ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕೆಕ್ಕನಹಳ್ಳಿ ಅರಣ್ಯದೊಳಗೆ ಗಂಡು ಮರಿಯಾನೆ ಮೃತಪಟ್ಟಿದೆ.
ಮೃತ ಮರಿಯಾನೆಗೆ ಒಂದು ವರ್ಷ ವಯಸ್ಸಾಗಿದ್ದು, ಕಾಡಿನಿಂದ ಆಹಾರ ಅರಸಿ ತಾಯಿಯೊಂದಿಗೆ ಬಂದ ಆನೆ ತಾಯಿಯಿಂದ ಬೇರ್ಪಟ್ಟು ಸರಿಯಾದ ಸಮಯಕ್ಕೆ ಆಹಾರ ಸಿಗದೆ ನಿತ್ರಾಣಗೊಂಡು ಎರಡು ದಿನಗಳ ಹಿಂದೆ ಸಾವನ್ನಪ್ಪಿದೆ ಎಂದು ಶಂಕಿಸಲಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇನ್ನೂ ಅರಣ್ಯ ರಕ್ಷಕರು ಬೀಟ್ ಮಾಡುವ ವೇಳೆ ಆನೆ ಸಾವನ್ನಪ್ಪಿರುವುದು ಗಮನಕ್ಕೆ ಬಂದಿದ್ದು, ನಂತರ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತದ ನಂತರ ಎಸಿಎಫ್ ನವೀನ್ ಕುಮಾರ್ ನೇತೃತ್ವದಲ್ಲಿ ತೆರಳಿ ಪರಿಶೀಲನೆ ನಡೆಸಿ, ಪಶು ವೈದ್ಯಾಧಿಕಾರಿ ಡಾ.ಮೋಹನ್ ಕುಮಾರ್ ಮಾರ್ಗದರ್ಶನದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಇನ್ನೂ ಆನೆಯ ಅಂಗಾಗ ಮಾದರಿಯನ್ನು ವಿಧಿ ವಿಜ್ಞಾನ ಪ್ರಾಯೋಗಾಲಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ನಂತರವಷ್ಟೇ ಆನೆ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಪಶು ವೈದ್ಯಾಧಿಕಾರಿ ಡಾ.ಮೋಹನ್ ಕುಮಾರ್ ಮಾಹಿತಿ ನೀಡಿದ್ದಾರೆ.