Advertisement
ಇದನ್ನೂ ಓದಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 3.92ಲಕ್ಷ ಕೋವಿಡ್ ಪ್ರಕರಣ ಪತ್ತೆ, 2.15 ಲಕ್ಷ ಸಾವು
ವಿಧಾನಸಭೆಯಲ್ಲಿ ಅಧಿಕಾರದ ಗದ್ದುಗೆ ಏರಲು 148 ಸ್ಥಾನಗಳ ಅಗತ್ಯವಿದೆ. ತಮಿಳುನಾಡಿನಲ್ಲಿ ದಿ.ಜಯಲಲಿತಾ ನೇತೃತ್ವದ ಎಐಎಡಿಎಂಕೆ ಸತತ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ್ದು, 2021ರ ವಿಧಾನಸಭಾ ಚುನಾವಣೆಯಲ್ಲಿ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ 139 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಒಂದು ದಶಕದ ಬಳಿಕ ಡಿಎಂಕೆ (ಸೂರ್ಯೋದಯ ಪಕ್ಷದ ಚಿಹ್ನೆ) ಮತ್ತೆ ಅಧಿಕಾರದ ಗದ್ದುಗೆ ಏರುವತ್ತ ದಾಪುಗಾಲಿಟ್ಟಂತಾಗಿದೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಅಧಿಕಾರಕ್ಕೇರಲು 118 ಸ್ಥಾನಗಳ ಅಗತ್ಯವಿದೆ.
Related Articles
Advertisement
ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ 82 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಕ್ಷ 42 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 126 ಸದಸ್ಯ ಬಲದ ಅಸ್ಸಾಂನಲ್ಲಿ ಆಡಳಿತ ನಡೆಸಲು 64 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಾಗಿದೆ.
ಪುದುಚೇರಿಯಲ್ಲಿ ಎನ್ ಡಿಎ ಮೈತ್ರಿಕೂಟ(ಎನ್ ಆರ್ ಸಿ) 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 30 ಸದಸ್ಯಬಲದ ಪುದುಚೇರಿಯಲ್ಲಿ ಅಧಿಕಾರದ ಗದ್ದುಗೆ ಏರಲು 16 ಸ್ಥಾನಗಳಲ್ಲಿ ಜಯ ಸಾಧಿಸಬೇಕಾಗಿದೆ. ಪಂಚರಾಜ್ಯಗಳ ಸ್ಪಷ್ಟ ಫಲಿತಾಂಶ ಮಧ್ಯಾಹ್ನ 2ಗಂಟೆ ಹೊತ್ತಿಗೆ ಸ್ಪಷ್ಟವಾಗಿ ಹೊರಬೀಳಬಹುದು ಎಂದು ನಿರೀಕ್ಷಿಸಲಾಗಿದೆ.