್ಲಿ ಪ್ರತಿ ವರ್ಷ ಬಣದ ಹುಣ್ಣಿಮೆ ದಿನದಂದು ರಥೋತ್ಸವ ನಡೆಯುತ್ತದೆ.
ಇದನ್ನೂ ಓದಿ : ಕೋವಿಡ್ ಹೆಚ್ಚಳ ಆಸ್ಪತ್ರೆಗಳಲ್ಲಿ ಸೌಕರ್ಯಗಳ ಮಾಹಿತಿ ಪಡೆದ ಶಾಸಕ ಪರಣ್ಣ