ಮಾಡುವ ಕೇಂದ್ರದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ ಎಂದು ಅರಣ್ಯ ಸಚಿವ ಶಂಕರ್ ತಿಳಿಸಿದ್ದಾರೆ.
Advertisement
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ಕಾರಿಡಾರ್ ನಿರ್ಮಾಣಕ್ಕೆ 4,600 ಕೋಟಿ ರೂ.ವೆಚ್ಚದಲ್ಲಿಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿತ್ತು. ಆದರೆ,ಕಾರಿಡಾರ್ ನಿರ್ಮಾಣದಿಂದ ಕಾಡು ಪ್ರಾಣಿಗಳಿಗೆ ತೊಂದ
ರೆಯಾಗುತ್ತದೆ ಎನ್ನುವ ಮಾತುಗಳು ಕೇಳಿ ಬಂದಿದ್ದರಿಂದ ಪರಿಸರ ತಜ್ಞರು ವಿರೋಧ ವ್ಯಕ್ತಪಡಿಸಿದರು. ಹೀಗಾಗಿ,
ಮುಖ್ಯಮಂತ್ರಿ ಕುಮಾರಸ್ವಾಮಿ ಈ ಪ್ರಸ್ತಾಪವನ್ನು ಕೈ ಬಿಟ್ಟಿದ್ದಾರೆ ಎಂದು ಹೇಳಿದರು. ಇದೇ ವೇಳೆ, ಸಕಲೇಶಪುರ
ಅರಣ್ಯ ಪ್ರದೇಶದಲ್ಲಿ ಆನೆ ಕಾರಿಡಾರ್ ಮಾಡುವ ಬಗ್ಗೆ ಪರ ವಿರೋಧ ಮಾತುಗಳು ಕೇಳಿ ಬಂದಿರುವುದರಿಂದ ಈ ಬಗ್ಗೆ
ಇನ್ನೂ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.