Advertisement

Bandipur: ವಿದ್ಯುತ್ ಸ್ಪರ್ಶದಿಂದ ಹೆಣ್ಣು ಚಿರತೆ ಸಾವು

06:03 PM Jun 22, 2024 | Team Udayavani |

ಗುಂಡ್ಲುಪೇಟೆ(ಚಾಮರಾಜನಗರ): ವಿದ್ಯುತ್ ಸ್ಪರ್ಶದಿಂದ ಸುಮಾರು 2ರಿಂದ 3 ವರ್ಷದ ಹೆಣ್ಣು ಚಿರತೆಯೊಂದು ಮೃತಪಟ್ಟಿರುವ ಘಟನೆ ಬಂಡೀಪುರ ಅಭಯಾರಣ್ಯದ ಗುಂಡ್ಲುಪೇಟೆ ಬಫರ್ ಜೋನ್ ವ್ಯಾಪ್ತಿಯ ತಾಲೂಕಿನ ನೇನೆಕಟ್ಟೆ ಗ್ರಾಮದಲ್ಲಿ ಶನಿವಾರ ನಡೆದಿದೆ.

Advertisement

ತಾಲೂಕಿನ ನೇನೆಕಟ್ಟೆ ಗ್ರಾಮದ ರೈತರೊಬ್ಬರ ಜಮೀನಿನ ಬೇವಿನ ಮರದ ಮೇಲೆ ಚಿರತೆ ಏರಿದೆ. ನಂತರ ಕೆಳಗೆ ಇಳಿಯುವ ಬರದಲ್ಲಿ ಪಂಪ್ ಸೆಟ್ ಗೆ ಸಂಪರ್ಕ ಕಲ್ಪಿಸಿದ್ದ ವಿದ್ಯುತ್ ಲೈನ್ ಮೇಲೆ ಜಿಗಿದಿದೆ. ತಂತಿಯು ಮರದ ಮಧ್ಯಭಾಗದಲ್ಲಿ ಹಾದು ಹೋಗಿದ್ದ ಕಾರಣ ವಿದ್ಯುತ್ ಪ್ರವಹಿಸಿ ಚಿರತೆ ಸಾವನ್ನಪ್ಪಿದೆ ಎಂದು ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚಿರತೆ ಸಾವನ್ನಪ್ಪಿರುವ ಮಾಹಿತಿಯನ್ನು ಸ್ಥಳೀಯ ರೈತರು ಅರಣ್ಯಾಧಿಕಾರಿಗಳಿಗೆ ತಿಳಿಸಿದ ಕೂಡಲೇ ಉಪ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಚಿರತೆ ಮೃತಪಟ್ಟಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ.

ನಂತರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನಿರ್ದೇಶನದ ಮೇರೆಗೆ ಇಲಾಖೆ ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸೀಂ ಮರಣೋತ್ತರ ಶವ ಪರೀಕ್ಷೆ ನಡೆಸಿ, ಚಿರತೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವುದಾಗಿ ಖಚಿತ ಪಡಿಸಿದ್ದಾರೆ.

ತದ ನಂತರ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ನವದೆಹಲಿ ನೀಡಿರುವ ಮಾರ್ಗಸೂಚಿಗಳನ್ವಯ ಚಿರತೆಯ ಕಳೇಬರಹವನ್ನು ನಿಯಮಾನುಸಾರ ಅರಣ್ಯ ಪ್ರದೇಶದಲ್ಲಿ ಸುಡಲಾಗಿಯಿತು ಎಂದು ಬಂಡೀಪುರ ಹುಲಿ ಅರಣ್ಯಾಧಿಕಾರಿ ಎಸ್. ಪ್ರಭಾಕರನ್ ತಿಳಿಸಿದರು.

Advertisement

ಈ ಸಂದರ್ಭದಲ್ಲಿ ಗುಂಡ್ಲುಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ, ವಲಯ ಅರಣ್ಯಾಧಿಕಾರಿ ಮಲ್ಲೇಶ್, ವನ್ಯಜೀವಿ ಪರಿಪಾಲಕ ನಂಜುಂಡ ರಾಜೇಅರಸ್, ಉಪ ವಲಯ ಅರಣ್ಯಾಧಿಕಾರಿ ಜಿ.ಪಿ.ಭರತ್, ಗಸ್ತು ವನಪಾಲಕ ಪರಸಪ್ಪ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next