Advertisement
ಈಗಾಗಲೇ ಎಕ್ಸ್‌ಪ್ರೆಸ್ ಹೈವೇಯಲ್ಲಿನ ಅವ್ಯವಸ್ಥೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಇಲಾಖೆ ವರದಿ ನೀಡಿ, 54 ಅಂಶಗಳನ್ನು ಸರಿಪಡಿಸುವಂತೆ ಸೂಚನೆ ನೀಡಿತ್ತು. ಪಿಡಬ್ಲೂಡಿ ಸಚಿವ ಸತೀಶ್ ಜಾರಕೀಹೋಳಿ ಸಹ ಸೇಫ್ಟಿ ಆಡೀಟ್ ನಡೆಸುವುದಾಗಿ ತಿಳಿಸಿದ್ದರು. ಇನ್ನು ಹೈವೇಯಲ್ಲಿ ಎದುರಾಗಿರುವ ಸಣ್ಣಪುಟ್ಟ ಲೋಪದೋಷಗಳನ್ನು ಸರಿಪಡಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.
Related Articles
Advertisement
ಪ್ರಯಾಣಿಕರಲ್ಲಿ ಜಾಗೃತಿ: ಹೆದ್ದಾರಿಯಲ್ಲಿ ಸಂಭವಿಸು ತ್ತಿರುವ ಅಪಘಾತಗಳ ನಿಯಂತ್ರಣದ ಹಿನ್ನೆಲೆಯಲ್ಲಿ ಚಾಲಕರಿಗೆ ಟೋಲ್‌ಪ್ಲಾಜಾ ಬಳಿಯೇ ಅರಿವು ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕಣ್ಕಿಣಕಿ ಬಳಿ ಇರುವ ಟೋಲ್‌ಪ್ಲಾಜಾ ಬಳಿ ನಿಯೋಜಿಸಿ ಚಾಲಕರಿಗೆ ಕರಪತ್ರ ಹಂಚುವ ಮೂಲಕ ಹಾಗೂ ಸುರಕ್ಷತೆಯ ಬಗ್ಗೆ ತಿಳಿಹೇಳುವ ಮೂಲಕ ಅರಿವು ಮೂಡಿಸಲಾಗುತ್ತಿದೆ. ಬೆಂ-ಮೈ ದಶಪಥ ರಸ್ತೆ ಅವ್ಯವಸ್ಥೆಗೆ ಸಂಬಂಧಿ ಸಿದಂತೆ ಉದಯವಾಣಿ ಸರಣಿ ಲೇಖನ ಪ್ರಕಟಿಸುವ ಮೂಲಕ ಸಂಬಂಧಿಸಿದವರನ್ನು ಎಚ್ಚರಿಸುವ ಕೆಲಸ ಮಾಡಿತ್ತು. ವರದಿ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳು ಹೆದ್ದಾರಿ ಸಮಸ್ಯೆಯ ಬಗ್ಗೆ ಗಂಭೀರವಾಗಿ ಚಿಂತಿಸಿ ಪರಿಹಾರ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಹೆದ್ದಾರಿ ಅಧಿಕಾರಿಗಳ ಪ್ರತ್ಯೇಕ ಸಭೆ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳಿಗೆ ಸಂಬಂಧಿಸಿದಂತೆ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ(ಆರ್‌ಒ) ಯೋಜನಾ ನಿರ್ದೇಶಕರು ಸೇರಿದಂತೆ ವಿವಿಧ ಅಧಿಕಾರಿಗಳ ಸಭೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮುಂದಿನ ಒಂದು ವಾರದಲ್ಲಿ ಕರೆದಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳು, ಹೆದ್ದಾರಿ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಸೇರಿದಂತೆ ಪ್ರಮುಖ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಎಕ್ಸ್‌ಪ್ರೆಸ್ ಹೈವೇಯಲ್ಲಿ ಕಾಮಗಾರಿ ವೈಫಲ್ಯದ ಬಗ್ಗೆ ಚರ್ಚಿಸಿ ಸೂಕ್ತ ಕ್ರಮಕ್ಕೆ ನಿರ್ಧಾರ ತೆಗೆದುಕೊಳ್ಳಲಿರುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.