ವಿಟ್ಲ: ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ರಾಮನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯ ಗುಡೆಮಾರನಹಳ್ಳಿ ಎಂಬಲ್ಲಿ ರವಿವಾರ ಮುಂಜಾನೆ ನಡೆದಿದೆ.
ಮೃತರನ್ನು ಚಿಕ್ಕಮಗಳೂರು ಕಡೂರು ನಿವಾಸಿ ಟಿಪ್ಪು(40) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಖಾಸಗಿ ಬಸ್ಸು ಶನಿವಾರ ರಾತ್ರಿ ವಿಟ್ಲದಿಂದ ಪ್ರಯಾಣಿಕರನ್ನು ಕೂರಿಸಿಕೊಂಡು ಬೆಂಗಳೂರಿಗೆ ಹೊರಟಿತ್ತು. ರವಿವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಗುಡೆಮಾರನಹಳ್ಳಿ ಎಂಬಲ್ಲಿ ತಿರುವಿನಲ್ಲಿ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವರಷ್ಟೇ ಅಪಾಯದಿಂದ ಪಾರಾಗಿದ್ದು, ಇವರನ್ನು ಪರ್ಯಾಯ ವಾಹನಗಳಲ್ಲಿ ಬೆಂಗಳೂರಿಗೆ ಕಳುಹಿಸಲಾಗಿದ್ದು. ಗಾಯಾಳುಗಳು ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ :ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ: ಡಿಕೆಶಿ
ಈ ಬಗ್ಗೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.