Advertisement
ಈ ಬೆನ್ನಲ್ಲೇ ಬೆಂಗಳೂರಿನ ಎನ್‌ಐಎ ಅಧಿಕಾರಿಗಳು ಸಿಸಿಬಿ ಪೊಲೀಸರು ಬಂಧಿಸಿರುವ ಐವರು ಶಂಕಿತರ ಪ್ರಾಥಮಿಕ ವಿಚಾರಣೆ ನಡೆಸಿ ಇಡೀ ವರದಿಯನ್ನು ದೆಹಲಿಯಲ್ಲಿರುವ ಕೇಂದ್ರ ಕಚೇರಿಗೆ ರವಾನೆ ಮಾಡಿದ್ದಾರೆ.
Related Articles
Advertisement
ಈ ವರದಿಯನ್ನು ಎನ್‌ಐಎ ಕೇಂದ್ರ ಕಚೇರಿಯ ಹಿರಿಯ ಅಧಿಕಾರಿಗಳು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಿದ್ದು, ಆ ಬಳಿಕ ಸಚಿವಾಲಯದ ಸೂಚನೆ ಮೇರೆಗೆ ತನಿಖೆ ಆರಂಭಿಸಲಿದೆ. ಇನ್ನು ಸಿಸಿಬಿ ಪೊಲೀಸರು ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ(ಯುಎಪಿಎ) ಅಡಿ ಪ್ರಕರಣ ದಾಖಲಿಸಿಕೊಂಡಿರುವುದರಿಂದ ಎನ್‌ಐಎ ಮುಂದಿನ ತನಿಖೆ ನಡೆಸಲಿದೆ. ಈ ಮಧ್ಯೆ ಸಿಸಿಬಿಯ ಹಿರಿಯ ಅಧಿಕಾರಿಗಳು ದೆಹಲಿಗೆ ತೆರಳಿದ್ದು, ಪರಾರಿಯಾಗಿರುವ ಸಲ್ಮಾನ್ ಹಾಗೂ ಜುನೈದ್ ಪತ್ತೆಗಾಗಿ ಕೇಂದ್ರದ ತನಿಖಾ ಸಂಸ್ಥೆಗಳ ನೆರವು ಕೋರಿದ್ದಾರೆ. ನಾಜೀರ್‌ನಿಂದ ಪ್ರಚೋದನೆಗೊಂಡ ಉಗ್ರ ಸಂಘಟನೆ ಸೇರಿದ ಶಂಕಿತರು, ಶಸ್ತ್ರಾಸ್ತ್ರಗಳನ್ನು ಪಡೆಯುವಾಗ ಆಣೆ ಪ್ರಮಾಣ ಮಾಡಿದ್ದರು ಎಂಬುದು ತಿಳಿದು ಬಂದಿದೆ.
ಆತನ ಅಣತಿಯಿಂದ ಗ್ರೇನೇಡ್ ಮತ್ತು ಶಸ್ತ್ರಾಸ್ತ್ರಗಳನ್ನು ಪಡೆಯುವ ಮೊದಲು ನಾಜೀರ್ ಮತ್ತು ಜುನೈದ್ ಬಂಧಿತ ಐವರು ಶಂಕಿತರಿಂದ ಈ ವಿಚಾರವನ್ನು ಯಾರೊಂದಿಗೂ ಹೇಳಿಕೊಳ್ಳುವುದಿಲ್ಲ. ತಾವು ಕಳುಹಿಸಿದ ಪಾರ್ಸ್‌ಲ್ ಅನ್ನು ಹೇಳುವವರೆಗೂ ತೆರೆಯುವುದಿಲ್ಲ ಎಂದು ಆಣೆ ಮಾಡಿಸಿಕೊಂಡಿದ್ದರು ಎಂಬುದು ಗೊತ್ತಾಗಿದೆ. ಅಂದರೆ ಕಸಮ್ ಎ ಬಾತ್ ಕಿಸ್ಕೋಬಿ ನಹಿ ಬೋಲ್ತಾ ಎಂದು ಆಣೆ ಮಾಡಿಸಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ಇನ್ನು ಪೋಕ್ಸೋ ಪ್ರಕರಣದ ಆರೋಪಿ ಸಲ್ಮಾನ್ ಎಂಬಾತ ನಾಜೀರ್ ಸೂಚನೆ ಮೇರೆಗೆ ಜಾಹೀದ್ ತಬ್ರೇಜ್‌ಗೆ ಉತ್ತರ ಪ್ರದೇಶ ಮೂಲದ ವ್ಯಕ್ತಿಯಿಂದ ಗ್ರೇನೇಡ್ ತಂದು ಕೊಟ್ಟಿದ್ದ. ಸದ್ಯ ಸಲ್ಮಾನ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ.