Advertisement

Bandipur; ಕೊಳೆತ ಸ್ಥಿತಿಯಲ್ಲಿ 45 ವರ್ಷದ ಗಂಡಾನೆ ಕಳೇಬರ ಪತ್ತೆ

05:46 PM Dec 07, 2023 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ಕೊಳೆತ ಸ್ಥಿತಿಯಲ್ಲಿ ಗಂಡಾನೆಯೊಂದರ ಕಳೇಬರ ಪತ್ತೆಯಾಗಿರುವ ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ನಾಗಣಾಪುರ ಬ್ಲಾಕ್-02 ಗಸ್ತಿನ ಹುಣಸೆತಾಳ ಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

Advertisement

ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಗಂಡಾನೆಗೆ ಸುಮಾರು 40 ರಿಂದ 45 ವರ್ಷ ವಯಸ್ಸಾಗಿದೆ. ಸತ್ತ ಆನೆಯಿಂದ 02 ದಂತಗಳನ್ನು ಬೇರ್ಪಡಿಸಿ ಇಲಾಖೆ ವಶ ಪಡಿಸಿಕೊಂಡಿದೆ. ನಂತರ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿಂದ್ರ ಸೂಚನೆ ಮೇರೆಗೆ ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸೀಂ ಆನೆಯ ಮರಣೋತ್ತರ ಪರೀಕ್ಷೆ ನಡೆಸಿ, ನಿಯಮಾನುಸಾರ ಕಳೇಬರವನ್ನು ಅರಣ್ಯ ಪ್ರದೇಶದಲ್ಲೆ ಬಿಡಲಾಯಿತು. ಕಾಡಾನೆಯು ಸ್ವಾಭಾವಿಕವಾಗಿ ಮೃತಪಟ್ಟಿರುವುದಾಗಿ ಅರಣ್ಯಾಧಿಕಾರಿಗಳು ದೃಢಪಟ್ಟಿಸಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮತ್ತು ಸಿಬ್ಬಂದಿಗಳು ಗಸ್ತು ನಡೆಸುತ್ತಿದ್ದ ವೇಳೆ ಕೊಳೆತೆ ವಾಸನೆ ಬಂದ ಕಾರಣ ಸುತ್ತಮುತ್ತಲಿನ ಪ್ರದೇಶದಲ್ಲಿ ಸಿಬ್ಬಂದಿಗಳು ಹಾಗೂ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲಿಸಿದಾಗ ಆನೆಯ ಕಳೇಬರ ಕೊಳೆತ ಸ್ಥಿತಿಯಲ್ಲಿರುವುದು ಖಚಿತವಾಗಿದೆ.

ಈ ಸಂದರ್ಭದಲ್ಲಿ ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್‍ಕುಮಾರ್, ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ, ಓಂಕಾರ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಕೆ.ಪಿ.ಸತೀಶ್ ಕುಮಾರ್, ಉಪ ವಲಯ ಅರಣ್ಯಾಧಿಕಾರಿ ಅಮರ್ ಕೆ.ಪಿ, ಗಸ್ತು ವನಪಾಲಕ ಸಂತೋಷ ಬಿ, ಇಲಾಖಾ ಪಶುವೈಧ್ಯಾಧಿಕಾರಿ ಡಾ.ಮಿರ್ಜಾ ವಾಸೀಂ, ಸರ್ಕಾರೇತರ ಸಂಸ್ಥೆ ಸದಸ್ಯ ರಘುರಾಂ ಸೇರಿದಂತೆ ಅರಣ್ಯ ಸಿಬ್ಬಂದಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next