Advertisement

ಭದ್ರಾ ಹುಲಿ ಯೋಜನೆಯ ಬಫರ್ ಜೋನ್ ಘೋಷಣೆಗೆ ವಿರೋಧ: ಎನ್.ಆರ್.ಪುರ ತಾಲೂಕು ಬಂದ್

04:07 PM Oct 15, 2020 | keerthan |

ಚಿಕ್ಕಮಗಳೂರು: ಭದ್ರಾ ಹುಲಿ ಯೋಜನೆಯ ಬಫರ್ ಜೋನ್, ಸೂಕ್ಷವಲಯ ಘೋಷಣೆಯ ವಿರುದ್ಧ ಎನ್.ಆರ್.ಪುರ ತಾಲೂಕಿನ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.

Advertisement

ಎನ್.ಆರ್.ಪುರ ತಾಲೂಕಿನಲ್ಲಿ ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು  ಬಂದ್ ಮಾಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸೇರಿ ಇಡಿ ತಾಲೂಕಿನಲ್ಲಿ ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ:ಮತ್ತೆ ಕುಸಿದ ತೀರ್ಥಹಳ್ಳಿ ತಾಲೂಕು ರಂಜದಕಟ್ಟೆಯ ಸೇತುವೆ: ಶಿವಮೊಗ್ಗ- ಉಡುಪಿ ಸಂಚಾರ ಸ್ಥಗಿತ

ಮಲೆನಾಡು ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಇದಕ್ಕೆ ಸರ್ವ ಪಕ್ಷ, ವಿವಿಧ ಸಂಘಟನೆ ಹಾಗೂ ರೈತರು ಭಾಗಿಯಾಗಿದ್ದಾರೆ.

Advertisement

ಭದ್ರಾ ಹುಲಿ ಯೋಜನೆಯ ಬಫರ್ ಝೋನ್ ಹಾಗೂ ಪರಿಸರ ಸೂಕ್ಷ್ಮ ವಲಯದ ಹೆಸರಿನಲ್ಲಿ ತಾಲೂಕಿನ ಹತ್ತಾರು ಗ್ರಾಮಗಳು ಕಣ್ಮರೆಯಾಗಲಿವೆ. ಚಿಕ್ಕಮಗಳೂರು ಜಿಲ್ಲೆಯ 51 ಗ್ರಾಮಗಳು ಯೋಜನೆ ವ್ಯಾಪ್ತಿಗೆ ಬರಲಿದ್ದು, 8750 ಕುಟುಂಬ, 75ಕ್ಕೂ ಹೆಚ್ಚು ದೇವಸ್ಥಾನಗಳು, 3 ಚರ್ಚ್, 4 ಮಸೀದಿಗಳು ಈ ಯೋಜನೆ ವ್ಯಾಪ್ತಿಗೆ ಬರಲಿದೆ. ಹೀಗಾಗಿ ಈ ಯೋಜನೆಗೆ ಭಾರೀ ವಿರೋಧ ವ್ಯಕ್ತಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next