ಬೆಂಗಳೂರು: ಚಾಮರಾಜ ಪೇಟೆಯ ಆನಂದಪುರ ಸಮೀಪದ ವಿನಾಯಕ ಚಿತ್ರಮಂದಿರ ಬಳಿಯ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ 8 ಶೀಟಿನ ಮನೆಗಳಿಗೆ ಬೆಂಕಿಗಾಹುತಿಯಾಗಿ ಹಾನಿಯಾಗಿದೆ. ಓರ್ವ ವ್ಯಕ್ತಿ ಗಾಯಗೊಂಡಿದ್ದಾನೆ.
2 ಸಿಲಿಂಡರ್‌ಗಳು ಸ್ಫೋಟಗೊಂಡು ಬೆಂಕಿ ಉಂಟಾಗಿರುವ ಶಂಕೆ ವ್ಯಕ್ತವಾಗಿದೆ. ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಸಾಕೆಟ್ ಬೋರ್ಡ್‌ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತ್ತು. ಮನೆಯಲ್ಲಿದ್ದ ಮಹಿಳೆಯರು ಮನೆಯಿಂದ ಹೊರಗೆ ಓಡಿ ಬಂದು ಸ್ಥಳೀಯರಿಗೆ ಮಾಹಿತಿ ನೀಡಿದರು. ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟದ ಜತೆ ಬೆಂಕಿಯ ಕೆನ್ನಾಲಿಗೆ ಇಡೀ ಶೆಡ್‌ಗಳಿಗೆ ಆವರಿಸಿತ್ತು. ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ತಿಳಿದು ಬಂದಿದೆ.