Advertisement

Hosapete ರೈತ ಸಂಘ ಕರೆ ನೀಡಿದ್ದ ಬಂದ್ ವಾಪಸ್; ಸಚಿವ ಜಮೀರ್ ಅಹಮದ್ ಭರವಸೆ

08:22 PM Nov 28, 2023 | Team Udayavani |

ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ ವಿಜಯನಗರ ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ, ಹೊಸಪೇಟೆ ರೈತ ಸಂಘ ನ.29ರಂದು ಕರೆ ನೀಡಿದ ಹೊಸಪೇಟೆ ಬಂದ್‌ನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ರೈತ ಸಂಘದ ನಿರ್ದೇಶಕರಾದ ಉತ್ತಂಗಿ ಕೊಟ್ರೇಶ್ ಹಾಗೂ ಕಿಚಿಡಿ ಶ್ರೀನಿವಾಸ ತಿಳಿಸಿದರು.

Advertisement

ನಗರದ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಸಚಿವ ಶಿವರಾಜ್ ತಂಗಡಿ ಅವರೊಂದಿಗೆ ವಿಜಯನಗರ ಕಾಲುವೆಗಳ ರೈತರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರು ರೈತ ಮುಖಂಡರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಮೇ31ವರೆಗೆ ನೀರು ಹರಿಸುವ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಸಪೇಟೆ ಬಂದ್ ಕೈ ಬಿಡಲಾಗಿದೆ ಎಂದು ಹೇಳಿದರು. ಮುಖಂಡರಾದ ಪರಶಪ್ಪ, ಮೈಲಾರಿ, ಯಲ್ಲಪ್ಪ ಇನ್ನಿತರರಿದ್ದರು.

ಹೊಸಪೇಟೆ ಬಂದ್ ವಾಪಾಸ್:ರೈತರಿಗೆ ಕೃತಜ್ಞತೆ ಸಲ್ಲಿಸಿದ ಸಚಿವ ಜಮೀರ್ ಅಹಮದ್  ರೈತ ಮುಖಂಡರ ಜತೆಯೂ ಖುದ್ದು ಮಾತನಾಡಿದ್ದೇನೆ. ರೈತರ ಹೋರಾಟ ವಿಚಾರದಲ್ಲಿ ಜಿಲ್ಲಾಧಿಕಾರಿ ದಿವಾಕರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿಬಾಬು ಅವರ ಜತೆ ನಿರಂತರ ಸಂಪರ್ಕದಲ್ಲಿದ್ದು ರೈತರಿಗೆ ತೊಂದರೆ ಆಗದಂತೆ ಕ್ರಮ
ಕೈಗೊಳ್ಳುವ ಭರವಸೆ ನೀಡಿದ್ದೇನೆ. ನಮ್ಮ ಮನವಿಗೆ ಸ್ಪಂದಿಸಿ ರೈತ ಮುಖಂಡರು ನ.29ರಂದು ಕರೆ ನೀಡಿದ್ದ ಹೊಸಪೇಟೆ ಬಂದ್ ವಾಪಸ್ ಪಡೆದಿದ್ದಾರೆ. ಎಲ್ಲರಿಗೂ ಕೃತಜ್ಞತೆಗಳು. ಜಿಲ್ಲೆಯ ರೈತರಿಗೆ ತೊಂದರೆ ಆಗದಂತೆ ಜಿಲ್ಲಾಧಿಕಾರಿಗಳು ಸಾಕಷ್ಟು ಸಭೆ ನಡೆಸಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ.ಹೀಗಾಗಿ ರೈತರ ಪರ ನಾವು ಇದ್ದೇವೆ ಎಂದು ಹೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next