Advertisement
ಬಂಡೀಪುರ ಅಭಯಾರಣ್ಯದಲ್ಲಿ ನಡೆಯುವ ಸಫಾರಿಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿ ಗರು ಭೇಟಿ ನೀಡಿ ಕಾಡು ಪ್ರಾಣಿಗಳು ಹಾಗೂ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ. ಸಫಾರಿ ವೇಳೆ ಕಾಡು ಪ್ರಾಣಿಗಳು ದಾಳಿಗೆ ಮುಂದಾದ ಹಲವು ನಿದರ್ಶನಗಳೂ ಇವೆ. ಇದನ್ನು ಗಮನಿಸಿ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ| ಪಿ. ರಮೇಶ್ ಕುಮಾರ್ ಅವರು ಈಗ ಹೊಸ ವಿಮಾ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಪ್ರವಾಸಿಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ವಿಮೆ ಯೋಜನೆಗೆ ಅರ್ಹರಾಗಲು ಯಾವುದೇ ನೋಂದಣಿ ಅಗತ್ಯವಿಲ್ಲ. ಸಫಾರಿಗೆ ಹೋಗಿರುವ ಟಿಕೆಟ್ ಇದ್ದರೆ ಸಾಕು. ಕಾಡಿನೊಳಗೆ ಸಫಾರಿ ವೇಳೆ ವನ್ಯ ಪ್ರಾಣಿಗಳಿಂದ ಹಾನಿ ಸಂಭವಿಸಿದರೆ ಅರಣ್ಯ ಇಲಾಖೆಯಿಂದ ಆರ್ಥಿಕ ನೆರವು ಸಿಗಲಿದೆ.